ಮಡಿಕೇರಿ: ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ನಾಪೋಕ್ಲು ಭಾಗದಲ್ಲಿ ಇಂದು ಸಂಜೆ ಉತ್ತಮ ಮಳೆಯಾಗಿದೆ.
ಬೆಳಗ್ಗೆಯಿಂದಲೂ ಜಿಲ್ಲೆಯ ಸುತ್ತಮುತ್ತ ಮೋಡ ಕವಿದ ವಾತಾವರಣ ಇತ್ತು. ಸಂಜೆಯಾಗುತ್ತಲೇ ನಾಪೋಕ್ಲು ಸುತ್ತಮುತ್ತಲಿನ ಅರ್ಧಗಂಟೆಗೂ ಅಧಿಕ ಕಾಲ ಸಾಧಾರಣವಾಗಿ ಮಳೆ ಸುರಿದಿದೆ. ಅಕಾಲಿಕವಾಗಿ ಸುರಿಯುತ್ತಿರುವ ಮಳೆಯಿಂದ ಕಾಫಿ ಬೆಳೆಗಾರರು ಆತಂಕಗೊಂಡಿದ್ದಾರೆ.
Advertisement
Advertisement
ಅರೇಬಿಕಾ ಕಾಫಿ ಹಣ್ಣಾಗಿದ್ದು, ಮಳೆಯಿಂದ ಉದುರುವ ಆತಂಕ ಎದುರಾಗಿದೆ. ಮಡಿಕೇರಿ, ತಲಕಾವೇರಿ, ಭಾಗಮಂಡಲ, ಗೋಣಿಕೊಪ್ಪಲು, ನಾಪೋಕ್ಲು, ಬೆಟ್ಟಗೇರಿ, ಚೆಟ್ಟಿಮಾನಿ, ಅಪ್ಪಂಗಳ, ಕಾಟಕೇರಿ ಮತ್ತು ಮದೆನಾಡು ವ್ಯಾಪ್ತಿಯಲ್ಲೂ ಮೋಡ ಕವಿದ ವಾತಾವರಣ ಇದೆ.