ಭೋಪಾಲ್: ರಾಮನವಮಿ (Ram Navami) ಆಚರಣೆ ನಡೆಯುತ್ತಿದ್ದ ವೇಳೆ ಇಂದೋರ್‌ನ (Indore) ದೇವಸ್ಥಾನದ (Temple) ನೆಲ ಕುಸಿದು ಅದರ ಅಡಿಯಲ್ಲಿದ್ದ ಬಾವಿಯೊಂದರಲ್ಲಿ ಮುಳುಗು 13 ಮಂದಿ ಸಾವನ್ನಪ್ಪಿದ ಘಟನೆ ಇಂದೋರ್‌ನಲ್ಲಿ ನಡೆದಿದೆ.
ನಗರದ ಸ್ನೇಹನಗರ ಪ್ರದೇಶದಲ್ಲಿರುವ ಶ್ರೀ ಬಾಲೇಶ್ವರ ದೇವಸ್ಥಾನದಲ್ಲಿ ಈ ಘಟನೆ ವರದಿಯಾಗಿದೆ. ಘಟನೆಯ ಬಳಿಕ ದೇವಾಲಯದ ಆವರಣದಲ್ಲಿ ಉಂಟಾದ ಅವ್ಯವಸ್ಥೆಯ ಹಾಗೂ ರಕ್ಷಣಾ ಕಾರ್ಯಾಚರಣೆಯ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.
Advertisement
Advertisement
ಘಟನೆ ಬಗ್ಗೆ ಮಧ್ಯಪ್ರದೇಶದ (Madhya Pradesh) ಗೃಹಸಚಿವ ನರೋತ್ತಮ್ ಮಿಶ್ರಾ ಮಾತನಾಡಿ, 13 ಜನರು ಸಾವನ್ನಪ್ಪಿದ್ದು, 10 ಮಹಿಳೆಯರು ಸೇರಿದಂತೆ 11 ಮೃತದೇಹಗಳನ್ನು ಸ್ಥಳದಿಂದ ಹೊರತೆಗೆಯಲಾಗಿದೆ. 19 ಮಂದಿಯನ್ನು ಘಟನ ಸ್ಥಳದಿಂದ ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಗಾಯಗೊಂಡವರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಚುನಾವಣಾ ಅಕ್ರಮ ತಡೆಗೆ 16 ಚೆಕ್ ಪೋಸ್ಟ್ ಸ್ಥಾಪನೆ- ಐವರು ರೌಡಿಶೀಟರ್‌ಗಳ ಗಡಿಪಾರು
Advertisement
ವರದಿಗಳ ಪ್ರಕಾರ ದೇವಾಲಯದ ಆವರಣದಲ್ಲಿ ಮೆಟ್ಟಿಲು ಬಾವಿಯಿದ್ದು, ಅದಕ್ಕೆ ಮೇಲ್ಛಾವಣಿ ಹಾಕಿ ಮುಚ್ಚಲಾಗಿತ್ತು. ರಾಮನವಮಿಯ ಹಿನ್ನೆಲೆ ದೇವಾಲಯದಲ್ಲಿ ನೂಕುನುಗ್ಗಲು ಉಂಟಾಗಿದ್ದು, ಈ ವೇಳೆ ಮೆಟ್ಟಿಲು ಬಾವಿಯ ಮೇಲ್ಛಾವಣಿ ಕುಸಿದಿದೆ. ಇದನ್ನೂ ಓದಿ: ಮೋದಿಯನ್ನು ಪ್ರಕರಣದಲ್ಲಿ ಸಿಲುಕಿಸುವಂತೆ ನನ್ನ ಮೇಲೆ ಸಿಬಿಐ ಒತ್ತಡ ಹೇರಿತ್ತು: ಅಮಿತ್ ಶಾ
Advertisement