ಭೋಪಾಲ್: ಮಧ್ಯಪ್ರದೇಶದ ವಿಶ್ವವಿದ್ಯಾನಿಲಯ ಒಂದರಲ್ಲಿ ಮುಸ್ಲಿಂ ವಿದ್ಯಾರ್ಥಿನಿ ತರಗತಿಯ ಒಳಗೆ ಹಿಜಬ್ ಧರಿಸಿ ನಮಾಜ್ ಮಾಡುತ್ತಿರುವ ವೀಡಿಯೋವೊಂದು ವಿವಾದಕ್ಕೆ ಕಾರಣವಾಗಿದೆ.
Advertisement
ಮಧ್ಯಪ್ರದೇದಶ ಡಾ. ಹರಿಸಿಂಗ್ ಗೌರ್ ಸಾಗರ್ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿ ತರಗತಿಯ ಒಳಗೆ ಹಿಜಬ್ ಧರಿಸಿ ನಮಾಜ್ ಮಾಡುತ್ತಿರುವ ವೀಡಿಯೋ ಇದಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ವೀಡಿಯೋ ವೈರಲ್ ಆಗುತ್ತಿದ್ದಂತೆ ಮಧ್ಯಪ್ರದೇಶದ ಹಿಂದೂ ಜಾಗರಣ ಮಂಚ್ ಸಂಘಟನೆ ವಿದ್ಯಾರ್ಥಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ವಿಶ್ವವಿದ್ಯಾಲಯದ ಆಡಳಿತ ಮಂಡಳಿಗೆ ದೂರು ನೀಡಿದೆ. ಬಳಿಕ ಈ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ವಿಶ್ವವಿದ್ಯಾಲಯ ತಿಳಿಸಿದೆ. ಇದನ್ನೂ ಓದಿ: ಹಿಜಬ್ ವಿದ್ಯಾರ್ಥಿನಿಯರಿಗೆ ಶಾಕ್ – ಎಸ್‌ಎಸ್‌ಎಲ್‌ಸಿ ಪರಿಕ್ಷೆಗೆ ಸಮವಸ್ತ್ರ ಕಡ್ಡಾಯ
Advertisement
ವಿವಾದದ ಕುರಿತಾಗಿ ಡಾ. ಹರಿಸಿಂಗ್ ಗೌರ್ ಸಾಗರ್ ವಿಶ್ವವಿದ್ಯಾಲಯದ ಉಪಕುಲಪತಿ ನೀಲಿಮಾ ಗುಪ್ತಾ ಸ್ಥಳೀಯ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿ, ಹಿಜಬ್ ಧರಿಸಿ ನಮಾಜ್ ಮಾಡಿರುವ ಕುರಿತು ತನಿಖೆ ನಡೆಸಲು ಸಮಿತಿ ರಚಿಸಲಾಗಿದೆ. ವಿದ್ಯಾರ್ಥಿಗಳು ಮನೆಯಲ್ಲಿ ಧಾರ್ಮಿಕ ಪೂಜೆಗಳನ್ನು ಮಾಡಬೇಕು ಹೊರತು ಕಾಲೇಜ್‍ಗಳಲ್ಲಿ ಅಲ್ಲ. ವಿಶ್ವವಿದ್ಯಾಲಯ ಇರುವುದು ಅಧ್ಯಯನಕ್ಕಾಗಿ. ಇಲ್ಲಿ ಎಲ್ಲರೂ ಕೂಡ ಒಂದೇ ಎಲ್ಲರೂ ಕಲಿಕೆಯ ದೃಷ್ಟಿಯಿಂದ ಬಂದಿದ್ದು, ಯಾರು ತಪ್ಪು ಮಾಡಿದ್ದಾರೆ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.
Advertisement
Advertisement
ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಸಂತೋಷ್ ಮಾಧ್ಯಮಗಳೊಂದಿಗೆ ಮಾತನಾಡಿ, ವಿದ್ಯಾರ್ಥಿನಿ ಹಿಜಬ್ ಧರಿಸಿ ತರಗತಿಯೊಳಗೆ ನಮಾಜ್ ಮಾಡುತ್ತಿರುವ ವೀಡಿಯೋ ಸಮೇತ ನಮಗೆ ದೂರು ಬಂದಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಲು ಐವರು ಸದಸ್ಯರ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿ ಮೂರು ದಿನಗಳಲ್ಲಿ ವರದಿ ಸಲ್ಲಿಸಲಿದ್ದು, ವರದಿಯನ್ನು ಆಧರಿಸಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಮುಂದಾಗುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಹಿಜಬ್ ಬಗ್ಗೆ ಎದ್ದಿದ್ದ 3 ಪ್ರಶ್ನೆಗಳಿಗೆ ಸಿಕ್ತು ಉತ್ತರ: ಅರ್ಜಿದಾರರು, ಸರ್ಕಾರ, ಹೈಕೋರ್ಟ್ ಹೇಳಿದ್ದೇನು?
ಕರ್ನಾಟಕದಲ್ಲಿ ಎತ್ತಿದ್ದ ಹಿಜಬ್ ವಿವಾದದ ಕುರಿತಾಗಿ ಹಿಜಬ್ ಮುಸ್ಲಿಂ ಧರ್ಮದ ಅಗತ್ಯ ಆಚರಣೆ ಅಲ್ಲ ಎಂದು ಐತಿಹಾಸಿಕ ತೀರ್ಪು ಪ್ರಕಟಿಸುವ ಮೂಲಕ ಶಿಕ್ಷಣ ಸಂಸ್ಥೆಗಳಲ್ಲಿ ಎದ್ದಿದ್ದ ಧರ್ಮ ಸಂಘರ್ಷಕ್ಕೆ ಕರ್ನಾಟಕ ಹೈಕೋರ್ಟ್ ಪೂರ್ಣ ವಿರಾಮ ಹಾಕಿತ್ತು. ಅಲ್ಲದೇ ತರಗತಿಗಳಲ್ಲಿ ಹಿಜಬ್ ನಿಷೇಧಕ್ಕೆ ಸಂಬಂಧಿಸಿದಂತೆ ಸರ್ಕಾರ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಎಲ್ಲ ಅರ್ಜಿಯನ್ನು ಕೋರ್ಟ್ ವಜಾ ಮಾಡಿ, ಸರ್ಕಾರದ ಆದೇಶ ಕಾನೂನು ಬದ್ಧವಾಗಿದೆ. ಶಾಲಾ, ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯ ಆದೇಶ ಪ್ರಕಟಿಸಲು ಸರ್ಕಾರಕ್ಕೆ ಅಧಿಕಾರವಿದೆ. ಧರ್ಮವಸ್ತ್ರಗಳಿಗೆ ಶಾಲೆಗಳಲ್ಲಿ ಅವಕಾಶವಿಲ್ಲ ಎಂದು ತೀರ್ಪು ನೀಡಿತ್ತು.