ಮಡಿಕೇರಿ: ಸಮಾಜದಲ್ಲಿ ಪತ್ರಕರ್ತರಿಂದ ಹೆಚ್ಚು ಪ್ರಚಾರಗಿಟ್ಟಿಸಿಕೊಳ್ಳುವವರೇ ಹೆಚ್ಚು. ಅದರಲ್ಲೂ ಈ ಲಾಕ್‍ಡೌನ್ ಸಮಯದಲ್ಲಿ ಬಡ ಜನರಿಗೆ ಸೇವೆ ಮಾಡುವ ಅನೇಕ ಸಂಘ ಸಂಸ್ಥೆಗಳು ಮಾಧ್ಯಮದವರು ಹಾಗೂ ಪತ್ರಕರ್ತರನ್ನು ಕರೆದುಕೊಂಡು ಹೋಗಿ ಪ್ರಚಾರ ಪಡೆದುಕೊಳ್ಳುತ್ತಾರೆ.
ಪ್ರಚಾರ ಕೊಡುವ ಪತ್ರಕರ್ತರೇ ಯಾರಿಗೂ ತಿಳಿಯದಂತೆ ಸಂಕಷ್ಟದಲ್ಲಿ ಇರುವವರಿಗೆ ಮಾಧ್ಯಮ ಸ್ಪಂದನ ತಂಡ ಕಟ್ಟಿಕೊಂಡು ಜಿಲ್ಲೆಯ ವಿವಿಧೆಡೆ ತಮ್ಮ ಕೈಯಿಂದ ಆಗುವ ಸಹಾಯವನ್ನು ಮಾಡುತ್ತಿದ್ದಾರೆ. ಹೌದು, ಕೊಡಗಿನಲ್ಲಿ ಹಲವಾರು ಬಡ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದ್ದು, ಊಟದ ವ್ಯವಸ್ಥೆಗೂ ಆಹಾರ ಪದಾರ್ಥಗಳು ಸಿಗುವುದು ಕಷ್ಟವಾಗಿದೆ. ಇದರಿಂದಾಗಿ ಕೊಡಗು ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರು ಸೇರಿ ಸಂಕಷ್ಟದಲ್ಲಿರುವರಿಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದಾರೆ.
Advertisement
Advertisement
ಪತ್ರಕರ್ತರು ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ದಾನಿಗಳ ಮೂಲಕ ಸಮಸ್ಯೆಯನ್ನು ಪರಿಹಾರ ಮಾಡಿಸಿಕೊಡುತ್ತಿದ್ದಾರೆ. ಸಮಸ್ಯೆ ಇರುವ ಕಡೆಗಳಿಂದ ಕರೆ ಬಂದರೆ ತಕ್ಷಣ ಮಾಧ್ಯಮದವರ ತಂಡ ನೆರವಿಗೆ ಬರುತ್ತಿದೆ. ಈಗಾಗಲೇ ಜಿಲ್ಲೆಯ ಹಲವು ಬಡ ಕುಟುಂಬಗಳಿಗೆ ಮಾಧ್ಯಮ ತಂಡದ ಸದಸ್ಯರು ಮನೆಗೆ ನೇರವಾಗಿ ತೆರಳಿ ಆಹಾರ ಪದಾರ್ಥಗಳನ್ನು ವಿತರಿಸುವ ಕೆಲಸ ಮಾಡುತ್ತಿದ್ದಾರೆ.
Advertisement
Advertisement
ಜಿಲ್ಲೆಯ ವಿವಿಧೆಡೆ ಇರುವ ಪತ್ರಕರ್ತರು ತಮ್ಮ ವೃತ್ತಿಯೊಂದಿಗೆ ಈ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ತೋಟದಲ್ಲಿ ಕೂಲಿ ಮಾಡುವ ಕಾರ್ಮಿಕರು, ಅನಾರೋಗ್ಯ ಪೀಡಿತರು ಹಾಗೂ ಬಡವರಿಗೆ ಗರ್ಭಿಣಿಯರಿಗೆ ಮಾಧ್ಯಮ ಸ್ಪಂದನಾ ತಂಡ ನೆರವಾಗುತ್ತಿದೆ. ತಮ್ಮ ಕಾಯಕದ ನಡುವೆಯೂ ಕೊಡಗಿನ ಮಾಧ್ಯಮದ ವರದಿಗಾರರು ಈ ರೀತಿಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಇತರರಿಗೂ ಮಾದರಿಯಾಗಿದ್ದಾರೆ.