ಮಡಿಕೇರಿ: ಕೊರೊನಾ ಸೋಂಕಿನಿಂದ ಗುಣಮುಖನಾಗಿ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದ ವ್ಯಕ್ತಿಗೆ ಮತ್ತೆ ಜ್ವರ ಕಾಣಿಸಿಕೊಂಡಿದ್ದು ಜಿಲ್ಲೆಯ ಜನ ಮತ್ತೆ ಆತಂಕಕ್ಕೆ ಒಳಗಾಗಿದ್ದಾರೆ.
ಕೊಡಗು ಜಿಲ್ಲೆಗೆ ದುಬೈನಿಂದ ಹಿಂದಿರುಗಿದ್ದ 35 ವರ್ಷದ ವ್ಯಕ್ತಿಗೆ ಮಾರ್ಚ್ 19ರಂದು ಕೊರೊನಾ ಪತ್ತೆಯಾಗಿತ್ತು. ಬಳಿಕ ಜಿಲ್ಲಾಸ್ಪತ್ರೆಯ ಕೋವಿಡ್ ಕೇರ್ ಸೆಂಟರ್ ಗೆ ದಾಖಲು ಮಾಡಿ 22 ದಿನಗಳ ಕಾಲ ಐಸೊಲೇಷನ್ ವಾರ್ಡ್‍ನಲ್ಲಿ ಚಿಕಿತ್ಸೆ ನೀಡಲಾಗಿತ್ತು. ನಂತರ ಗುಣಮುಖನಾಗಿದ್ದರಿಂದ ಏಪ್ರಿಲ್ 11 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು.
Advertisement
Advertisement
ಈಗ ಈ ವ್ಯಕ್ತಿಗೆ ಮತ್ತೆ ಜ್ವರ ಕಾಣಿಸಿಕೊಂಡಿರುವುದು ಮತ್ತೆ ಆತಂಕಕ್ಕೆ ಕಾರಣವಾಗಿದೆ. ಜ್ವರ ಕಾಣಿಸಿಕೊಳ್ಳುತ್ತಿದ್ದಂತೆ ವ್ಯಕ್ತಿಯೇ ಸ್ವಯಂಪ್ರೇರಿತವಾಗಿ ಕೋವಿಡ್ ಆಸ್ಪತ್ರೆಗೆ ಬಂದು ದಾಖಲಾಗಿದ್ದಾರೆ. ಸದ್ಯ ವ್ಯಕ್ತಿಗೆ ಐಸೊಲೇಷನ್ ವಾರ್ಡಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಗಂಟಲು ದ್ರವ ಮತ್ತು ರಕ್ತದ ಮಾದರಿಯನ್ನು ಸಂಗ್ರಹಿಸಿ ಮೈಸೂರಿನ ಲ್ಯಾಬ್ ಕಳುಹಿಸಿಕೊಡಲಾಗಿದೆ.
Advertisement
Advertisement
ನಾಳೆ ವ್ಯಕ್ತಿಯ ಲ್ಯಾಬ್ ರಿಪೋರ್ಟ್ ಬರಲಿದ್ದು ಜಿಲ್ಲಾಡಳಿತ ಕೂಡ ಆತಂಕದಿಂದ ಕಾಯುತ್ತಿದೆ. ಆದರೆ ಜಿಲ್ಲೆಯ ಜನರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಮತ್ತು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮನವಿ ಮಾಡಿದ್ದಾರೆ.