ಬೆಟ್ಟಿಂಗ್‍ನಲ್ಲಿ ಸೋತಿದ್ದಕ್ಕೆ ತಲೆ ಬೋಳಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತ

Public TV
1 Min Read
MP CONGRESS

ಭೋಪಾಲ್: ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗಲ್ಲ ಎಂದು ಬೆಟ್ಟಿಂಗ್ ಕಟ್ಟಿದ್ದ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಸೋತು, ತಲೆ ಬೋಳಿಸಿಕೊಂಡಿದ್ದಾರೆ.

ಮಧ್ಯಪ್ರದೇಶದ ರಾಜ್‍ಗಢ್‍ನ ಕಾಂಗ್ರೆಸ್ ಕಾರ್ಯಕರ್ತ ಬಿ.ಎಲ್.ಸೇನ್ ಎಂಬವರು ಇಂದು ಸಾರ್ವಜನಿಕ ಪ್ರದೇಶದಲ್ಲಿ ಕುಳಿತು ತಲೆ ಬೋಳಿಕೊಂಡಿದ್ದಾರೆ. ಈ ಮೂಲಕ ಚುನಾವಣಾ ಪ್ರಚಾರದಲ್ಲಿ ನೀಡಿದ್ದ ಹೇಳಿಕೆಯಂತೆ ನಡೆದುಕೊಂಡಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿಯಾದರೆ ಬಿಜೆಪಿ ಕಾರ್ಯಕರ್ತರ ತಲೆ ಬೋಳಿಸಿಕೊಳ್ಳಬೇಕು. ನರೇಂದ್ರ ಮೋದಿ ಮತ್ತೆ ಪ್ರಧಾನಿಯಾದರೆ ನಾನು ತಲೆ ಬೋಳಿಸಿಕೊಳ್ಳುತ್ತೇನೆ ಎಂದು ಬಿ.ಎಸ್.ಸೇನ್ ಹೇಳಿದ್ದರು. ನಮ್ಮ ಪಕ್ಷವು ಸೋತಿದೆ. ಹೀಗಾಗಿ ಮಾತಿಗೆ ತಕ್ಕಂತೆ ನಡೆದುಕೊಂಡು ತಲೆ ಬೋಳಿಕೊಂಡಿದ್ದೇನೆ ಎಂದು ಬಿ.ಎಸ್.ಸೇನ್ ತಿಳಿಸಿದ್ದಾರೆ.

ರಾಜ್‍ಗಢ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರೋಡ್‍ಮಾಲ್ ನಗರ್ ಅವರು ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಬಿಜೆಪಿ ಭರ್ಜರಿ ಮತ ಬೇಟೆಯಾಡಿದೆ. ಈ ಮೂಲಕ ರಾಜ್ಯದ 29 ಲೋಕಸಭಾ ಕ್ಷೇತ್ರಗಳ ಪೈಕಿ 28ರಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.

Share This Article