ಭೋಪಾಲ್: ಕಳೆದ ವರ್ಷ ನಮೀಬಿಯಾದಿಂದ (Namibia) ತಂದ 8 ಚೀತಾ (Cheetahs) ಪೈಕಿ ಒಂದು ಚಿರತೆ ಅಸ್ವಸ್ಥಗೊಂಡಿದೆ.
ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿರುವ (Kuno National Park) ಸಶಾ ಹೆಸರಿನ ಚೀತಾ ಮೂತ್ರಪಿಂಡದ (Kidney) ಸೋಂಕಿನಿಂದ ಬಳಲುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement
ಸೋಮವಾರದಂದು ದೈನಂದಿನ ಮೇಲ್ವಿಚಾರಣೆಯ ಸಮಯದಲ್ಲಿ ಹೆಣ್ಣು ಚೀತಾ ಆಯಾಸಗೊಂಡ ಸ್ಥಿತಿಯಲ್ಲಿತ್ತು. ಕೂಡಲೇ ಟ್ರಾನ್ಸ್‌ಕ್ವಿಲೈಸ್ ಮಾಡಿ ಕ್ವಾರಂಟೈನ್ ಆವರಣಕ್ಕೆ ಬಿಡಲಾಗಿದೆ. ಆರೋಗ್ಯ ತಪಾಸಣೆಯಲ್ಲಿ ಕಿಡ್ನಿ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿರುವ ವಿಚಾರ ತಿಳಿದು ಬಂದಿದೆ.
Advertisement
Advertisement
ಸಶಾ ಮೇಲೆ ಈಗ ನಿಗಾ ಇಡಲಾಗಿದ್ದು ಉಳಿದ ಚೀತಾಗಳು ಚೆನ್ನಾಗಿವೆ. ಭೋಪಾಲ್‌ನ ವಾನ್ ವಿಹಾರ್‌ನಿಂದ ಡಾ ಅತುಲ್ ಗುಪ್ತಾ ನೇತೃತ್ವದ ವೈದ್ಯರ ತಂಡ ಆಗಮಿಸಿದೆ. ಚಿಕಿತ್ಸೆಗಾಗಿ ನಮೀಬಿಯಾ ಮತ್ತು ದಕ್ಷಿಣ ಆಫ್ರಿಕಾದ ವನ್ಯಜೀವಿ ತಜ್ಞರನ್ನೂ ಸಂಪರ್ಕಿಸಲಾಗಿದೆ ಎಂದು ಕುನೋ ರಾಷ್ಟ್ರೀಯ ಉದ್ಯಾನವನದ ವಿಭಾಗೀಯ ಅರಣ್ಯಾಧಿಕಾರಿ ಪ್ರಕಾಶ್ ಕುಮಾರ್ ವರ್ಮಾ ತಿಳಿಸಿದ್ದಾರೆ. ಇದನ್ನೂ ಓದಿ: 74th Republic Day: ದೆಹಲಿಯ ಕರ್ತವ್ಯ ಪಥ್‌ನಲ್ಲಿ ಹಲವು ಪ್ರಥಮಗಳಿಗೆ ಸಾಕ್ಷಿಯಾದ ಪರೇಡ್
Advertisement
ಅಳಿವಿನಂಚಿನಲ್ಲಿರುವ ವನ್ಯಜೀವಿಗಳನ್ನು(Wildlife) ಸಂರಕ್ಷಣೆ ಮಾಡುವ ಯೋಜನೆಯಡಿ ನಮೀಬಿಯಾದಿಂದ(Namibia) ಭಾರತಕ್ಕೆ(India) 2 ರಿಂದ 6 ವರ್ಷ ವಯಸ್ಸಿನ 3 ಗಂಡು ಹಾಗೂ 5 ಹೆಣ್ಣು ಚೀತಾಗಳನ್ನು ವಿಶೇಷ ವಿಮಾನದಲ್ಲಿ ತರಲಾಗಿತ್ತು. ತಮ್ಮ ಜನ್ಮದಿನವಾದ ಸೆ.17 ರಂದು ಪ್ರಧಾನಿ ಮೋದಿ (PM Modi) ಈ ಚಿರತೆಗಳು ಉದ್ಯಾನವನಕ್ಕೆ ಬಿಡುಗಡೆ ಮಾಡಿದ್ದರು. ನವೆಂಬರ್‌ನಲ್ಲಿ ದೊಡ್ಡ ಆವರಣಕ್ಕೆ ಸ್ಥಳಾಂತರಿಸಿದ ಬಳಿಕ ಕಾಡಿಗೆ ಬಿಡುಗಡೆ ಮಾಡಲಾಗಿತ್ತು.
ಚೀತಾ ವಿಶೇಷತೆಯೇನು?
ಮಚ್ಚೆ ಗುರುತಿನ ಚೀತಾಗಳ ಸಂತತಿ ಈಗಾಗಲೇ ಭಾರತದಲ್ಲಿ ನಾಶವಾಗಿದೆ. ಭಾರತದಲ್ಲಿದ್ದ ಕೊನೆಯ ಚೀತಾ 1947ರಲ್ಲಿ ಸಾವನ್ನಪ್ಪಿತ್ತು. 1952ರಲ್ಲಿ ಈ ಪ್ರಭೇದ ಭಾರತದಲ್ಲಿ ಇಲ್ಲ ಎಂದು ಘೋಷಣೆ ಮಾಡಲಾಗಿತ್ತು. 2009ರಲ್ಲಿ ಆಫ್ರಿಕನ್ ಚಿರತೆ ಯೋಜನೆ ಮಾಡಲಾಗಿತ್ತು, ಆದರೆ ಕಾರಣಾಂತರಗಳಿಂದ ಅನುಷ್ಠಾನವಾಗಿರಲಿಲ್ಲ.
75 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಿದ ಚೀತಾಗಳಿಗೆ ಕುನ್ಹೋ ಉದ್ಯಾನವನ ಪರಿಸರ ಅನುಕೂಲಕರವಾಗಿದ್ದು, ಅಲ್ಲಿನ ಸುತ್ತಮುತ್ತಲ 24 ಗ್ರಾಮಗಳ ಜನರನ್ನು ಖಾಲಿ ಮಾಡಿಸಲಾಗಿದೆ. 8 ಚೀತಾಗಳ ಸ್ಥಳಾಂತರಕ್ಕೆ 75 ಕೋಟಿ ರೂ. ಖರ್ಚು ಮಾಡಲಾಗಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k