ನವದೆಹಲಿ: 2014ರಲ್ಲಿ ನಮ್ಮ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿದ್ದು, 1947ರಲ್ಲಿ ಸಿಕ್ಕಿದ್ದು ಭಿಕ್ಷೆ ಎಂದು ಹೇಳಿಕೆ ನೀಡಿದ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಇದು ಹುಚ್ಚುತನವೋ ಅಥವಾ ದೇಶದ್ರೋಹವೋ ಎಂದು ಬಿಜೆಪಿ ಸಂಸದ ವರುಣ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
Advertisement
ಖಾಸಗಿ ವಾಹಿನಿಯ ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ ಕಂಗನಾ, ಭಾರತಕ್ಕೆ 1947 ರಲ್ಲಿ ಸಿಕ್ಕಿದ್ದು ಸ್ವಾತಂತ್ರ್ಯವಲ್ಲ ಅದು ಭಿಕ್ಷೆ. ನಮಗೆ ನಿಜವಾದ ಸ್ವಾತಂತ್ರ್ಯ ಸಿಕ್ಕಿದ್ದು 2014ರಲ್ಲಿ. ನಾನು ರಾಷ್ಟ್ರೀಯತೆ, ಸೇನೆ ಮತ್ತು ನಮ್ಮ ಸಂಸ್ಕೃತಿಯನ್ನು ಬೆಂಬಲಿಸಿ ಮಾತನಾಡುವಾಗ ನಾನು ಬಿಜೆಪಿಯ ಅಜೆಂಡಾವನ್ನು ಪಾಲಿಸುತ್ತೇನೆ ಎಂದು ಕೆಲವರು ಹೇಳುತ್ತಾರೆ. ನಾನು ಆ ರೀತಿ ಇಲ್ಲ. ನಾನು ನಮ್ಮ ಸಂಸ್ಕೃತಿಯನ್ನು ಗೌರವಿಸುತ್ತೇವೆ. ಸಾಮಾಜಿಕ ಜಾಲತಾಣದಲ್ಲಿ ನಾನು ಕಲಾವಿದೆಯಾಗಿ ಅಲ್ಲ ಸಾಮಾನ್ಯ ಪ್ರಜೆಯಾಗಿ ಇರುತ್ತೇನೆ. ನಮ್ಮ ದೇಶ ಪ್ರಸ್ತುತ ದಿನಗಳಲ್ಲಿ ವಿಶ್ವಮಾನ್ಯತೆ ಪಡೆದುಕೊಳ್ಳುತ್ತಿದೆ ಎಂದಿದ್ದರು. ಇದನ್ನೂ ಓದಿ: ಗೃಹಿಣಿ, ಮಗುವಿನ ತಾಯಿಯಾಗಬಯಸಿದ್ದಾರಂತೆ ಕಂಗನಾ- ಬಾಳ ಸಂಗಾತಿ ಬಗ್ಗೆ ನಟಿ ಸುಳಿವು!
Advertisement
कभी महात्मा गांधी जी के त्याग और तपस्या का अपमान, कभी उनके हत्यारे का सम्मान, और अब शहीद मंगल पाण्डेय से लेकर रानी लक्ष्मीबाई, भगत सिंह, चंद्रशेखर आज़ाद, नेताजी सुभाष चंद्र बोस और लाखों स्वतंत्रता सेनानियों की कुर्बानियों का तिरस्कार।
इस सोच को मैं पागलपन कहूँ या फिर देशद्रोह? pic.twitter.com/Gxb3xXMi2Z
— Varun Gandhi (@varungandhi80) November 11, 2021
Advertisement
ಕಂಗನಾ ಈ ಹೇಳಿಕೆಗೆ ಟ್ವಿಟ್ಟರ್ ಮೂಲಕ ತಿರುಗೇಟು ನೀಡಿರುವ ವರುಣ್ ಗಾಂಧಿ, ಒಮ್ಮೆ ಮಹಾತ್ಮ ಗಾಂಧೀಜಿಯವರ ತ್ಯಾಗ ಮತ್ತು ತಪಸ್ಸಿಗೆ ಅವಮಾನ, ಮತ್ತೆ ಗಾಂಧೀಜಿ ಹಂತಕನಿಗೆ ಗೌರವ. ಈಗ ಮಂಗಲ್ ಪಾಂಡೆ, ರಾಣಿ ಲಕ್ಷ್ಮೀಬಾಯಿ, ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ನೇತಾಜಿ ಸುಭಾಷ್ ಚಂದ್ರ ಬೋಸ್ ಮತ್ತು ಲಕ್ಷಾಂತರ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗದ ಬಗ್ಗೆಯೇ ತಿರಸ್ಕಾರ ಮನೋಭಾವ ಈ ರೀತಿಯ ಆಲೋಚನೆಯನ್ನು ಹುಚ್ಚುತನ ಎನ್ನಬೇಕೋ ಅಥವಾ ದೇಶದ್ರೋಹ ಎಂದು ಕರೆಯಬೇಕೋ ಎಂದು ವರುಣ್ ಗಾಂಧಿ ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.
Advertisement
ಕಂಗನಾ ಈ ರೀತಿ ಹೇಳಿಕೆ ಬಳಿಕ ಹಲವು ಮಂದಿ ಈ ಹೇಳಿಕೆಯನ್ನು ಖಂಡಿಸಿದ್ದಾರೆ. ಕಂಗನಾ ಈ ಹೇಳಿಕೆ ಮಹಾತ್ಮಾ ಗಾಂಧಿ, ಮಂಗಲ್ ಪಾಂಡೆ, ರಾಣಿ ಲಕ್ಷ್ಮೀಬಾಯಿ, ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ಸುಭಾಷ್ ಚಂದ್ರಬೋಸ್ ಸೇರಿದಂತೆ ಲಕ್ಷಾಂತರ ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಡಿರುವ ಅವಮಾನ ಎಂದು ಕಂಗನಾ ವಿರುದ್ಧ ನೆಟ್ಟಿಗರು ಮುಗಿಬಿದ್ದಿದ್ದಾರೆ. ಇದನ್ನೂ ಓದಿ: ಜನವರಿ ಅಂತ್ಯಕ್ಕೆ ಬೊಮ್ಮಾಯಿ ಅಧಿಕಾರ ಹೋಗುತ್ತೆ: ಶಿವರಾಜ್ ತಂಗಡಗಿ