ಮಡಿಕೇರಿ: ಕಳೆದ ಬಾರಿ ಸುರಿದ ಭಾರೀ ಮಳೆಗೆ ಸಂಪರ್ಕ ಕಳೆದುಕೊಂಡಿದ್ದ ಎನ್.ಹೆಚ್ 275 ಮಡಿಕೇರಿ-ಸಂಪಾಜೆ ರಸ್ತೆಯ ತಡೆಗೋಡೆ ನಿರ್ಮಾಣ ಹಾಗೂ ಮತ್ತಿತರೆ ಅಭಿವೃದ್ಧಿ ಕೆಲಸಗಳಿಗೆ ಕೇಂದ್ರ ಸರ್ಕಾರ 58.8 ಕೋಟಿ ರೂ. ಅನುದಾನವನ್ನು ಮಂಜೂರು ಮಾಡಿದೆ.
ಮಳೆಯಿಂದ ತೀವ್ರ ಹಾನಿಯಾಗಿರುವ ಎನ್‍ಹೆಚ್ 275 ಮಡಿಕೇರಿ-ಸಂಪಾಜೆ ರಸ್ತೆ ದುರಸ್ತಿಗೆ ಮೈಸೂರು ಹಾಗೂ ಕೊಡಗು ಸಂಸದ ಪ್ರತಾಪ್ ಸಿಂಹ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಸಲ್ಲಿಸಿದ್ದರು.
Advertisement
Advertisement
ಇದಕ್ಕೆ ಸ್ಪಂದಿಸಿದ ಕೇಂದ್ರ ಸರ್ಕಾರ ತಡೆಗೋಡೆ, ರಸ್ತೆ, ಚರಂಡಿ ಸೇರಿದಂತೆ ವಿವಿಧ ಅಭಿವೃದ್ಧಿ ಕೆಲಸಗಳಿಗೆ 58.8 ಕೋಟಿ ರೂ. ಬಿಡುಗಡೆ ಮಾಡಿದೆ. ಕಳೆದ ಬಾರಿ ಸುರಿದ ಭಾರೀ ಮಳೆಯಿಂದಾಗಿ ಮಡಿಕೇರಿ ಸಂಪಾಜೆ ರಸ್ತೆ ಕೊಚ್ಚಿ ಹೋಗಿತ್ತು. ಇದರಿಂದಾಗಿ ರಸ್ತೆ ಸಂಪರ್ಕ ಕಡಿತಗೊಂಡಿತ್ತು. ಇದೀಗ ದುರಸ್ತಿ ಹಾಗೂ ತಡೆಗೋಡೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ.