ಮಡಿಕೇರಿ: ಮಡಿಕೇರಿ-ಸೋಮವಾರಪೇಟೆ ರಾಜ್ಯ ಹೆದ್ದಾರಿಯು ಇಂದು ಮಧ್ಯಾಹ್ನದ ನಂತರ ವಾಹನ ಸಂಚಾರಕ್ಕೆ ಮುಕ್ತವಾಗಲಿದೆ. ಮಡಿಕೇರಿ ಶಾಸಕರ ಅಪ್ಪಚ್ಚು ರಂಜನ್ ಅವರು ಪೂಜೆ ಸಲ್ಲಿಸಿ, ಚಾಲನೆ ನೀಡಲಿದ್ದಾರೆ.
ಆಗಸ್ಟ್‍ನಲ್ಲಿ ಕೊಡಗು ಜಿಲ್ಲೆಯಲ್ಲಿ ಸುರಿದ ಮಹಾಮಳೆಗೆ ಸೋಮವಾರ ಪೇಟೆ ತಾಲೂಕಿನ ಮಾದಾಪುರ, ಹಟ್ಟಿಹೊಳೆ ಮತ್ತು ಮುಕ್ಕೋಡ್ಲು ಪ್ರದೇಶದಲ್ಲಿ ಸೇತುವೆ ಮತ್ತು ಭೂಕುಸಿತವಾಗಿತ್ತು. ಇತ್ತ ಮಡಿಕೇರಿ-ಸೋಮವಾರಪೇಟೆ ರಾಜ್ಯ ಹೆದ್ದಾರಿಯಲ್ಲಿ ಒಂಬತ್ತು ಕಡೆಗೆ ಭೂಸಿತವಾಗಿತ್ತು. ಇದರಿಂದಾಗಿ ಸಂಚಾರ ಅಸ್ತವ್ಯಸ್ತಗೊಂಡಿತ್ತು.
Advertisement
ಈಗಾಗಲೇ ಲೋಕೋಪಯೋಗಿ ಇಲಾಖೆಯು ರಸ್ತೆ ದುರಸ್ತಿ ಕಾಮಗಾರಿಯನ್ನು ಪೂರ್ಣಗೊಳಿಸಿದ್ದು, ಬರೋಬ್ಬರಿ ಒಂದು ತಿಂಗಳ ಬಳಿಕ ವಾಹನ ಸಂಚಾರಕ್ಕೆ ಮಡಿಕೇರಿ-ಸೋಮವಾರ ರಾಜ್ಯ ಹೆದ್ದಾರಿ ಮುಕ್ತವಾಗಿದೆ.
Advertisement
Advertisement
ನಿವಾಸಕ್ಕೆ ಆಗ್ರಹ:
ಪ್ರಕೃತಿ ವಿಕೋಪದಿಂದಾಗಿ ಮನೆಯನ್ನು ಕಳೆದುಕೊಂಡ ಕೊಡಗು ಸಂತ್ರಸ್ತರಿಗೆ ಶಾಶ್ವತ ಪುನರ್ವಸತಿ ಕಲ್ಪಿಸಬೇಕು ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಸತ್ಯಾಗ್ರಹ ನಡೆಸಲಾಗುತ್ತಿದೆ. ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ನಂದಿನೆರವಂಡ ನಾಚಪ್ಪ ಸತ್ಯಾಗ್ರಹದ ಮುಂದಾಳತ್ವದಲ್ಲಿ 100ಕ್ಕೂ ಹೆಚ್ಚು ಮಂದಿ ನಿರಾಶ್ರಿತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv