ಭೋಪಾಲ್: ಮಧ್ಯಪ್ರದೇಶದಲ್ಲಿ (Madhya Pradesh) ಮಹಿಳೆಯರು (Women) ಕೈ ಹಿಡಿದ ಪರಿಣಾಮ ಬಿಜೆಪಿ (BJP) ಮತ್ತೆ ಅಧಿಕಾರಕ್ಕೆ ಏರಿದೆ.
ಹೌದು. ಕರ್ನಾಟಕದಲ್ಲಿ ಮಹಿಳೆಯರಿಗೆ ಗೃಹಲಕ್ಷ್ಮಿ ಆರಂಭಿಸಿದ ಬೆನ್ನಲ್ಲೇ ಸಿಎಂ ಶಿವರಾಜ್ ಸಿಂಹ್ ಚೌಹಾಣ್ (CM Shivraj Singh Chouhan) ಲಾಡ್ಲಿ ಬೆಹನಾ (Ladli Behna Yojana) ಹೆಸರಿನ ಯೋಜನೆ ಆರಂಭಿಸಿತ್ತು.
Advertisement
ಕಾಂಗ್ರೆಸ್ (Congress) ಇದು ಚುನಾವಣೆ ಗಿಮಿಕ್ ಎಂದು ಬಣ್ಣಿಸಿದರೆ ಮಧ್ಯಪ್ರದೇಶ ಸರ್ಕಾರ ಘೋಷಣೆ ಮಾತ್ರ ಮಾಡದೇ ಚಾಲನೆ ನೀಡಿತ್ತು. ಬಡ ಮಹಿಳೆಯರಿಗೆ ಪ್ರತಿ ತಿಂಗಳು 1,250 ರೂ. ನೀಡಿದ್ದರೆ ಪಿಎಂ ಉಜ್ವಲಾ ಯೋಜನೆ ಅಡಿ ಸಿಲಿಂಡರ್‌ಗೆ 450 ರೂ. ನೀಡುವುದಾಗಿ ಭರವಸೆ ನೀಡಿತ್ತು. ಇದನ್ನೂ ಓದಿ: Election Results : ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ಭಾರೀ ಮುನ್ನಡೆ
Advertisement
#WATCH | Madhya Pradesh: Union Minister and BJP leader Ashwini Vaishnaw says, "BJP has got a big victory and we were confident about it…Modi ji MP ke mann mein hain aur Modi ji ke mann mein MP hai…" pic.twitter.com/uR44egMD7V
— ANI (@ANI) December 3, 2023
Advertisement
ಕರ್ನಾಟಕ ಚುನಾವಣೆಯಲ್ಲೂ ಮಹಿಳೆಯರು ಪ್ರಧಾನ ಪಾತ್ರ ವಹಿಸಿದ್ದರು. ಇದನ್ನು ಮೊದಲೇ ಗಮನಿಸಿದ್ದ ಮಧ್ಯಪ್ರದೇಶ ಸರ್ಕಾರ ಮಹಿಳಾ ಪರವಾದ ಯೋಜನೆಗಳು ಪ್ರಕಟಿಸಿದ ಪರಿಣಾಮ ಈ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದೆ.
Advertisement
ಮಧ್ಯಾಹ್ನ 12 ಗಂಟೆಯ ಟ್ರೆಂಡ್ ಪ್ರಕಾರ ಮಧ್ಯಪ್ರದೇಶದಲ್ಲಿ ಬಿಜೆಪಿ 157, ಕಾಂಗ್ರೆಸ್ 70, ಇತರರು 6 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
2018ರ ಚುನಾವಣೆಯಲ್ಲಿ ಕಾಂಗ್ರೆಸ್ 114, ಬಿಜೆಪಿ 109, ಬಿಎಸ್‌ಪಿ 2, ಸಮಾಜವಾದಿ ಪಕ್ಷ 1 ಸ್ಥಾನ ಗೆದ್ದುಕೊಂಡರೆ 4 ಮಂದಿ ಪಕ್ಷೇತರ ಅಭ್ಯರ್ಥಿಗಳು ಗೆದ್ದಿದ್ದರು. ಬಿಎಸ್‌ಪಿ, ಎಸ್‌ಪಿ ಹಾಗೂ ಪಕ್ಷೇತರರ ಬೆಂಬಲದಿಂದ ಕಾಂಗ್ರಸ್ ಸರ್ಕಾರ ರಚನೆ ಮಾಡಿತ್ತು. ಕಮಲ್ ನಾಥ್ ಸಿಎಂ ಆಗಿದ್ದರು. ಲೋಕಸಭಾ ಚುನಾವಣೆ ಬಳಿಕ ಆಪರೇಷನ್ ಕಮಲದ ಮೂಲಕ ಬಿಜೆಪಿ ಅಧಿಕಾರ ಹಿಡಿದಿತ್ತು.