ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಜೈಲು ಸೇರಿರುವ ನಟ ದರ್ಶನ್ (Darshan) ಜೈಲೂಟವನ್ನೇ ಸೇವಿಸಬೇಕಿದೆ.
ಮನೆಯಿಂದ ಊಟ (Home Cooked Food) ಹಾಗೂ ಹಾಸಿಗೆ ಸೌಲಭ್ಯ ಪಡೆಯುವುದಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜುಲೈ 25ಕ್ಕೆ ಆದೇಶ ಕಾಯ್ದಿರಿಸಿದೆ. ದರ್ಶನ್ ಪರ ಮತ್ತು ಪೊಲೀಸರ ಪರ ವಕೀಲರ ವಾದವನ್ನು ಆಲಿಸಿದ ನ್ಯಾಯಾಧೀಶರು ಜುಲೈ 25 ರಂದು ಆದೇಶ ಪ್ರಕಟಿಸುವುದಾಗಿ ತಿಳಿಸಿದರು.
Advertisement
Advertisement
ದರ್ಶನ್ ಪರ ವಕೀಲರ ವಾದ ಏನಿತ್ತು?
ಆರೋಪಿಗೆ ಜೈಲಿನಲ್ಲಿ ಇರುವಾಗ ಮನೆಯ ಊಟ ಪಡೆಯಬಹುದು. ಇದು ವಿಚಾರಣಾಧೀನ ಕೈದಿಯ ಹಕ್ಕು. ಜೈಲಿನ ನಿಯಮಗಳಲ್ಲಿ ಇದರ ಉಲ್ಲೇಖ ಇದೆ. ಆರೋಪಿಗೆ ಕೆಲವೊಂದು ನಿಬಂಧನೆಗಳನ್ನು ಹೇಳಿ ಅವಕಾಶ ಕೊಡಿಸಬಹುದು. ತಮ್ಮದೇ ವೆಚ್ಚದಲ್ಲಿ ಇದನ್ನು ಪಡೆಯಲು ಅವಕಾಶವನ್ನು ಹೊಂದಿಸಲಾಗಿದೆ. ಕೊಲೆಯ ಆರೋಪಿಗಳಿಗೆ ವಿನಾಯಿತಿ ನೀಡಲಾಗಿದೆ
Advertisement
ಸೆಕ್ಷನ್ 30 ರ ಪ್ರಕಾರ ಜೈಲಿನಲ್ಲಿ ಇರುವ ಆರೋಪಿ ಮನೆಯ ಊಟ ಪಡೆಯಬಹುದು. ಅಲ್ಲದೇ ಮನೆಯಿಂದ ಹಾಸಿಗೆ ವ್ಯವಸ್ಥೆ ಮತ್ತು ಪುಸ್ತಕಗಳನ್ನು ಹೊಂದುವ ಅವಕಾಶ ಇದೆ . ಈ ಎಲ್ಲಾ ಅವಕಾಶಗಳನ್ನು ಆರೋಪಿಗಳಿಗೆ ಒದಗಿಸಿಕೊಡಬಹುದು.
Advertisement
ಮರಣ ದಂಡನೆ ಹೊಂದಿದ ಅಪರಾಧಿಗೂ ಕೆಲ ಅವಕಾಶ ಇದೆ. ಅಲ್ಲದೇ ದರ್ಶನ್ ಅವರು ಸಿನಿಮಾದ ನಟರಾಗಿರುವ ಕಾರಣ ಅತಿ ಹೆಚ್ಚಿನ ಪ್ರಚಾರ ಸಿಗುತ್ತಿದೆ. ಹೀಗಾಗಿ ಜೈಲಿನ ಅಧಿಕಾರಿಗಳು ಮನೆಯ ಊಟವನ್ನು ನೀಡುವುದಕ್ಕೆ ನಿರಾಕರಣೆ ಮಾಡುತ್ತಿದ್ದಾರೆ. ಹಿರಿಯ ಅಧಿಕಾರಿಗಳು ಇದರಿಂದ ಹಿಂದೆ ಸರಿಯುತ್ತಿದ್ದಾರೆ.
ಈ ಹಿಂದೆ ಕುಖ್ಯಾತ ಆರೋಪಿ ಚಾರ್ಲ್ಸ್ ಶೋಭರಾಜ್‌ಗೆ ಕೂಡ ಮನೆಯ ಊಟ ಕಲ್ಪಿಸಲಾಗಿತ್ತು. ಯಾವಾಗ ಆರೋಪಿ, ಅಪರಾಧಿ ಎಂದು ಕೋರ್ಟ್ ಶಿಕ್ಷೆ ನೀಡುತ್ತದೋ ಅಲ್ಲಿಯವರೆಗೆ ಈ ಎಲ್ಲಾ ಅವಕಾಶವನ್ನು ಬಳಸಿಕೊಳ್ಳಬಹುದು.
ಪೊಲೀಸರ ಪರ ವಾದ ಏನಿತ್ತು?
ಆಹಾರ ಅಜೀರ್ಣವಾಗುತ್ತಿದೆ. ಪುಡ್ ಪಾಯಿಸನ್ ಆಗಿದೆ, ಭೇದಿ ಆಗುತ್ತಿದೆ ಎಂದು ಮೆಡಿಕಲ್ ವರದಿಯನ್ನು ಸಲ್ಲಿಕೆ ಮಾಡಲಾಗಿದೆ. ಆದರೆ ಒಂದು ಒಂದು ಬಾರಿಯೂ ಭೇದಿ ಆಗಿದೆ ಎಂದು ಆಸ್ಪತ್ರೆಯಲ್ಲಿ ದರ್ಶನ್ ಚಿಕಿತ್ಸೆ ಪಡೆದಿಲ್ಲ
ದರ್ಶನ್ ಅವರು ಮುರಿದಿರುವ ಕೈ ಬಗ್ಗೆ ಮಾತ್ರ ಚಿಕಿತ್ಸೆ ಪಡೆಯುತ್ತಿದ್ದಾರೆ. ದರ್ಶನ್ ಅವರಿಗೆ ಈಗ ವೈರಲ್ ಫೀವರ್ ಇದ್ದು ಚಿಕಿತ್ಸೆ ನೀಡಲಾಗುತ್ತಿದೆ. ಮೈಸೂರಿನಲ್ಲಿ ದರ್ಶನ್ ಅವರಿಗೆ ಮೂರು ತಿಂಗಳ ಹಿಂದೆ ಆರ್ಥೋ ಅಪರೇಷನ್ ಆಗಿತ್ತು. ಜೈಲಿನಲ್ಲಿ ಬಂದಾಗ ಅದರ ನೋವು ಪ್ರಾರಂಭವಾಗಿದ್ದು ಇದಕ್ಕೆ ಎಕ್ಸ್ ರೇ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಜೈಲಿನ ನಿಯಮಗಳ ಪ್ರಕಾರ ಮನೆಯ ಊಟ ಎನ್ನುವುದರ ಬಗ್ಗೆ ಉಲ್ಲೇಖ ಇಲ್ಲ. ಅನಾರೋಗ್ಯದ ಸಮಯದಲ್ಲಿ ಮಾತ್ರ ವಿಶೇಷ ಊಟ ನೀಡಬಹುದು ಹೊರತು ಮನೆಯ ಊಟವನ್ನೇ ನೀಡಬೇಕು ಎಲ್ಲೂ ಉಲ್ಲೇಖ ಮಾಡಿಲ್ಲ. ಅನಾರೋಗ್ಯದ ವೇಳೆ ವಿಶೇಷ ಕಾಳಜಿ ಆಹಾರ ನೀಡಬೇಕು. ವಾರದಲ್ಲಿ ಒಮ್ಮೆ ಮಾತ್ರ ಮಾಂಸಾಹಾರದ ಊಟ ಕೊಡಬಹುದು. ಅದನ್ನು ಬಿಟ್ಟು ಪ್ರತಿ ದಿನ ಬಿರಿಯಾನಿ ತಿನ್ನಬೇಕು ಎಂದರೆ ನೀಡಲು ಸಾಧ್ಯವಿಲ್ಲ. ಹೀಗಾಗಿ ಮನೆಯ ಊಟವನ್ನು ನೀಡುವಂತೆ ಇಲ್ಲ.
ಆರೋಪಿಗೆ ಭೇದಿ ಆಗುತ್ತಿದ್ದರೆ ಉಪ್ಪು ಖಾರ ಇಲ್ಲದ ಸಾತ್ವಿಕ ಆಹಾರ ನೀಡಬೇಕು. ಕುಡಿಯಲು ಬಿಸಿ ನೀರು ಬೇಕು ಅಂದರೆ ಜ್ವರ ಇದ್ದಾಗ ಮಾತ್ರ ನೀಡ್ತಾರೆ. ಅದನ್ನ ಬಿಟ್ಟು ಪ್ರತಿ ದಿನ ಸ್ನಾನ ಮಾಡಲು ಬಿಸಿ ನೀರು ಕೊಡಲು ಸಾಧ್ಯವಿಲ್ಲ. ಅನಾರೋಗ್ಯ ಇದ್ದರೆ 15 ದಿನ ಮಾತ್ರ ವಿಶೇಷವಾಗಿ ಅವಕಾಶ ನೀಡಬಹುದು.