– ಮಧ್ಯ ಪ್ರದೇಶದಲ್ಲಿ ಬಿಜೆಪಿಗೆ ಆರಂಭಿಕ ಮುನ್ನಡೆ
ಭೋಪಾಲ್: ಮಧ್ಯಪ್ರದೇಶದಲ್ಲಿ ಚುನಾವಣಾ ಫಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್ ಗೆಲುವು ಘೋಷಿಸಿಕೊಂಡಿದೆ. ರಾಜಧಾನಿ ಭೋಪಾಲ್‌ನಲ್ಲಿರುವ ಪಕ್ಷದ ಕಚೇರಿಯ ಮುಂಭಾಗ ಕಮಲ್‌ನಾಥ್ ಅವರು ಮುಖ್ಯಮಂತ್ರಿಯಾಗಿ ಅಭಿನಂದನೆ ಸ್ವೀಕರಿಸುತ್ತಿರುವ ದೊಡ್ಡ ಪೋಸ್ಟರ್ ಸಹ ಅಳವಡಿಸಲಾಗಿದೆ. ‘ಮುಖ್ಯಮಂತ್ರಿಯಾದ ಗೌರವಾನ್ವಿತ ಕಮಲ್ ನಾಥ್ ಅವರಿಗೆ ಅಭಿನಂದನೆಗಳು’ ಎಂದು ಪೋಸ್ಟರ್‌ನಲ್ಲಿ ಅಭಿನಂದನೆ ಸಲ್ಲಿಸಲಾಗಿದೆ.
Advertisement
ಇನ್ನೂ ಭಾನುವಾರ (ಇಂದು) ಬೆಳಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಚುನಾವಣಾ ಅಭ್ಯರ್ಥಿ ಕಮಲ್‌ನಾಥ್, ಬಿಜೆಪಿಐ ಆರಂಭಿಕ ಮುನ್ನಡೆಯ ನಡುವೆಯೂ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ತೆಲಂಗಾಣ, ಛತ್ತಿಸ್‌ಗಡದಲ್ಲಿ ಕಾಂಗ್ರೆಸ್‌ಗೆ ಮುನ್ನಡೆ – ಕೈ ಹಿಡಿಯುತ್ತಾ ಗ್ಯಾರಂಟಿ?
Advertisement
Advertisement
ನಾವು ಈವರೆಗೆ ಯಾವುದೇ ಟ್ರೆಂಡ್ ನೋಡಿಲ್ಲ. 11 ಗಂಟೆವರೆಗೆ ಟ್ರೆಂಡ್ ನೋಡುವ ಅಗತ್ಯವೂ ಇಲ್ಲ. ನಾನು ಮಧ್ಯಪ್ರದೇಶದ ಮತದಾರರನ್ನು ನಂಬುತ್ತೇನೆ. ನಾವು ಗೆಲ್ಲುತ್ತೇವೆ ಎಂಬ ವಿಶ್ವಾಸ ನನಗಿದೆ. ಜನ ಯಾವುದೇ ತೀರ್ಪು ಕೊಟ್ಟರೂ ನಾವು ಸ್ವೀಕರಿಸಲು ಸಿದ್ಧ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಜಸ್ಥಾನದಲ್ಲಿ ಈ ಬಾರಿಯೂ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ: ಅಶೋಕ್ ಗೆಹ್ಲೋಟ್ ವಿಶ್ವಾಸ
Advertisement
ಮಧ್ಯ ಪ್ರದೇಶದಲ್ಲಿ 230 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಭಾನುವಾರ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಆರಂಭಗೊಂಡಿದೆ. ಬಹುಮತಕ್ಕೆ 116 ಸ್ಥಾನಗಳ ಅಗತ್ಯವಿದೆ. ಬೆಳಗ್ಗೆ 9:35ರ ವೇಳೆಗೆ ಬಿಜೆಪಿ 138 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 91, ಇತರೇ ಪಕ್ಷಗಳು 1 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ. ಇದನ್ನೂ ಓದಿ: ಕೈ ಗ್ಯಾರಂಟಿಯೋ – ಮೋದಿ ಜನಪ್ರಿಯತೆಯೋ; ಇಂದು 4 ರಾಜ್ಯಗಳ ಚುನಾವಣಾ ಫಲಿತಾಂಶ – ಯಾರಿಗೆ ಎಲ್ಲಿ ಸಿಗುತ್ತೆ ಅಧಿಕಾರದ ಚುಕ್ಕಾಣಿ?