Connect with us

Districts

ಜೈಲಿನಿಂದ ನಾಮಪತ್ರ ಸಲ್ಲಿಸಿದ್ದ ಅಭ್ಯರ್ಥಿಗೆ ಗೆಲುವು..!

Published

on

Share this

ಮಡಿಕೇರಿ: ಜೈಲಿನಿಂದಲೇ ಸ್ಪರ್ಧಿಸಿದ್ದ ಅಭ್ಯರ್ಥಿಯೊಬ್ಬರು ಗೆಲುವು ಸಾಧಿಸಿ ಎಲ್ಲರನ್ನು ನಿಬ್ಬೆರಗಾಗುವಂತೆ ಮಾಡಿದ್ದಾರೆ.

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಎಮ್ಮೆಗುಂಡಿ ಕ್ಷೇತ್ರದ ಪುಲಿಯಂಡ ಬೋಪಣ್ಣ ಗೆಲುವು ಸಾಧಿಸಿರುವ ಬಿಜೆಪಿ ಬೆಂಬಲಿತ ಅಭ್ಯರ್ಥಿ. ಸತತ ನಾಲ್ಕನೇ ಬಾರಿಗೆ ಜಯಭೇರಿ ಸಾಧಿಸಿರುವ ಬೋಪಣ್ಣ, ಕೊನೆ ಕ್ಷಣದಲ್ಲಿ ಪಾಲಿಬೆಟ್ಟ ಪಂಚಾಯ್ತಿ ಎಮ್ಮೆಗುಂಡಿ ವಾರ್ಡ್‍ನಿಂದ ಸ್ಪರ್ಧಿಸಿ ಜೈಲಿನಿಂದ ಬಿಡುಗಡೆಯಾಗಿ ಪ್ರಚಾರ ನಡೆಸಿದ್ದರು.

ಬೋಪಣ್ಣ ಅವರು ಎರಡು ಅವಧಿಗೆ 10 ವರ್ಷ ಪಾಲಿಬೆಟ್ಟ ಗ್ರಾಮ ಪಂಚಾಯತಿ ಅದ್ಯಕ್ಷರಾಗಿ ಬೋಪಣ್ಣ ಸೇವೆ ಸಲ್ಲಿಸಿದ್ದರು. ಈ ಬಾರಿ ಚುನಾವಣೆಗೆ ನಿಲುವ ಎಲ್ಲಾ ತಯಾರಿಸುತ್ತಿರುವ ಹಿನ್ನೆಲೆಯಲ್ಲಿ ದೌರ್ಜನ್ಯ ಪ್ರಕರಣದಡಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದರು. ಅದರೂ ಪಂಚಾಯ್ತಿ ಚುನಾವಣೆಗೆ ನಿಲ್ಲಬೇಕು ನಾಮಪತ್ರ ಸಲ್ಲಿಕೆ ಮಾಡಲು ಅಸಾಧ್ಯವಾಗಿತ್ತು. ಮಡಿಕೇರಿ ವಕೀಲರ ಸಂಘದ ಅಧ್ಯಕ್ಷ ಕವನ್ ಅವರ ಮೂಲಕ ಜಾಮೀನು ಪಡೆಯಲು ಅಂತಿಮ ಕ್ಷಣದವರೆಗೂ ಪ್ರಯತ್ನ ನಡೆಸಿದರು. ಜಾಮೀನು ಸಿಗದ ಹಿನ್ನೆಲೆಯಲ್ಲಿ ನ್ಯಾಯಾಲಯದ ಒಪ್ಪಿಗೆ ಪಡೆದು ಜೈಲಿನಿಂದಲೇ ಬೋಪಣ್ಣ ಸೂಚಕರ ಸಹಾಯದಿಂದ ನಾಮಪತ್ರ ಸಲ್ಲಿಕೆ ಮಾಡಿದ್ದರು.

 

ಅಕ್ಕನ ವಿರುದ್ಧ ತಂಗಿ ಭರ್ಜರಿ ಗೆಲುವು:
ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಮೇಕೇರಿ ಗ್ರಾಮ ಪಂಚಾಯ್ತಿಯಲ್ಲಿ ಅಕ್ಕನ ವಿರುದ್ಧ ತಂಗಿಯ ಭರ್ಜರಿ ಗೆಲುವು ಸಾಧಿಸಿದ್ದಾರೆ.ಬಿಳಿಗೇರಿ ವಾರ್ಡ್ 1 ರಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಪುಷ್ಪಾ ಜಯಗಳಿಸಿದ್ದಾರೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸುಮಾವತಿ ಕೇವಲ 80 ಮತಗಳ ಅಂತರದಿಂದ ಪರಾಜಿತರಾಗಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement