Connect with us

Crime

4 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಗೈದು ಕೊಲೆ ಮಾಡಿ ಬಾವಿಗೆ ಎಸೆದ್ರು!

Published

on

– ಆರೋಪಿಗಳನ್ನು ಹುಡುಕಿಕೊಟ್ಟವರಿಗೆ 10 ಸಾವಿರ ನಗದು ಬಹುಮಾನ

ಭೂಪಾಲ್: ಕೊರೊನಾ ಮಹಾಮಾರಿಯ ಜಂಜಾಟದ ನಡುವೆಯೂ ಕಾಮುಕರು ತಮ್ಮ ಅಟ್ಟಹಾಸ ಮೆರೆಯುತ್ತಿದ್ದಾರೆ. ಇದಕ್ಕೆ ಸಾಕ್ಷಿ ಮಧ್ಯಪ್ರದೇಶದಲ್ಲಿ ನಡೆದ ಘಟನೆ. 4 ವರ್ಷದ ಬಾಲಕಿಯ ಮೇಲೆ ನೀಚರು ಅತ್ಯಾಚಾರವೆಸಗಿ ತಮ್ಮ ಕಾಮತೃಷೆ ತೀರಿಸಿಕೊಂಡ ಬಳಿಕ ಆಕೆಯನ್ನು ಬರ್ಬರವಾಗಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ.

ಈ ಘಟನೆ ಮೇ 28 ಹಾಗೂ 29ರ ಮಧ್ಯೆ ನಡೆದಿದೆ. ಮೇ 29ರಂದು ಬಾಲಕಿಯ ಮೃತದೇಹ ಬಾವಿಯೊಂದರಲ್ಲಿ ಪತ್ತೆಯಾಗಿದೆ. ಶವವನ್ನು ಬಾವಿಯಿಂದ ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಿದಾಗ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವುದು ವರದಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯನ್ನು ಗಂಭೀರವಾಗಿ ಪರಿಗಣಿರುವ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಅಲ್ಲದೆ ಪ್ರಕರಣದಲ್ಲಿ ಭಾಗಿಯಾಗಿರೋ ಆರೋಪಿಗಳನ್ನು ಹುಡುಕಿಕೊಟ್ಟವರಿಗೆ 10 ಸಾವಿರ ನಗದು ಬಹುಮಾನ ನೀಡುವುದಾಗಿ ಪೊಲೀಸರು ಘೊಷಿಸಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿ ವಿವೇಕ್ ರಾಜ್ ಹಾಗೂ ಇತರ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಅವರಿಚಿತ ವ್ಯಕ್ತಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.