ಸಿಎಂ ಶೀಘ್ರ ಚೇತರಿಕೆಗೆ ಮಧ್ಯಪ್ರದೇಶದ ಸಿಎಂ ಸೇರಿದಂತೆ ಗಣ್ಯರಿಂದ ಶುಭಹಾರೈಕೆ

Public TV
2 Min Read
BOMMAI CHAUHAN

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೊರೊನಾ ಸೋಂಕಿಗೆ ಒಳಗಾಗಿದ್ದು, ಈ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಸಿಎಂ ಸೇರಿದಂತೆ ಹಲವಾರು ಗಣ್ಯರು ಶೀಘ್ರ ಚೇತರಿಕೆಗೆ ಶುಭ ಹಾರೈಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಶಿವರಾಜ್ ಸಿಂಗ್ ಚೌಹಾಣ್, ಬೊಮ್ಮಾಯಿ ಅವರೇ ಆದಷ್ಟು ಬೇಗ ಕೊರೊನಾದಿಂದ ಗುಣಮುಖರಾಗುವಂತೆ ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಟ್ವೀಟ್ ಮಾಡಿ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರವರು ಶೀಘ್ರದಲ್ಲಿ ಸಂಪೂರ್ಣ ಗುಣಮುಖರಾಗಲಿ, ಮತ್ತೆ ಎಂದಿನಂತೆ ತಮ್ಮ ಕರ್ತವ್ಯಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.

ಇತ್ತ ಆರೋಗ್ಯ ಸಚಿವ ಡಾ. ಸುಧಾಕರ್ ಟ್ವೀಟ್ ಮಾಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆದಷ್ಟು ಬೇಗ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಎಂದಿನಂತೆ ತಮ್ಮ ಕಾರ್ಯ-ಕಲಾಪಗಳಲ್ಲಿ ತೊಡಗಿಕೊಳ್ಳುವಂತಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಸಿಎಂ ಬೊಮ್ಮಾಯಿಗೆ ಕೊರೊನಾ ಪಾಸಿಟಿವ್‌

dolon ಸಚಿವ ಡಾ. ಸಿ.ಎನ್ ಅಶ್ವಥ್ ನಾರಾಯಣ್ ಅವರು, ಮುಖ್ಯಮಂತ್ರಿ ಬೊಮ್ಮಾಯಿ ಅವರು ಕೋವಿಡ್ ಸೋಂಕಿನಿಂದ ಶೀಘ್ರ ಗುಣಮುಖರಾಗುವಂತೆ ನನ್ನ ಶುಭ ಹಾರೈಕೆಗಳು ಎಂದು ಕೂ ನಲ್ಲಿ ತಿಳಿಸಿದ್ದಾರೆ.

ಮುಖ್ಯಮಂತ್ರಿಗಳು ಶೀಘ್ರವಾಗಿ ಗುಣಮುಖವಾಗಲಿ ಹಾಗೂ ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ಎಂದಿನಂತೆ ತೊಡಗಿಸಿಕೊಳ್ಳುವಂತೆ ಆಗಲಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹಾರೈಸಿದ್ದಾರೆ.

ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಅವರಿಗೆ ಕೋವಿಡ್ – 19 ಪಾಸಿಟಿವ್ ಎಂದು ತಿಳಿದು ನೋವಾಗಿದೆ. ಅವರು ಶೀಘ್ರವಾಗಿ ಗುಣಮುಖರಾಗಿ ಆದಷ್ಟು ಬೇಗ ಜನರ ಸೇವೆಗೆ ಮರಳಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಸಚಿವ ಶ್ರೀರಾಮುಲು ಹಾರೈಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೋವಿಡ್-19 ದೃಢಪಟ್ಟಿದೆ. ಈ ಮೂಲಕ ಸಿಎಂ ಎರಡನೇ ಬಾರಿ ಮಹಾಮಾರಿಯನ್ನು ಎದುರಿಸುತ್ತಿದ್ದಾರೆ. ಈ ಸಂಬಂಧ ಟ್ವಿಟ್ಟರ್ ನಲ್ಲಿ ಬರೆದುಕೊಂಡಿರುವ ಅವರು, ಸೌಮ್ಯ ಲಕ್ಷಣಗಳು ಇದ್ದದ್ದರಿಂದ ಕೊರೊನಾ ಪರೀಕ್ಷೆ ಮಾಡಿಸಿದೆ. ವರದಿಯಲ್ಲಿ ಪಾಸಿಟಿವ್ ಬಂದಿದೆ. ನಾನು ಆರೋಗ್ಯವಾಗಿದ್ದೇನೆ. ಮನೆಯಲ್ಲೇ ಕ್ವಾರಂಟೈನ್ ಆಗಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಹಾಗೂ ಸ್ವಯಂ ಐಸೊಲೇಟ್ ಆಗಿ ಎಂದು ಮನವಿ ಮಾಡಿಕೊಂಡಿದ್ದಾರೆ.

Share This Article