ಭೋಪಾಲ್: ಸಾರ್ವಜನಿಕ ಸಭೆಯಲ್ಲೇ ಮಹಿಳೆಯೊಬ್ಬಳು ಸರ್ಕಾರಿ ಅಧಿಕಾರಿಗೆ ಚಪ್ಪಲಿ ಏಟು ಕೊಟ್ಟ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ.
ಗ್ವಾಲಿಯರ್ ನಲ್ಲಿ ಪ್ರಧಾನ್ ಮಂತ್ರಿ ಆವಾಸ್ ಯೋಜನೆ ಅಡಿ ಫಲಾನುಭವಿಗಳಿಗೆ ಮನೆ ಹಂಚಿಕೆ ನಡೆದಿತ್ತು. ಸಾರ್ವಜನಿಕ ಸಭೆಗೆ ಆಗಮಿಸಿದ್ದ ಫಲಾನುಭವಿ ಮಹಿಳೆ, ತನಗೆ ಸಿಗಬೇಕಾದ ಮನೆಯನ್ನು ಅಧಿಕಾರಿಗಳು ಬೇರೆಯವರಿಗೆ ಹಸ್ತಾಂತರ ಮಾಡಿದ್ದಾರೆ ಎಂದು ಅಧಿಕಾರಿಗಳ ಜೊತೆಗೆ ವಾಗ್ವಾದಕ್ಕೆ ಇಳಿದಿದ್ದಳು. ಈ ವೇಳೆ ಕೈಯಲ್ಲಿ ಚಪ್ಪಲಿ ಹಿಡಿದು ಅಧಿಕಾರಿಗೆ ಹೊಡೆದಿದ್ದಾಳೆ.
Advertisement
#WATCH Madhya Pradesh: A woman thrashes a govt official with a slipper as a group of women engages in a verbal spat with him over alleged wrongful allocations of houses under Pradhan Mantri Awas Yojana, in Gwalior. The women alleged that houses have been wrongly allocated.(03.10) pic.twitter.com/5AEKR9eHUz
— ANI (@ANI) October 3, 2019
Advertisement
ಸಭೆಯಲ್ಲಿ ಸೇರಿದ್ದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಮಹಿಳೆಯನ್ನು ತಡೆಯಲು ಪ್ರಯತ್ನಿಸಿದರು. ಆದರೆ ಮಹಿಳೆ ಮಾತ್ರ ಎಲ್ಲರನ್ನೂ ತಳ್ಳಿ ನಾಲ್ಕೈದು ಬಾರಿ ಅಧಿಕಾರಿಗೆ ಚಪ್ಪಲಿಯಿಂದ ಹೊಡೆದಿದ್ದಾಳೆ. ಅಷ್ಟೇ ಅಲ್ಲದೆ ಅಧಿಕಾರಿ ಮೇಲಿನ ಹಲ್ಲೆಯನ್ನು ತಡೆಯಲು ಬಂದ ವ್ಯಕ್ತಿಯನ್ನು ಎಳೆದಾಡಿದ್ದಾಳೆ.
Advertisement
ಘಟನೆಯಿಂದಾಗಿ ಸಭೆಯಲ್ಲಿ ಗದ್ದಲದ ವಾತಾವರಣ ಉಂಟಾಯಿತು. ಈ ದೃಶ್ಯವನ್ನು ಸಭೆಯಲ್ಲಿ ಸೇರಿದ್ದ ಸ್ಥಳೀಯ ಮಾಧ್ಯಮಗಳು ಹಾಗೂ ಸಾರ್ವಜನಿಕರು ತಮ್ಮ ಕ್ಯಾಮೆರಾ, ಮೊಬೈಲ್‍ನಲ್ಲಿ ಸೆರೆ ಹಿಡಿದು, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಈ ವಿಡಿಯೋ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.