ಭೋಪಲ್: ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿದ್ದ ವ್ಯಕ್ತಿಯನ್ನು ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದಾರೆ.
ಆದಿಲ್ ಅಲಿ (38) ಬಂಧಿತ ಆರೋಪಿ. ಜಬಲ್‌ಪುರ ನಿವಾಸಿ ಆದಿಲ್ ಶಾ ಸಾಮಾಜಿಕ ಜಾಲತಾಣದಲ್ಲಿ ಮೋದಿ ಹಾಗೂ ಅಮಿತ್ ಶಾ ಅವರ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿ ಮಾತನಾಡಿದ್ದ. ಆ ವೀಡಿಯೋ ಭಾರೀ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಆದಿಲ್ ಅಲಿಯನ್ನು ಬಂಧಿಸಲಾಗಿದೆ.
Advertisement
Advertisement
ಈ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ್ ಬಹುಗುಣ ಮಾತನಾಡಿ, ಆದಿಲ್ ಅಲಿ ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ಹಾಗೂ ಕೇಂದ್ರ ಗೃಹಮಂತ್ರಿ ವಿರುದ್ಧ ನಿಂದನೀಯ ಶಬ್ದಗಳನ್ನು ಬಳಸಿ ವೀಡಿಯೋ ಮಾಡಿ ಹಾಕಿದ್ದ. ಈ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿದೆ ದೃಢಪಡಿಸಿದ್ದಾರೆ. ಇದನ್ನೂ ಓದಿ: ನಮ್ಮಿಂದ ತಪ್ಪಾಗಿದೆ: ಕ್ಷಮೆ ಕೇಳಿದ ಶ್ರೀಲಂಕಾ ಅಧ್ಯಕ್ಷ
Advertisement
Advertisement
ಅಲಿ ವಿರುದ್ಧ ಐಪಿಸಿ ಸೆಕ್ಷನ್ 153 ಅಂದರೆ ಗಲಭೆಯನ್ನು ಉಂಟುಮಾಡುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಪ್ರಚೋದನೆ ನೀಡುವುದು ಮತ್ತು ಸೆಕ್ಷನ್ 294 ಅಶ್ಲೀಲ ಕೃತ್ಯಗಳು ಮತ್ತು ಹಾಡುಗಳು ಅಡಿಯಲ್ಲಿ ದೂರು ದಾಖಲಾಗಿದೆ. ಇದನ್ನೂ ಓದಿ: ಬೀದರ್ ಹಳೇ ವಿದ್ಯಾರ್ಥಿ ಈಗ ಪಂಜಾಬ್ ಸ್ಪೀಕರ್