ಭೋಪಾಲ್: ʼದಿ ಕಾಶ್ಮೀರ್ ಫೈಲ್ಸ್ʼ ಸಿನಿಮಾ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಐಎಎಸ್ ಅಧಿಕಾರಿಗೆ ಮಧ್ಯಪ್ರದೇಶ ಸರ್ಕಾರ ನೋಟಿಸ್ ಜಾರಿ ಮಾಡಲಿದೆ ಎಂದು ಗೃಹ ಸಚಿವ ನರೋತ್ತಮ್ ಮಿಶ್ರಾ ತಿಳಿಸಿದ್ದಾರೆ.
ರಾಜ್ಯ ಲೋಕೋಪಯೋಗಿ ಇಲಾಖೆಯಲ್ಲಿ ಉಪ ಕಾರ್ಯದರ್ಶಿಯಾಗಿರುವ ಐಎಎಸ್ ಅಧಿಕಾರಿ ನಿಯಾಜ್ ಖಾನ್ ಅವರು ಈಚೆಗೆ ʼದಿ ಕಾಶ್ಮೀರ್ ಫೈಲ್ಸ್ʼ ಸಿನಿಮಾ ಕುರಿತು ಟ್ವೀಟ್ ಮಾಡಿದ್ದರು. ದಿ ಕಾಶ್ಮೀರ್ ಫೈಲ್ಸ್‌ನಂತೆಯೇ, ದೇಶದ ಅನೇಕ ರಾಜ್ಯಗಳಲ್ಲಿ ಅಪಾರ ಸಂಖ್ಯೆಯಲ್ಲಿ ಮುಸ್ಲಿಮರ ಹತ್ಯೆಯಾಗಿರುವ ಕುರಿತು ಸಿನಿಮಾ ನಿರ್ಮಿಸಬೇಕು. ಮುಸ್ಲಿಂ ಸಮುದಾಯದವರು ಕೀಟಗಳಲ್ಲ. ಅವರು ಸಹ ಈ ದೇಶದ ನಾಗರಿಕರು ಎಂದು ಟ್ವೀಟ್ ಮಾಡಿದ್ದರು. ಇದನ್ನೂ ಓದಿ: ಇಡೀ ಥಿಯೇಟರ್ ನಲ್ಲಿ ಒಬ್ಬರೇ ಕೂತು ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ವೀಕ್ಷಿಸಿದ ಡೈಮಂಡ್ ರವಿ
Advertisement
Advertisement
ಈ ಕುರಿತು ಪ್ರತಿಕ್ರಿಯಿಸಿರುವ ಸಚಿವ ಮಿಶ್ರಾ ಅವರು, ನಾನು ಖಾನ್ ಅವರ ಟ್ವೀಟ್‌ಗಳನ್ನು ನೋಡಿದ್ದೇನೆ. ಇದು ಗಂಭೀರ ವಿಷಯವಾಗಿದೆ. ಅವರು ಸರ್ಕಾರಿ ಅಧಿಕಾರಿಗಳಿಗೆ ನಿಗದಿಪಡಿಸಿದ ಮಿತಿಯನ್ನು ದಾಟಿ ನಿಯಮ ಉಲ್ಲಂಘಿಸುತ್ತಿದ್ದಾರೆ. ರಾಜ್ಯ ಸರ್ಕಾರ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿ ಅವರ ಉತ್ತರವನ್ನು ಕೇಳಲಿದೆ ಎಂದು ತಿಳಿಸಿದ್ದಾರೆ.
Advertisement
ಅಧಿಕಾರಿ ಟ್ವೀಟ್‌ನಲ್ಲೇನಿತ್ತು?
ಕಾಶ್ಮೀರ್ ಫೈಲ್ಸ್ ಬ್ರಾಹ್ಮಣರ ನೋವನ್ನು ತೋರಿಸುತ್ತದೆ. ಕಾಶ್ಮೀರದಲ್ಲಿ ಎಲ್ಲ ಗೌರವಗಳೊಂದಿಗೆ ಸುರಕ್ಷಿತವಾಗಿ ಬದುಕಲು ಅವರಿಗೆ ಅವಕಾಶ ನೀಡಬೇಕು. ಹಲವಾರು ರಾಜ್ಯಗಳಾದ್ಯಂತ ಹೆಚ್ಚಿನ ಸಂಖ್ಯೆಯ ಮುಸ್ಲಿಮರ ಹತ್ಯೆಗಳನ್ನು ತೋರಿಸಲು ನಿರ್ಮಾಪಕರು ಸಿನಿಮಾವೊಂದನ್ನು ಮಾಡಬೇಕು. ಚಿತ್ರವು 150 ಕೋಟಿ ರೂಪಾಯಿಗಳ ಆದಾಯದ ಗಡಿಯನ್ನು ಮುಟ್ಟಿದ್ದಕ್ಕಾಗಿ ಚಿತ್ರದ ನಿರ್ಮಾಪಕರನ್ನು ಅಭಿನಂದಿಸಿದ್ದರು. ಇದನ್ನೂ ಓದಿ : ಗಣೇಶ್ ಮತ್ತು ಪ್ರೀತಂ ಕಾಂಬಿನೇಷನ್ ನಲ್ಲಿ ಮತ್ತೊಂದು ಸಿನಿಮಾ
Advertisement
ಜನರು ಕಾಶ್ಮೀರಿ ಬ್ರಾಹ್ಮಣರ ಭಾವನೆಗಳಿಗೆ ಹೆಚ್ಚಿನ ಗೌರವವನ್ನು ನೀಡಿರುವುದರಿಂದ ಚಲನಚಿತ್ರ ನಿರ್ಮಾಪಕರು ಎಲ್ಲಾಗಳಿಕೆಯನ್ನು ಬ್ರಾಹ್ಮಣ ಮಕ್ಕಳ ಶಿಕ್ಷಣಕ್ಕೆ ವರ್ಗಾಯಿಸಬೇಕು. ಕಾಶ್ಮೀರದಲ್ಲಿ ಅವರಿಗೆ ಮನೆಗಳನ್ನು ನಿರ್ಮಿಸಬೇಕು ಎಂದು ಟ್ವೀಟ್ ಮಾಡಿದ್ದರು.