ವೆಲ್ಲಿಂಗ್ಟನ್: ನ್ಯೂಜಿಲೆಂಡ್‌ನ (New Zealand) ಉತ್ತರ ಭಾಗದಲ್ಲಿರುವ ಕೆರ್ಮಾಡೆಕ್ ದ್ವೀಪಗಳ (Kermadec Islands) ಪ್ರದೇಶದಲ್ಲಿ ಗುರುವಾರ ಬೆಳಗ್ಗೆ 7.1 ತೀವ್ರತೆಯ ಭಾರೀ ಭೂಕಂಪ (Earthquake) ಸಂಭವಿಸಿದೆ. ಭೂಕಂಪ ಭೂಮಿಯಿಂದ 10 ಕಿ.ಮೀ ಆಳದಲ್ಲಿ ಸಂಭವಿಸಿದೆ ಎಂದು ಅಮೆರಿಕದ ಜಿಯೋಲಾಜಿಕಲ್ ಸರ್ವೆ ತಿಳಿಸಿದೆ.
ಭಾರೀ ಭೂಕಂಪ ಉಂಟಾದ ತಕ್ಷಣ ಸುನಾಮಿ ಎಚ್ಚರಿಕೆ (Tsunami Alert) ನೀಡಲಾಗಿದೆ. ಭೂಕಂಪ ಸಂಭವಿಸಿದ 300 ಕಿಮೀ ವ್ಯಾಪ್ತಿಯ ಪ್ರದೇಶದೊಳಗೆ ಸುನಾಮಿಯ ಭೀತಿಯಿದೆ. ಸದ್ಯ ಈ ಪ್ರದೇಶದಲ್ಲಿ ಯಾವುದೇ ಜನವಸತಿ ಇಲ್ಲ. ಭೂಕಂಪದ ಬಳಿಕ ರಾಷ್ಟ್ರೀಯ ತುರ್ತು ನಿರ್ವಹಣಾ ಏಜೆನ್ಸಿ ನ್ಯೂಜಿಲೆಂಡ್‌ಗೆ ಯಾವುದೇ ಸುನಾಮಿಯ ಭೀತಿ ಇಲ್ಲ ಎಂದು ತಿಳಿಸಿದೆ. ಇದನ್ನೂ ಓದಿ: ಎಕ್ಸ್‌ಪ್ರೆಸ್ ವೇಯಲ್ಲಿ ಅಪಘಾತ ನಿಯಂತ್ರಣಕ್ಕೆ ಹೈಟೆಕ್ ಟಚ್: ಸ್ಪೀಡ್ ಲಿಮಿಟ್ ಮೀರಿದ್ರೆ ಮನೆಗೆ ಬರುತ್ತೆ ನೋಟಿಸ್
Advertisement
There is no tsunami threat to New Zealand following the M7.0 earthquake in the Southern Kermadec Islands.
Remember, if an earthquake is long or strong, get gone.
For more info about tsunami preparedness go to https://t.co/Gn7YO8831i
— National Emergency Management Agency (@NZcivildefence) March 16, 2023
Advertisement
ಪೆಸಿಫಿಕ್ ಪ್ಲೇಟ್ ಮತ್ತು ಆಸ್ಟ್ರೇಲಿಯನ್ ಪ್ಲೇಟ್ ಒಟ್ಟುಗೂಡುವ ಪ್ರದೇಶದಲ್ಲಿ ಭಾರೀ ಭೂಕಂಪಗಳು ಸಂಭವಿಸುತ್ತದೆ. ಈ ಪ್ರದೇಶ ರಿಂಗ್ ಆಫ್ ಫೈರ್‌ಗೆ ಅತ್ಯಂತ ಸಮೀಪವಿದೆ ಮಾತ್ರವಲ್ಲದೇ ಈ ಪ್ರದೇಶದಲ್ಲಿ ಆಗಾಗ ಭೂಕಂಪಗಳು ಸಂಭವಿಸುತ್ತಲೇ ಇರುತ್ತದೆ. ವಾರ್ಷಿಕವಾಗಿ ನ್ಯೂಜಿಲೆಂಡ್‌ನಲ್ಲಿ ಸಾವಿರಾರು ಭೂಕಂಪಗಳು ನಡೆಯುತ್ತವೆ. ಇದನ್ನೂ ಓದಿ: ಅನ್ಯಕೋಮಿನವರ ವ್ಯಾಪಾರಕ್ಕೆ ನಿರ್ಬಂಧ ಹೇರಿ – ಈಗ ಕಿಗ್ಗಾದಲ್ಲೂ ಧರ್ಮ ದಂಗಲ್