ಮಡಿಕೇರಿ: ಕೊರೊನಾ ಸೋಂಕಿನಿಂದ ಗುಣಮುಖನಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ ವ್ಯಕ್ತಿಗೆ ಮತ್ತೆ ಜ್ವರ ಕಾಣಿಸಿಕೊಂಡ ಹಿನ್ನೆಲೆ ಬುಧವಾರ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಇಂದು ಕೊರೊನಾ ನೆಗೆಟಿವ್ ಎಂದು ವರದಿ ಬಂದಿದ್ದು, ಕೊಡಗಿನ ಜನ ನಿಟ್ಟುಸಿರು ಬಿಟ್ಟಿದ್ದಾರೆ.
https://twitter.com/DEOKodagu/status/1250762896901988352
Advertisement
ಕೊಡಗು ಜಿಲ್ಲೆಗೆ ದುಬೈನಿಂದ ಹಿಂದಿರುಗಿದ್ದ 35 ವರ್ಷದ ವ್ಯಕ್ತಿಗೆ ಮಾರ್ಚ್ 19ರಂದು ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿತ್ತು. ಬಳಿಕ ಜಿಲ್ಲಾಸ್ಪತ್ರೆಯ ಕೋವಿಡ್-19 ಕೇರ್ ಸೆಂಟರ್ ಗೆ ದಾಖಲು ಮಾಡಿ 22 ದಿನಗಳ ಕಾಲ ಐಸೋಲೇಷನ್ ವಾರ್ಡಿನಲ್ಲಿ ವ್ಯಕ್ತಿಗೆ ಚಿಕಿತ್ಸೆ ನೀಡಲಾಗಿತ್ತು. ನಂತರ ವ್ಯಕ್ತಿ ಗುಣಮುಖನಾಗಿದ್ದರಿಂದ ಏಪ್ರಿಲ್ 11ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು. ಆದರೆ ಬುಧವಾರ ಈ ವ್ಯಕ್ತಿಗೆ ಮತ್ತೆ ಜ್ವರ ಬಂದಿದ್ದು ಆತಂಕಕ್ಕೆ ಕಾರಣವಾಗಿತ್ತು.
Advertisement
Advertisement
ಜ್ವರ ಕಾಣಿಸಿಕೊಳ್ಳುತ್ತಿದ್ದಂತೆ ವ್ಯಕ್ತಿಯು ಸ್ವಯಂಪ್ರೇರಿತವಾಗಿ ಕೋವಿಡ್-19 ಆಸ್ಪತ್ರೆಗೆ ಬಂದು ದಾಖಲಾಗಿದ್ದರು. ಈ ಹಿನ್ನೆಲೆ ಆಸ್ಪತ್ರೆಯ ವೈದ್ಯರು ಐಸೋಲೇಷನ್ ವಾರ್ಡಿನಲ್ಲಿ ಚಿಕಿತ್ಸೆ ನೀಡಿದ್ದು, ವ್ಯಕ್ತಿಯ ಗಂಟಲ ದ್ರವ ಮತ್ತು ರಕ್ತದ ಮಾದರಿಯನ್ನು ಸಂಗ್ರಹಿಸಿ ಮೈಸೂರಿನ ಲ್ಯಾಬ್ ಕಳುಹಿಸಿದ್ದರು. ಇಂದು ಲ್ಯಾಬ್ ವರದಿ ಬಂದಿದ್ದು, ವ್ಯಕ್ತಿ ದೇಹದಲ್ಲಿ ಕೊರೊನಾ ವೈರಸ್‍ನ ಯಾವುದೇ ಅಂಶ ಇಲ್ಲ, ಇದು ಕೊರೊನಾ ನೆಗೆಟಿವ್ ಪ್ರಕರಣ ಎಂದು ವರದಿಯಿಂದ ತಿಳಿದುಬಂದಿದೆ. ಆದರೂ ಮುನ್ನೆಚ್ಚರಿಕ ಕ್ರಮವಾಗಿ ಕೋವಿಡ್-19 ಆಸ್ಪತ್ರೆಯಲ್ಲೇ ವ್ಯಕ್ತಿಯನ್ನು ಇರಿಸಿಕೊಂಡು, ಅವರ ಮೇಲೆ ನಿಗಾ ಇರಿಸಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.