ಮಡಿಕೇರಿ: ಚುನಾವಣೆ ಉದ್ದೇಶದಿಂದ ಟಿಪ್ಪು ಜಯಂತಿಯನ್ನು ವಿರೋಧಿಸಿ, ಸಮಾಜದ ಸ್ವಾಸ್ಥ್ಯ ಹಾಳುಮಾಡುವವರ ವಿರುದ್ಧ ಕಠಿಣ ಕ್ರಮಗೊಳ್ಳಬೇಕು ಎಂದು ಹಿರಿಯ ರಾಜಕಾರಣಿ ಎಂ.ಸಿ ನಾಣಯ್ಯ ಹೇಳಿದ್ದಾರೆ.
ಮಾಧ್ಯಮಗಳ ಜೊತೆಗೆ ಇಂದು ಮಾತನಾಡಿದ ಅವರು, ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಇರುವಾಗ ಟಿಪ್ಪು ಜಯಂತಿಯನ್ನು ಬಿಜೆಪಿ ಸಂಘ ಪರಿವಾರ ದಾಳವಾಗಿ ಬಳಸಿಕೊಳ್ಳುತ್ತಿದೆ. ಮತ ಗಿಟ್ಟಿಸಿಕೊಳ್ಳಲು ಟಿಪ್ಪು ಜಯಂತಿಗೆ ವಿರೋಧ ವ್ಯಕ್ತಪಡಿಸಿ, ಪ್ರತಿಭಟನೆ ಮಾಡಲಾಗುತ್ತಿದೆ ಎಂದು ಆರೋಪಿಸಿದರು. ಇದನ್ನು ಓದಿ: ಸಿಎಂ ಹೊಗಳಿ ವೇದಿಕೆಯಲ್ಲೇ ಎರಡು ಮನವಿ ಇಟ್ಟ ಪ್ರತಾಪ್ ಸಿಂಹ
Advertisement
Advertisement
ಅಮಾಯಕ ಜನರನ್ನು ಬಳಸಿಕೊಂಡು ಪ್ರತಿಭಟನೆ ಮಾಡುವುದನ್ನು ಬಿಟ್ಟು, ವಿಧಾನಸಭೆ ಮತ್ತು ಪರಿಷತ್‍ನಲ್ಲಿ ಚರ್ಚಿಸಿ ಬಹುಮತದ ಆಧಾರದಲ್ಲಿ ನಿರ್ಣಯ ಕೈಗೊಳ್ಳಬೇಕು. ಆಗ ಬಹುಮತ ಹೇಗಿರುತ್ತದೆಯೋ ಹಾಗೇ ನಿರ್ಣಯ ಬರುತ್ತದೆ. ಒಂದು ವೇಳೆ ಬೇಡ ಅಂತಾ ನಿರ್ಣಯವಾದಲ್ಲಿ ಜಯಂತಿ ಆಚರಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಹೇಳಿದರು. ಇದನ್ನು ಓದಿ: ಸಿದ್ದರಾಮಯ್ಯ ಜಾರಿಗೆ ತಂದ ಟಿಪ್ಪು ಜಯಂತಿ ಕೈಬಿಡುತ್ತಾರಾ ಎಚ್‍ಡಿಕೆ?
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv