ಮಡಿಕೇರಿ: ಶ್ರೀನಗರದಲ್ಲಿ ಹಿಮಪಾತಕ್ಕೆ ಸಿಲುಕಿ ಹುತಾತ್ಮರಾದ ಕೊಡಗಿನ ವೀರಯೋಧ ಅಲ್ತಾಫ್ ಅಹ್ಮದ್ (37) ಅವರಿಗೆ ಸಕಲ ಸರ್ಕಾರಿ ಮತ್ತು ಸೇನಾ ಗೌರವದೊಂದಿಗೆ ಗೌರವಪೂರ್ಣ ವಿದಾಯ ಸಲ್ಲಿಸಲಾಯಿತು.
ಯೋಧನ ಕುಟುಂಬಸ್ಥರು ಮತ್ತು ಅಧಿಕಾರಿಗಳು, ನಿವೃತ್ತ ಯೋಧರು, ಜನಪ್ರತಿನಿಧಿಗಳು, ಸಾರ್ವಜನಿಕರು, ವಿರಾಜಪೇಟೆ ತಾಲೂಕು ಮೈದಾನದಲ್ಲಿ ಯೋಧನಿಗೆ ಅಂತಿಮ ನಮನ ಸಲ್ಲಿಸಿದರು. ಭಾರತೀಯ ಸೇನೆ, ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆಯಿಂದ 21 ಸುತ್ತು ಕುಶಾಲತೋಪು ಸಿಡಿಸಿ ಯೋಧ ಅಲ್ತಾಫ್ ಅಹ್ಮದ್‍ಗೆ ಗೌರವ ಸಲ್ಲಿಸಲಾಯಿತು. ಇದನ್ನೂ ಓದಿ: ಉಕ್ರೇನ್‌ಗೆ 4,503 ಕೋಟಿ ರೂ. ಭದ್ರತಾ ನೆರವು ಘೋಷಿಸಿದ ಅಮೆರಿಕ
ಸೇನೆಯ ಡಿಎಸ್‍ಸಿ ವಿಭಾಗದಿಂದ ಗಾರ್ಡ್ ಆಫ್ ಹಾನರ್ ಸಲ್ಲಿಸಲಾಯಿತು. ಅಲ್ತಾಫ್ ಕುಟುಂಬಕ್ಕೆ ಸೇನೆಯಿಂದ ತ್ರಿವರ್ಣ ಧ್ವಜ ಹಸ್ತಾಂತರ ಮಾಡುವ ವೇಳೆ ಯೋಧನ ಪತ್ನಿ ಜುಬೇರಿಯಾ ಕುಸಿದು ಬಿದ್ದ ದೃಶ್ಯ ಮನಕಲುಕುವಂತಿತ್ತು. ಅಲ್ಲದೇ ಯೋಧನ ಮಗಳು ಹಾಗೂ ಮಗ ಸೈನಿಕರ ಸಮವಸ್ತ್ರ ಧರಿಸಿ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ದೇಶ ಪ್ರೇಮದ ಸಂದೇಶ ಸಾರಿದ್ರು. ಇದನ್ನೂ ಓದಿ: ಫೋನ್‌ನಲ್ಲಿ ಮಾತನಾಡುವಾಗ ಬಾಂಬ್ ಹಾಕುತ್ತಿದ್ದಾರೆ ಎಂದು ಬಂಕರ್‌ಗೆ ಓಡಿ ಹೋದ: ಪೋಷಕರ ಆಳಲು
ವಿರಾಜಪೇಟೆ ತಾಲೂಕು ಮೈದಾನದಿಂದ ಇದ್ಗಾ ಮೈದಾನಕ್ಕೆ ಯೋಧನ ಮೆರವಣಿಗೆ ನಡೆಯಿತು. ನಂತರ ಇದ್ಗಾ ಮೈದಾನದಲ್ಲಿ ಅಂತ್ಯಕ್ರಿಯೆ ನಡೆಯಿತ್ತು. ಫೆಬ್ರವರಿ 23ರಂದು ಶ್ರಿನಗರದಲ್ಲಿ ಹಿಮಪಾತಕ್ಕೆ ಸಿಲುಕಿ ಕೊಡಗು ಮೂಲದ ಯೋಧ ಹವಾಲ್ದಾರ್ ಅಲ್ತಾಫ್ ಅಹ್ಮದ್ ಹುತಾತ್ಮರಾಗಿದ್ದರು. ಇವರು ಎಒಸಿ ರೆಜಿಮೆಂಟ್‍ನಲ್ಲಿ ಕರ್ತವ್ಯದಲ್ಲಿದ್ದರು. ಅಲ್ತಾಫ್ ಕುಟುಂಬ ಕಳೆದ 10 ವರ್ಷಗಳಿಂದ ಕೇರಳದ ಮಟ್ಟನೂರು ಜಿಲ್ಲೆಯಲ್ಲಿ ನೆಲೆಸಿದೆ.