ಭೋಪಾಲ್: ಮಧ್ಯಪ್ರದೇಶದ ಬಿಜೆಪಿ ಶಾಸಕ ಆಕಾಶ್ ವಿಜಯ್‍ವರ್ಗಿಯನನ್ನು ವಿವಾದಕ್ಕೆ ಗುರಿ ಮಾಡಿದ್ದ ಮನೆಯನ್ನು ಇಂದೋರ್ ಮುನ್ಸಿಪಲ್ ಕಾರ್ಪೋರೇಷನ್ ನೆಲಸಮಗೊಳಿಸಿದೆ.
ಇಂದೋರ್‍ನ ನಗರ್ ನಿಗಮ್ ರಸ್ತೆಯ ಪಕ್ಕದ ಗಂಜಿ ಕಾಂಪೌಂಡ್‍ನಲ್ಲಿರುವ ಮನೆಯನ್ನು ಅಧಿಕಾರಿಗಳು ಶುಕ್ರವಾರ ಜೆಸಿಬಿ ಮೂಲಕ ನೆಲಸಮಗೊಳಿಸಿದ್ದಾರೆ. ಈ ಮನೆ ವಾಸಿಸಲು ಯೋಗ್ಯವಲ್ಲ ಎಂದು ಅಧಿಕಾರಿಗಳು ತಿಳಿಸಿದ್ದರು. ಆದರೆ ತನ್ನ ಬೆಂಬಲಿಗನ ಮನೆಯನ್ನು ತೆರವುಗೊಳಿಸಲು ಬಿಜೆಪಿ ಶಾಸಕ ಆಕಾಶ್ ವಿಜಯ್‍ವರ್ಗಿಯ ವಿರೋಧ ವ್ಯಕ್ತಪಡಿಸಿ, ಅಧಿಕಾರಿಯ ಮೇಲೆ ಬ್ಯಾಟ್‍ನಿಂದ ಹಲ್ಲೆ ಮಾಡಿದ್ದನು.
Advertisement
Madhya Pradesh: A building demolished by Municipal Corporation in Indore, over which BJP MLA Akash Vijayvargiya had thrashed a Municipal Corporation officer with a cricket bat on 26th June. pic.twitter.com/tAST0RYk05
— ANI (@ANI) July 5, 2019
Advertisement
ಹಲ್ಲೆ ಮಾಡಿದ್ದರ ವಿಚಾರವಾಗಿ ಶಾಸಕ ಆಕಾಶ್ ವಿಜಯ್‍ವರ್ಗಿಯ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅಸಮಾಧಾನ ಹೊರ ಹಾಕಿದ್ದರು. ಅಷ್ಟೇ ಅಲ್ಲದೆ ಬಿಜೆಪಿಯಿಂದ ಮೊದಲ ಬಾರಿಗೆ ಶಾಸಕರಾಗಿರುವ ಆಕಾಶ್ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಖಡಕ್ ಸಂದೇಶ ರವಾನಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿತ್ತು.
Advertisement
ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಘಟನೆಯ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಯಾವ ನಾಯಕನ ಮಗನಾಗಿದ್ದರೂ ಸರಿ ದುರ್ವರ್ತನೆ ತೋರಿದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ನಾವು ಸಂಸದರನ್ನು ಕಳೆದುಕೊಂಡರೂ ಸರಿ. ಇನ್ನು ಮುಂದೆ ಈ ರೀತಿಯ ದುರ್ವರ್ತನೆ ನಡೆಯುವುದನ್ನು ತಡೆಯಬೇಕಿದೆ ಎಂದು ಎಚ್ಚರಿಸಿದ್ದರು.
Advertisement
ಅದು ಯಾರೇ ಆಗಿರಲಿ, ಯಾರ ಮಗನೇ ಆಗಿರಲಿ ದುರಹಂಕಾರ, ದುರ್ವತೆಯನ್ನು ಸಹಿಸಲು ಸಾಧ್ಯವಿಲ್ಲ. ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಇಂದೋರ್ ನಲ್ಲಿ ನಡೆದ ಘಟನೆಯನ್ನು ಉಲ್ಲೇಖಿಸಿ ಹೇಳಿದ್ದರು.
ಈ ಹಿಂದೆ ಆಗಿದ್ದೇನು?:
ಇಂದೋರ್ ನಗರದಲ್ಲಿ ಒತ್ತುವರಿ ಮಾಡಿ ನಿರ್ಮಿಸಿದ್ದ ಕಟ್ಟಡಗಳನ್ನು ಇತ್ತೀಚೆಗೆ ಅಧಿಕಾರಿಗಳು ತೆರವುಗೊಳಿಸುತ್ತಿದ್ದರು. ಆದರೆ ವಿಜಯ್ ತಮ್ಮ ಬೆಂಬಲಿಗನ ಕಟ್ಟಡ ತೆರವುಗೊಳಿಸದಂತೆ ಸೂಚನೆ ನೀಡಿದ್ದನು. ಇದಕ್ಕೆ ಕ್ಯಾರೆ ಎನ್ನದ ಅಧಿಕಾರಿಗಳು ಕಟ್ಟಡ ತೆರವುಗೊಳಿಸುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಶಾಸಕ ಆಕಾಶ್ ವಿಜಯ್ ವರ್ಗಿಯ ಅಧಿಕಾರಿಗೆ ಕ್ರಿಕೆಟ್ ಬ್ಯಾಟ್‍ನಿಂದ ಹೊಡೆದಿದ್ದನು. ಅಷ್ಟೇ ಅಲ್ಲದೆ ಶಾಸಕರ ಬೆಂಬಲಿಗರು ಅಧಿಕಾರಿಯ ಬಟ್ಟೆ ಹಿಡಿದು ಎಳೆದಾಡಿದ್ದರು. ಘಟನೆಯಿಂದ ತಕ್ಷಣವೇ ಜಾಗೃತಗೊಂಡ ಪೊಲೀಸರು ಅಧಿಕಾರಿಯನ್ನು ರಕ್ಷಿಸಿದ್ದರು.
#WATCH Madhya Pradesh: Akash Vijayvargiya, BJP MLA and son of senior BJP leader Kailash Vijayvargiya, thrashes a Municipal Corporation officer with a cricket bat, in Indore. The officers were in the area for an anti-encroachment drive. pic.twitter.com/AG4MfP6xu0
— ANI (@ANI) June 26, 2019
ಅಧಿಕಾರಿ ಮೇಲೆ ಕ್ರಿಕೆಟ್ ಬ್ಯಾಟ್‍ನಿಂದ ಹಲ್ಲೆ ಮಾಡಿದ ವಿಡಿಯೊ ವೈರಲ್ ಆಗುತ್ತಿದ್ದಂತೆ, ಇಂದೋರ್ ಶಾಸಕ ಆಕಾಶ್ ವಿಜಯ್ ವರ್ಗಿಯನನ್ನು ಪೊಲೀಸರು ಬಂಧಿಸಿದ್ದರು. ಆದರೆ ಜಾಮೀನು ಪಡೆದು ಜೈಲಿನಿಂದ ಹೊರಗೆ ಬಂದಿದ್ದ ಶಾಸಕನನ್ನು ಗಾಳಿಯಲ್ಲಿ ಗುಂಡು ಹಾರಿಸಿ, ಸಿಹಿ ಹಂಚುವ ಮೂಲಕ ಬೆಂಬಲಿಗರು ಸ್ವಾಗತಿಸಿದ್ದರು.