ಮಡಿಕೇರಿ: ವಿಜಯದಶಮಿ (Vijayadashami) ಪ್ರಯುಕ್ತ ಇದೇ ಅ.12ರಂದು ಮಡಿಕೇರಿ (Madikeri) ಹಾಗೂ ಗೋಣಿಕೊಪ್ಪದಲ್ಲಿ ನಡೆಯಲಿರುವ ಮಂಟಪಗಳ ಶೋಭಾಯಾತ್ರೆ ಸುಸೂತ್ರವಾಗಿ ನೆರವೇರಲು ಒಟ್ಟು ಸುಮಾರು 2,000 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ಸೂಕ್ತ ಬಂದೋಬಸ್ತ್ ಕಲ್ಪಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಮಾಹಿತಿ ನೀಡಿದ್ದಾರೆ.
Advertisement
80 ಪಿಎಸ್‌ಐ, 126 ಎಎಸ್‌ಐ, 975 ಕಾನ್ಸ್‌ಸ್ಟೇಬಲ್ ಹಾಗೂ ಹೆಡ್ ಕಾನ್ಸ್‌ಟೇಬಲ್ಸ್, 360 ಹೋಂ ಗಾರ್ಡ್ಸ್ ಸೇರಿದಂತೆ ಒಟ್ಟು 2,000 ಪೊಲೀಸ್ ಸಿಬ್ಬಂದಿ, ಮಡಿಕೇರಿ – ಗೋಣಿಕೊಪ್ಪ ದಸರಾದಲ್ಲಿ (Madikeri Gonikoppa Dasara) ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಿದ್ದಾರೆ. ಕಳೆದ ದಸರಾದಲ್ಲಿ ನಡೆದಂತಹ ಸಣ್ಣಪುಟ್ಟ ಲೋಪಗಳನ್ನು ಈ ಬಾರಿ ಸರಿಪಡಿಸಿಕೊಂಡು ಇಲಾಖೆ ಕಾರ್ಯನಿರ್ವಹಿಸಲಿದೆ ಎಂದಿದ್ದಾರೆ. ಇದನ್ನೂ ಓದಿ: ಪಕ್ಷದ ಶಿಸ್ತು ಉಲ್ಲಂಘಿಸಿದ್ದು ಸಾಬೀತಾದ್ರೆ ಸಚಿವ ಸ್ಥಾನದಿಂದ ವಜಾ ಮಾಡುವಂತೆ ಎಐಸಿಸಿ ಸೂಚನೆ: ಸಿಎಂ
Advertisement
Advertisement
ಮಡಿಕೇರಿ ದಸರಾಗೆ 1.5 ಲಕ್ಷ ಮಂದಿ ಆಗಮಿಸುವ ನಿರೀಕ್ಷೆಯಿದೆ. ಮಹಿಳೆಯರು ಹಾಗೂ ಮಕ್ಕಳ ರಕ್ಷಣೆ, ಟ್ರಾಫಿಕ್ ನಿರ್ವಹಣೆ ಹಾಗೂ ಪಾರ್ಕಿಂಗ್ ವ್ಯವಸ್ಥೆಗಳ ಮೇಲೆ ಹೆಚ್ಚಿನ ನಿಗಾ ವಹಿಸಲಾಗುತ್ತದೆ. ಈ ನಿಟ್ಟಿನಲ್ಲಿ ವಿಶೇಷ ತಂಡಗಳನ್ನು ರಚಿಸಿ ಪೊಲೀಸ್ ಇಲಾಖೆ ಕಾರ್ಯ ನಿರ್ವಹಿಸಲಿದೆ ಎಂದು ಮಾಹಿತಿ ನೀಡಿದ್ದಾರೆ.
Advertisement
ನಗರದಲ್ಲಿನ ನಿರ್ಜನ ಪ್ರದೇಶಗಳಲ್ಲಿ, ಹೆಚ್ಚಾಗಿ ಹೊರವಲಯದಲ್ಲಿ ಅಪರಾಧ ಚಟುವಟಿಕೆಗಳನ್ನು ತಡೆಯಲು ಪೊಲೀಸ್ ಜೀಪ್ ಹಾಗೂ ಚೀತಾ ದ್ವಿಚಕ್ರ ವಾಹನಗಳನ್ನು ಪೊಲೀಸ್ ಸಿಬ್ಬಂದಿ ಬಳಸಿ ಗಸ್ತು ನಡೆಸಲಿದ್ದಾರೆ. ಶೋಭಾಯಾತ್ರೆ ವೀಕ್ಷಿಸಲು ಆಗಮಿಸುವ ಸಾರ್ವಜನಿಕರು, ಸುರಕ್ಷತಾ ದೃಷ್ಟಿಯಿಂದ ಹಳೆಯ ಮತ್ತು ಸುರಕ್ಷಿತವಲ್ಲದ ಕಟ್ಟಡ ಏರದಂತೆ ಎಸ್ಪಿ ಮನವಿ ಮಾಡಿದ್ದಾರೆ. ಕಟ್ಟಡದ ಮಾಲೀಕರು ಕೂಡ ಈ ಬಗ್ಗೆ ಗಮನಹರಿಸುವಂತೆ ಸೂಚಿಸಿದರು. ಇದನ್ನೂ ಓದಿ: ಅವಕಾಶಕ್ಕಾಗಿ ಕಾಯಬೇಡಿ. ನೀವೇ ಸ್ವಂತ ಅವಕಾಶಗಳನ್ನು ಸೃಷ್ಟಿಸಿ: ರತನ್ ಟಾಟಾ ಪ್ರಸಿದ್ದ ಅಣಿಮುತ್ತುಗಳನ್ನು ಓದಿ
ಗೋಣಿಕೊಪ್ಪ ದಸರಾದಲ್ಲಿಯೂ ಹೆಚ್ಚಿನ ಜನ ಸೇರುವುದರಿಂದ ವಿಜಯದಶಮಿಯಂದು ಸಂಜೆ 6 ರಿಂದ ಮುಂದಿನ ದಿನ ಬೆಳಿಗ್ಗೆ 6 ಗಂಟೆಯವರೆಗೆ ಸಂಚಾರಿ ವ್ಯವಸ್ಥೆಯಲ್ಲಿ ನಿಯಂತ್ರಣ ಮಾಡಲಾಗುವುದು. ಗೋಣಿಕೊಪ್ಪ ಕಾವೇರಿ ಕಾಲೇಜಿನಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಸಂಚಾರಿ ವ್ಯವಸ್ಥೆಯಲ್ಲಿ ಬದಲಾವಣೆಗಾಗಿ 11 ಕಡೆಗಳಲ್ಲಿ ಚೆಕ್‌ಪೋಸ್ಟ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.