ಬೆಂಗಳೂರು: ಕಣ್ಣೆದುರೆ ಎಲ್ಲಾ ನಡೆಯುತ್ತಿದ್ದರೂ ಏನು ಗೊತ್ತೆ ಇಲ್ಲ ಎಂಬಂತೆ ಸೈಲೆಂಟಾಗಿರುವ ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೈ ಕಮಾಂಡ್ ಕಿವಿ ಹಿಂಡಿದೆ. ಸ್ವತಃ ಹೈಕಮಾಂಡ್ ನಾಯಕರು ಕರೆ ಮಾಡಿ ಹೇಳಿದರು ಮುನ್ನುಗ್ಗಲು ದಂಡ ನಾಯಕರಿಲ್ಲದೆ ಒಬ್ಬರಿಗೊಬ್ಬರು ಮುಖ ಮುಖ ನೋಡಿಕೊಂಡು ಕೈ ನಾಯಕರುಗಳು ಸೈಲೆಂಟಾಗಿ ಅಚ್ಚರಿ ಮೂಡಿಸಿದ್ದಾರೆ.
Advertisement
ಆಪರೇಷನ್ ಕಮಲಕ್ಕೆ ಒಳಗಾದ ಮಧ್ಯಪ್ರದೇಶ ಕಾಂಗ್ರೆಸ್ ನ 19ಕ್ಕೂ ಹೆಚ್ಚು ಶಾಸಕರು ಕರ್ನಾಟಕಕ್ಕೆ ಬಂದಿದ್ದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ತಂಗಿದ್ದಾರೆ. ಕೇಂದ್ರ ಕಾಂಗ್ರೆಸ್ ನಾಯಕರುಗಳು ಸೇರಿದಂತೆ ಮಧ್ಯಪ್ರದೇಶ ಸಿಎಂ ಕಮಲನಾಥ್ ಸಹ ರಾಜ್ಯ ಕಾಂಗ್ರೆಸ್ ನಾಯಕರುಗಳಿಗೆ ಕರೆ ಮಾಡಿ ಸಹಾಯ ಮಾಡುವಂತೆ ಕೇಳಿಕೊಂಡಿದ್ದಾರೆ. ಸಿದ್ದರಾಮಯ್ಯ, ಪರಮೇಶ್ವರ್, ದಿನೇಶ್ ಗುಂಡೂರಾವ್ ಮತ್ತು ಡಿ.ಕೆ.ಶಿವಕುಮಾರ್ ಗೆ ಕರೆ ಮಾಡಿ ಕೆ.ಸಿ.ವೇಣುಗೋಪಾಲ್ ಹಾಗೂ ಕಮಲನಾಥ್ ಮಾತನಾಡಿದ್ದಾರೆ. ಏನಾದರು ಮಾಡಿ ಬೆಂಗಳೂರಿನಲ್ಲಿ ಉಳಿದುಕೊಂಡಿರುವ ಮಧ್ಯಪ್ರದೇಶ ಕಾಂಗ್ರೆಸ್ ಶಾಸಕರನ್ನ ಸಂಪರ್ಕಿಸುವಂತೆ ಅವರನ್ನ ಮನವೊಲಿಸುವಂತೆ ಕೇಳಿಕೊಂಡಿದ್ದಾರೆ ಎನ್ನಲಾಗಿದೆ.
Advertisement
Advertisement
ಆದರೆ ಸಿದ್ದರಾಮಯ್ಯ, ಪರಮೇಶ್ವರ್ ಹಾಗೂ ದಿನೇಶ್ ಗುಂಡೂರಾವ್ ಎಲ್ಲರೂ ತಮ್ಮ ಅಸಹಾಯಕತೆಯನ್ನ ವ್ಯಕ್ತಪಡಿಸಿದ್ದಾರೆ. ಇಲ್ಲಿ ಬಿಜೆಪಿ ಸರ್ಕಾರವಿದೆ ಅವರ ಅಧಿಕಾರದ ವ್ಯಾಪ್ತಿಯಲ್ಲಿ ಅವರ ರಕ್ಷಣೆಯಲ್ಲಿರುವ ಶಾಸಕರನ್ನ ಸಂಪರ್ಕ ಮಾಡೋದು ಕಷ್ಟ ಎಂದು ಅಸಹಾಯಕತೆಯನ್ನ ವ್ಯಕ್ತಪಡಿಸಿದ್ದಾರೆ. ಇಂತಹ ಸಂದರ್ಭದಲ್ಲೆ ಮುನ್ನುಗ್ಗುವ ಸ್ಪೆಷಲಿಸ್ಟ್ ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ಸ್ವತಃ ಐ ಆಮ್ ಹೆಲ್ಪ್ ಲೆಸ್ ಅಂತ ಹೇಳಿ ಕೈ ಚೆಲ್ಲಿದ್ದಾರಂತೆ. ಅಲ್ಲಿಗೆ ಮಧ್ಯಪ್ರದೇಶ ಸಿಎಂ, ಹೈ ಕಮಾಂಡ್ ನಾಯಕರುಗಳು ಕರೆ ಮಾಡಿದರು. ರಾಜ್ಯ ಕಾಂಗ್ರೆಸ್ ನಾಯಕರು ಅಸಹಾಯಕತೆಯಿಂದ ಕೈ ಚೆಲ್ಲಿ ಕುಳಿತಿದ್ದಾರೆ ಎಂದು ತಿಳಿದು ಬಂದಿದೆ.