ಗಾಂಧಿನಗರ: 10ಕ್ಕೂ ಹೆಚ್ಚು ಅಪ್ರಾಪ್ತ ವಿದ್ಯಾಥಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಗುಜರಾತ್‍ನ (Gujarat) ಜುನಾಗಢದ ಮದರಸಾವೊಂದರ (Madrasa) ಶಿಕ್ಷಕನನ್ನು (Teacher) ಪೊಲೀಸರು (Police) ಬಂಧಿಸಿದ್ದಾರೆ. ಅಲ್ಲದೇ ವಿದ್ಯಾರ್ಥಿಗಳ ದೂರುಗಳ ಬಗ್ಗೆ ಕ್ರಮ ಕೈಗೊಳ್ಳದ ಮದರಸಾ ಟ್ರಸ್ಟಿಯನ್ನೂ ಪೊಲೀಸರು ಬಂಧಿಸಿದ್ದಾರೆ.
ವಿದ್ಯಾರ್ಥಿನಿ, ಶಿಕ್ಷಕನೊಂದಿಗೆ ಮೊಬೈಲ್‍ನಲ್ಲಿ ಮಾತನಾಡುವಾಗ ಗಮನಿಸಿದ್ದ ತಾಯಿ ಸಂಶಯದಿಂದ ಆಕೆಯನ್ನು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಬಳಿಕ ಬಾಲಕಿಯ ತಾಯಿ ದೂರು ದಾಖಲಿಸಿದ್ದಾಳೆ. ಶಿಕ್ಷಕನ ಕೃತ್ಯ ಬಯಲಿಗೆ ಬರುತ್ತಿದ್ದಂತೆ ಆರೋಪಿಗಳಿಬ್ಬರು ತಲೆಮರೆಸಿಕೊಂಡಿದ್ದರು. ಪೊಲೀಸರು ಇಬ್ಬರನ್ನೂ ಪತ್ತೆಮಾಡಿ ಬಂಧಿಸಿದ್ದಾರೆ. ಇದನ್ನೂ ಓದಿ: ವರ್ತೂರ್ ಸಂತೋಷ್ ವಿಚಾರಣಾಧೀನ ಕೈದಿ ನಂ.10935
ಈ ಸಂಬಂಧ ಪೊಲೀಸರು ಶಾಲೆಗೆ ತೆರಳಿ ವಿದ್ಯಾರ್ಥಿಗಳ ವಿಚಾರಿಸಿದ ಬಳಿಕ 10 ವಿದ್ಯಾರ್ಥಿಗಳು ಬಂದು ದೌರ್ಜನ್ಯದ ವಿಚಾರವನ್ನು ಹೇಳಿಕೊಂಡಿದ್ದಾರೆ. ಅಲ್ಲದೇ ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ಕೊಲ್ಲುವ ಬೆದರಿಕೆ ಹಾಕಿದ್ದಾರೆ. ಈ ವಿಚಾರವನ್ನು ಟ್ರಸ್ಟಿಗೆ ತಿಳಿಸಲಾಗಿದೆ. ಆದರೆ ಅವರು ಯಾವ ಕ್ರಮವನ್ನೂ ಕೈಗೊಂಡಿಲ್ಲ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ.
ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 377 (ಅಸ್ವಾಭಾವಿಕ ಲೈಂಗಿಕತೆ), 323 (ಹಲ್ಲೆ), 506-2 (ಬೆದರಿಕೆ) ಹಾಗೂ ಪೋಕ್ಸೊ ಅಡಿಯಲ್ಲಿ ಎಫ್‍ಐಆರ್ ದಾಖಲಿಸಿದ್ದಾರೆ. ಇದನ್ನೂ ಓದಿ: ಅಂಬುಲೆನ್ಸ್‌ಗೆ ಲಾರಿ ಡಿಕ್ಕಿ- ರೋಗಿ ಸ್ಥಳದಲ್ಲೇ ಸಾವು
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]