LatestLeading NewsMain PostNational

ಮಹುವಾ ವಿರುದ್ಧ ಕೇಸ್‌ – ನಾನು ಕಾಳಿ ಆರಾಧಕಿಯಾಗಿದ್ದು ಹೆದರಲ್ಲ ಎಂದ ಸಂಸದೆ

Advertisements

ನವದೆಹಲಿ: ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಮಧ್ಯಪ್ರದೇಶದಲ್ಲಿ ಎಫ್‌ಐಆರ್ ದಾಖಲಾಗಿದೆ.

ವಾಹಿನಿಯೊಂದರ ಕಾರ್ಯಕ್ರಮದಲ್ಲಿ ಮಾತನಾಡಿದ ಮಹುವಾ ಮೊಯಿತ್ರಾ ಅವರು, ನನಗೆ ಕಾಳಿ ಮಾತೆಯು ಮಾಂಸ ತಿನ್ನುವ, ಮದ್ಯ ಸ್ವೀಕರಿಸುವ ದೇವತೆಯಾಗಿದ್ದಾಳೆ. ನಿಮ್ಮ ದೇವತೆ ಬಗ್ಗೆ ಊಹಿಸಿಕೊಳ್ಳುವ ಸ್ವಾತಂತ್ರ್ಯ ನಿಮಗಿದೆ ಎಂದು ಎಂದು ಹೇಳಿದ್ದರು. ಈ ಹೇಳಿಕೆ ವಿವಾದವಾದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆ ವ್ಯಕ್ತವಾಗಿತ್ತು.

ವಿವಾದ ಆಗುತ್ತಿದ್ದಂತೆ ಪ್ರತಿಕ್ರಿಯೆ ನೀಡಿದ ಟಿಎಂಸಿ, ಮಹುವಾ ಮೊಯಿತ್ರಾ ಅವರ ಹೇಳಿಕೆಗೂ ಪಕ್ಷಕ್ಕೂ ಯಾವುದೇ ಸಂಬಂಧ ಇಲ್ಲ. ಮಹುವಾ ಹೇಳಿಕೆ ವೈಯಕ್ತಿಕ ಎಂದು ಹೇಳಿ ವಿವಾದಿಂದ ದೂರ ಉಳಿದಿದೆ. ಇದನ್ನೂ ಓದಿ: ಭಾರತ ತಂಡದ ಒಂದು ಎಡವಟ್ಟಿನಿಂದಾಗಿ ರ್‍ಯಾಂಕಿಂಗ್‌ನಲ್ಲಿ ಜಿಗಿತ ಕಂಡ ಪಾಕ್

ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ಮಹುವಾ ಅವರನ್ನು ಬಂಧಿಸಬೇಕೆಂಬ ಬೇಡಿಕೆಯನ್ನಿರಿಸಿದೆ.

ಈ ಕುರಿತು ಬುಧವಾರ ಮತ್ತೆ ಟ್ವೀಟ್‌ ಮಾಡಿದ ಮಹುವಾ, ನಾನು ಕಾಳಿ ಆರಾಧಕಿಯಾಗಿದ್ದು ಯಾವುದಕ್ಕೂ ಹೆದರುವುದಿಲ್ಲ. ನಿಮ್ಮ ಮೂಢತೆ, ಗೂಂಡಾ, ಪೊಲೀಸ್ ಅಥವಾ ಟ್ರೋಲ್‌ಗಳಿಗೆ ಬಗ್ಗುವುದಿಲ್ಲ ಎಂದಿದ್ದಾರೆ.

ಮಹುವಾ ಹೇಳಿಕೆಯನ್ನು ಬಾಲಿವುಡ್‌ ನಟಿ ಸ್ವರ ಬೆಂಬಲಿಸಿದ್ದಾರೆ. ಅದ್ಭುತವಾಗಿದೆ! ಅವರ ಧ್ವನಿಗೆ ಹೆಚ್ಚಿನ ಶಕ್ತಿ ಬೇಕಿದೆ ಎಂದು ಟ್ವೀಟ್‌ ಮಾಡಿದ್ದಾರೆ.

Live Tv

Leave a Reply

Your email address will not be published.

Back to top button