– ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯವಾಗಿದ್ದ ಸ್ನೇಹಿತನಿಂದಲೇ ಕೃತ್ಯ
ಭೋಪಾಲ್: ಮಧ್ಯಪ್ರದೇಶದ (Madhya Pradesh) ಗ್ವಾಲಿಯರ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ಚಲಿಸುತ್ತಿದ್ದ ಕಾರಿನಲ್ಲೇ (Moving Car) 13 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಘಟನೆ ಸಂಬಂಧಿಸಿದ ಮೂವರು ಆರೋಪಿಗಳ ಪೈಕಿ ಇಬ್ಬರನ್ನು ಬಂಧಿಸಿದ್ದು, ಮತ್ತೊಬ್ಬ ಆರೋಪಿಗಾಗಿ ಹುಡುಕಾಟ ನಡೆದಿದೆ ಎಂದು ಪೊಲೀಸ್ (Gwalior Police) ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಮೀಸಲಾತಿ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ 105 ಮಂದಿ ಸಾವು – 300ಕ್ಕೂ ಹೆಚ್ಚು ಭಾರತೀಯರು ತವರಿಗೆ!
ಇನ್‌ಸ್ಟಾ ಸ್ನೇಹಿತನಿಂದಲೇ ಕೃತ್ಯ:
9ನೇ ತರಗತಿ ಓದುತ್ತಿರುವ ಬಾಲಕಿಗೆ ಸೋಷಿಯಲ್ ಮೀಡಿಯಾ ಇನ್‌ಸ್ಟಾಗ್ರಾಮ್‌ನಲ್ಲಿ ವ್ಯಕ್ತಿಯೊಬ್ಬ ಪರಿಚಯವಾಗಿದ್ದ. ಇಬ್ಬರೂ ಪರಸ್ಪರ ಚಾಟಿಂಗ್ ಮಾಡುತ್ತಿದ್ದರು. ಜೂನ್ 1ರಂದು ಇಬ್ಬರು ವ್ಯಕ್ತಿಗಳೊಂದಿಗೆ ಆರೋಪಿ ಬಾಲಕಿಯನ್ನ ಭೇಟಿಯಾಗಿದ್ದ. ಆಕೆಯ ಹಳ್ಳಿಯಲ್ಲೇ ಭೇಟಿಯಾಗಿ ಬಾಲಕಿಯನ್ನು ತನ್ನೊಂದಿಗೆ ಲಾಂಗ್ ಡ್ರೈವ್ ಬರುವಂತೆ ಕೇಳಿದ್ದ. ಬಾಲಕಿ ಬರಲಿಲ್ಲವೆಂದರೂ ಪದೇ ಪದೇ ಪೀಡಿಸಿದ್ದ. ಇದರಿಂದ ಬಾಲಕಿ ಆತನೊಂದಿಗೆ ಕಾರಿನಲ್ಲಿ ಹೊರಟಿದ್ದಳು. ಇದನ್ನೂ ಓದಿ: 1.6 ಕೋಟಿ ಮೌಲ್ಯದ 3 ಮನೆ, 3 ಕೋಟಿಯ 2 ಶೆಡ್ – ಮುದ್ದುಕುಮಾರ್ ಆಸ್ತಿ ಕಂಡು ಅಧಿಕಾರಿಗಳೇ ಸುಸ್ತು!
ಕಾರಿನಲ್ಲಿ ಹೋಗುತ್ತಿದ್ದಾಗ ಮೂವರ ಪೈಕಿ ಓರ್ವ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಮತ್ತೊಬ್ಬ ಕಾರು ಓಡಿಸುತ್ತಿದ್ದಾಗ, ಇನ್ನೊಬ್ಬ ಕೃತ್ಯವನ್ನು ವೀಡಿಯೋ ಚಿತ್ರೀಕರಣ ಮಾಡಿದ್ದಾನೆ. ಇಷ್ಟಕ್ಕೆ ಸುಮನ್ನಾಗದ ಕಾಮುಕ ಆಕೆಯನ್ನು ಪದೇ ಪದೇ ಭೇಟಿಯಾಗಲು ಪೀಡಿಸಿದ್ದಾನೆ. ಬರದಿದ್ದರೆ, ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿಬಿಡುವುದಾಗಿ ಬೆದರಿಕೆಯನ್ನೂ ಹಾಕಿದ್ದಾನೆ. ಕೊನೆಗೆ ಬೇಸತ್ತು ಆಕೆ ಆರೋಪಿಗಳೊಂದಿಗೆ ಹೊರಡಲು ನಿರಾಕರಿಸಿದ ನಂತರ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಬಳಿಕ ಈ ವಿಷಯ ಕುಟುಂಬಸ್ಥರಿಗೆ ತಿಳಿದು ಬಾಲಕಿಯನ್ನು ವಿಚಾರಿಸಿದ್ದಾಗ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸದ್ಯ ಪ್ರಕರಣದ ಮೂವರು ಆರೋಪಿಗಳ ಪೈಕಿ ಇಬ್ಬರನ್ನು ಬಂಧಿಸಲಾಗಿದ್ದು, 3ನೇ ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ. ಅಪರಾಧಕ್ಕೆ ಬಳಸಿದ ಮೊಬೈಲ್ ಫೋನ್ ಮತ್ತು ಕಾರನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ನಿರಂಜನ್ ಶರ್ಮಾ ತಿಳಿಸಿದ್ದಾರೆ. ಇದನ್ನೂ ಓದಿ: ಮದ್ಯದ ಅಮಲಿನಲ್ಲಿ ಹಳಿ ಮೇಲೆ ಮಲಗಿದ ಯುವಕರು; ರೈಲು ಹರಿದು ಮೂವರ ದುರ್ಮರಣ