ಮದರಸಾದಲ್ಲಿ ಓದಿದ ಬಳಿಕ ಡಾಕ್ಟರ್, ಇಂಜಿನಿಯರ್ ಆಗಲು ಸಾಧ್ಯವಿಲ್ಲ: ಹಿಮಂತ್ ಬಿಸ್ವಾ ಶರ್ಮಾ

Public TV
1 Min Read
Himant biswa 2

ಡಿಸ್ಪುರ್: ಶಾಲೆಗಳು ಆಧುನಿಕ ಶಿಕ್ಷಣವನ್ನು ನೀಡಬೇಕು ಇದರಿಂದ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಏನು ಬೇಕಾದರೂ ಮಾಡುವ ಆಯ್ಕೆಯನ್ನು ಹೊಂದಿರುತ್ತಾರೆ. ಆದರೆ ಧಾರ್ಮಿಕ ಶಿಕ್ಷಣವನ್ನು ಮನೆಯಲ್ಲಿಯೇ ನೀಡಬಹುದು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಹೇಳಿದ್ದಾರೆ.

ASSAM MADARASA MADRASA

ಮಕ್ಕಳಿಗೆ ಮದರಸಾಗಳಲ್ಲಿ ನೀಡುತ್ತಿರುವ ಶಿಕ್ಷಣವನ್ನು ವಿರೋಧಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಮಕ್ಕಳಿಗೆ ನೀವು ಮದರಸಾದಲ್ಲಿ ಓದಿದ ಬಳಿಕ ಡಾಕ್ಟರ್ ಅಥವಾ ಇಂಜಿನಿಯರ್ ಆಗಲು ಸಾಧ್ಯವಾಗುವುದಿಲ್ಲ ಎಂದು ಹೇಳಿದರೆ ಅವರು ಮದರಸಾಗೆ ಹೋಗಲು ಸಿದ್ಧರಿರುವುದಿಲ್ಲ. ಅಂತಹ ಧಾರ್ಮಿಕ ಶಾಲೆಗಳಿಗೆ ಅವರನ್ನು ಸೇರಿಸುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದಿದ್ದಾರೆ.  ಇದನ್ನೂ ಓದಿ: ಜನರಲ್ ಟಿಕೆಟ್‍ಗಾಗಿ ರೈಲು ಪ್ರಯಾಣಿಕರ ನೂಕಾಟ

ಮದರಸಾ ಎಂಬ ಪದ ಮನಸ್ಸಿನಲ್ಲಿ ಇರುವವರೆಗೂ ಮಕ್ಕಳು ಎಂದಿಗೂ ಡಾಕ್ಟರ್ ಅಥವಾ ಇಂಜಿನಿಯರ್ ಆಗಲು ಸಾಧ್ಯವಿಲ್ಲ. ಮದರಸಾಗಳಲ್ಲಿನ ಶಿಕ್ಷಣ ವ್ಯವಸ್ಥೆಯು ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಏನನ್ನಾದರೂ ಮಾಡಲು ಆಯ್ಕೆಗಳಿರುವುದಿಲ್ಲ. ಯಾವುದೇ ಧಾರ್ಮಿಕ ಸಂಸ್ಥೆಗೆ ಪ್ರವೇಶಸುವ ವ್ಯಕ್ತಿ ತಮ್ಮದೇ ಆದ ನಿರ್ಧಾರಗಳನ್ನು ತೆಗೆದುಕೊಳ್ಳುವ ವಯಸ್ಸಿನಲ್ಲಿರಬೇಕು. ಇದನ್ನೂ ಓದಿ:  ಮದುವೆಯಲ್ಲಿ ಕಳ್ಳರ ಕೈಚಳಕ- ಕಣ್ಣಾಮುಚ್ಚಾಲೆ ಆಡುವ ನೆಪದಲ್ಲಿ ಚಿನ್ನಾಭರಣ ಕಳ್ಳತನ

ಔಪಚಾರಿಕ ಶಿಕ್ಷಣಕ್ಕಿಂತ ಧಾರ್ಮಿಕ ಶಿಕ್ಷಣಕ್ಕೆ ಆದ್ಯತೆ ನೀಡುವ ಮದರಸಾಗಳು ಅಸ್ತಿತ್ವದಲ್ಲಿಲ್ಲ ಎಂದು ನಾನು ಯಾವಾಗಲೂ ಪ್ರತಿಪಾದಿಸುತ್ತೇನೆ. ಪ್ರತಿ ಮಗುವೂ ವಿಜ್ಞಾನ, ಗಣಿತ ಮತ್ತು ಆಧುನಿಕ ಶಿಕ್ಷಣದ ಜ್ಞಾನವನ್ನು ಹೊಂದಿರಬೇಕು ಎಂದು ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *