ಮಡಿಕೇರಿ: ಭಾರತೀಯ ಸಂಸ್ಕೃತಿಯ ಹೊಸ ವರ್ಷವೇ ಯುಗಾದಿ. ಈ ಹಬ್ಬವನ್ನು ಕೊರೊನಾ ವೈರಸ್‍ನ ಆತಂಕದ ನಡುವೆಯೂ ಜಿಲ್ಲೆಯಲ್ಲಿ ಸರಳವಾಗಿ ಆಚರಿಸಲಾಗುತ್ತಿದೆ.
ಜಿಲ್ಲೆಯಲ್ಲಿ ಯುಗಾದಿ ಹಬ್ಬದ ದಿನ ಬಹುತೇಕರು ತಮ್ಮ ಮನೆಯನ್ನು ತಳಿರು-ತೋರಣಗಳಿಂದ ಸಿಂಗರಿಸಿ ಹೊಸ ವರ್ಷವನ್ನು ಸ್ವಾಗತಿಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ಜಿಲ್ಲೆಯ ಜನರು ದೇವಾಲಯಗಳಿಗೆ ತೆರಳದೆ ಮನೆಯಲ್ಲೇ ಪೂಜೆ ಸಲ್ಲಿಸುತ್ತಿದ್ದಾರೆ. ಅದರಂತೆ ಬಹುತೇಕ ಜನರು ಸರಳವಾಗಿ ಈ ಯುಗಾದಿ ಹಬ್ಬವನ್ನು ಆಚರಣೆ ಮಾಡುತ್ತಿದ್ದಾರೆ.
Advertisement
Advertisement
ಮನೆಯಲ್ಲಿ ಇರುವ ದೇವರಿಗೆ ಹೂಗಳಿಂದ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಗುತ್ತಿದೆ. ಮನೆ ಮಂದಿ ಎಲ್ಲಾ ಬೇವು-ಬೆಲ್ಲದ ಸವಿಯನ್ನು ಸವಿಯುತ್ತಿದ್ದಾರೆ. ಇದೇ ಮೊದಲ ಬಾರಿಗೆ ಎಲ್ಲರೂ ಮನೆಯಲ್ಲಿ ಇದ್ದುಕೊಂಡೇ ಹಬ್ಬ ಆಚರಿಸುತ್ತಿರುವುದು ಒಂದು ರೀತಿಯಲ್ಲಿ ಖುಷಿಯಾಗುತ್ತಿದೆ. ಆದರೆ ಈ ಕೊರೊನಾ ಮಾಹಾಮಾರಿ ಈ ದೇಶವನ್ನು ಬಿಟ್ಟು ತೊಲಗಬೇಕು. ನಾಡಿನ ಜನರು ಸುಖ-ಶಾಂತಿಯಿಂದ ಜೀವನ ನಡೆಸುವ ಹಾಗೆ ಆಗಬೇಕು ಎಂದು ಜನರು ಹೇಳುತ್ತಿದ್ದಾರೆ.
Advertisement
ಅಲ್ಲದೆ ಜನ ಸಾಮಾನ್ಯರಿಗೋಸ್ಕರ ಶ್ರಮಿಸುತ್ತಿರುವ ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಪ್ರಧಾನಿ ಮೋದಿ, ಮುಖ್ಯಮಂತ್ರಿಗಳಿಗೆ ಇದೇ ಸಂದರ್ಭದಲ್ಲಿ ಅಭಿನಂದನೆಗಳು ಜನಸಾಮಾನ್ಯರು ಸಲ್ಲಿಸುತ್ತಿದ್ದಾರೆ.