ಬಿಪಿ ಹೆಚ್ಚಿಸಿದ್ದ ಎಂಪಿ ರಿಸಲ್ಟ್ ಔಟ್- ಮಧ್ಯಪ್ರದೇಶದಲ್ಲಿ ಮೈತ್ರಿ ಸರ್ಕಾರ!

Public TV
2 Min Read
mp rESULT

– ಕೈ ಹಿಡಿಯಲು ಸೈಕಲ್ ಮೇಲೆ ಏರಿ ಬರುತ್ತಾ ಆನೆ?

ಭೋಪಾಲ್: ರಾಜಕೀಯ ಪಕ್ಷಗಳ ಬಿಪಿ ಹೆಚ್ಚಿಸಿದ್ದ ಮಧ್ಯಪ್ರದೇಶದ ಚುನಾವಣಾ ಫಲಿತಾಂಶ ಹೊರಬಂದಿದ್ದು, ಕಾಂಗ್ರೆಸ್ ಅತಿದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ್ದು, ಯಾರಿಗೂ ಬಹುಮತ ಸಿಕ್ಕಿಲ್ಲ.

ಕಾಂಗ್ರೆಸ್ ಬಹುಮತಕ್ಕೆ ಎರಡು ಸೀಟ್ ಕೊರತೆಯನ್ನು ಅನುಭವಿಸಿದೆ. ಕಾಂಗ್ರೆಸ್ 114, ಬಿಜೆಪಿ 109, ಬಿಎಸ್‍ಪಿ 2, ಎಸ್‍ಪಿ 1, ಪಕ್ಷೇತರರು 4 ಅಭ್ಯರ್ಥಿಗಳು ಗೆಲುವನ್ನು ಸಾಧಿಸಿದ್ದಾರೆ. 230 ಸದಸ್ಯ ಬಲದ ವಿಧಾನಸಭೆಯಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯಲು 116 ಬಹುಮತ ಬೇಕಿದೆ. ಬಿಎಸ್‍ಪಿ ಮತ್ತು ಎಸ್‍ಪಿ ಎರಡು ಪಕ್ಷಗಳು ಕಾಂಗ್ರೆಸ್ ಗೆ ಬೆಂಬಲ ಸೂಚಿಸುವ ಸಾಧ್ಯತೆಗಳು ಹೆಚ್ಚಿವೆ.

ಒಟ್ಟಿನಲ್ಲಿ ಕ್ಷಣಕ್ಷಣಕ್ಕೂ ಬದಲಾದ ಫಲಿತಾಂಶ, ದೇಶದ ರಾಜಕೀಯ ಇತಿಹಾಸದಲ್ಲಿ ಹಿಂದೆಂದೂ ಕಾಣದ ಪೈಪೋಟಿ, ನಿರೀಕ್ಷಿಸದ ಅಚ್ಚರಿ ಬೆಳವಣಿಗೆಗೆ ಮಧ್ಯಪ್ರದೇಶ ಮತ ಎಣಿಕೆ ಸಾಕ್ಷಿಯಾಗಿತ್ತು. ಸದ್ಯ ಆಪರೇಷನ್ ಕಮಲ ಸದ್ದು ಕೇಳಿಬಂದಿದ್ದು, ಕೇಂದ್ರ ಸಚಿವ ತೋಮರ್ ಭೋಪಾಲ್‍ನಲ್ಲಿ ಬಿಡಾರ ಹೂಡಿದ್ದಾರೆ. ಸರ್ಕಾರ ರಚನೆಗೆ ರಾಜಕೀಯ ತಂತ್ರಗಾರಿಕೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಪಕ್ಷೇತರ ಮತ್ತು ಎಸ್‍ಪಿ, ಬಿಎಸ್ ಪಿ ಶಾಸಕರನ್ನು ಸೆಳೆಯಲು ಬಿಜೆಪಿ ತೆರೆಮರೆಯಲ್ಲಿ ಕೆಲಸ ಮಾಡಲಾಗುತ್ತಿದೆ ಎನ್ನಲಾಗಿದೆ.

ಮತ ಎಣಿಕೆ ವಿಳಂಬಕ್ಕೆ ಕಾರಣ:
ಆಯಾ ಸುತ್ತಿನ ಮತ ಎಣಿಕೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಪ್ರತಿ ಅಭ್ಯರ್ಥಿಯಿಂದ ಮತಗಳ ಪ್ರಮಾಣವನ್ನು ಲಿಖಿತವಾಗಿ ದೃಢೀಕರಿಸುವ ಪ್ರಕ್ರಿಯೆಯನ್ನು ಕಡ್ಡಾಯಗೊಳಿಸಿದ್ದರಿಂದ ಮಧ್ಯಪ್ರದೇಶ ಹಾಗೂ ರಾಜಸ್ಥಾನಗಳಲ್ಲಿ ಮತ ಎಣಿಕೆ ಪ್ರಕ್ರಿಯೆ ವಿಳಂಬವಾಯಿತು. ಆಯಾ ಜಿಲ್ಲಾ ಕೇಂದ್ರಗಳಲ್ಲಿ ನಡೆದಿರುವ ಮತ ಎಣಿಕೆ ಪ್ರಕ್ರಿಯೆಯಲ್ಲಿ ಪ್ರತಿ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳು, ಪ್ರತಿ ಸುತ್ತಿನಲ್ಲಿ ತಾವು ಪಡೆದ ಮತಗಳನ್ನು ದೃಢೀಕರಿಸುವ ಸಂಬಂಧ ಅರ್ಜಿ ನಮೂನೆ ಭರ್ತಿ ಮಾಡಿ, ಸಹಿ ಮಾಡಿ ಕೊಡಬೇಕಿತ್ತು. ಈ ಪ್ರಕ್ರಿಯೆಯಿಂದ ಫಲಿತಾಂಶ ವಿಳಂಬವಾಯ್ತು. ಅಲ್ಲದೆ, ಮಧ್ಯಪ್ರದೇಶದ 230 ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಚುನಾವಣೆ ಪೈಕಿ ಶೇ.15 ರಷ್ಟು ಮತಗಟ್ಟೆಗಳಲ್ಲಿ ಬಳಸಿರುವ ಇವಿಎಂ ಯಂತ್ರಗಳೊಂದಿಗೆ ಅಳವಡಿಸಿದ್ದ ವಿವಿ ಪ್ಯಾಟ್‍ಗಳ ಮತಗಳನ್ನು ತಾಳೆ ಹಾಕುವುದನ್ನು ಕಡ್ಡಾಯಗೊಳಿಸಿದ್ದು ಮತ ಎಣಿಕೆಯ ವಿಳಂಬಕ್ಕೆ ಮತ್ತೊಂದು ಕಾರಣವಾಗಿತ್ತು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *