ಸ್ಟೀವ್‌ ಜಾಬ್ಸ್‌ ಪತ್ನಿ ಅಸ್ವಸ್ಥ – ಸನಾತನದ ಬಗ್ಗೆ ಸಾಕಷ್ಟು ಪ್ರಶ್ನೆ ಕೇಳುತ್ತಿದ್ದಾರೆ ಕಮಲಾ

Public TV
2 Min Read
Maha Kumb 2025 Steve Jobs Wife Laurene Powell Gets Unwell After Ganga Snan

ಪ್ರಯಾಗ್‌ರಾಜ್‌: ಮಹಾಕುಂಭಮೇಳದಲ್ಲಿ (Mahakumbh) ಪಾಲ್ಗೊಂಡಿರುವ ಆಪಲ್ (Apple) ಸಹ ಸಂಸ್ಥಾಪಕ ದಿವಂಗತ ಸ್ಟೀವ್ ಜಾಬ್ಸ್ (Steve Jobs) ಪತ್ನಿ ಲಾರೆನ್ ಪಾವೆಲ್ (Laurene Powell) ಅಸ್ವಸ್ಥಗೊಂಡಿದ್ದಾರೆ.

ಕಮಲಾ (Kamala) ಎಂದು ಹೆಸರು ಬದಲಿಸಿಕೊಂಡಿರುವ ಲಾರೆನ್ ಪಾವೆಲ್, ಹೊಸ ವಾತಾವರಣದ ಕಾರಣದಿಂದ ಅನಾರೋಗ್ಯಕ್ಕೆ ಈಡಾಗಿದ್ದಾರೆ. ನಿರಂಜನ ಅಖಾಡದ ಶಿಬಿರದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

ಕೈಲಾಸನಂದಗಿರಿ ಮಹಾರಾಜ್ ಪ್ರತಿಕ್ರಿಯಿಸಿ, ಈಗ ಅವರು ನನ್ನ ಶಿಬಿರದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಅವರಿಗೆ ಕೆಲವು ಅಲರ್ಜಿಗಳಿವೆ. ಅವರು ಎಂದಿಗೂ ಇಷ್ಟೊಂದು ಜನದಟ್ಟಣೆಯ ಸ್ಥಳಕ್ಕೆ ಹೋಗಿರಲಿಲ್ಲ. ಚೇತರಿಕೆ ಬಳಿಕ ಅವರು ಅಮೃತಸ್ನಾನ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.  ಇದನ್ನೂ ಓದಿ: ಆ್ಯಪಲ್ ಸಹ ಸಂಸ್ಥಾಪಕ ಸ್ಟೀವ್‌ ಜಾಬ್ಸ್‌ ಪತ್ನಿ ಲಾರೆನ್ ಇನ್ಮುಂದೆ ʻಕಮಲಾʼ – ಹಿಂದೂ ಹೆಸರು ನಾಮಕರಣ

ಲಾರೆನ್ ಪಾವೆಲ್ ತುಂಬಾ ಸರಳ ವ್ಯಕ್ತಿಯಾಗಿದ್ದಾರೆ. ಪೂಜೆಯ ಸಮಯದಲ್ಲಿ ಅವರು ನಮ್ಮೊಂದಿಗೆ ಇದ್ದರು. ಅವರು ಸನಾತನ ಧರ್ಮದಕ್ಕೆ ಸಂಬಂಧಿಸಿದಂತೆ ಬಹಳಷ್ಟು ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಅವರ ಪ್ರಶ್ನೆಗಳಿಗೆ ಉತ್ತರಿಸಲು ನಮ್ಮ ಕೈಲಾದಷ್ಟು ಪ್ರಯತ್ನಿಸುತ್ತಿದ್ದೇವೆ ಎಂದು ಹೇಳಿದರು.

 

ಪ್ರಯಾಗ್‌ರಾಜ್‌ ತ್ರಿವೇಣಿ ಸಂಗಮಕ್ಕೆ ತೆರಳುವ ಮೊದಲು ಲಾರೆನ್ ಪಾವೆಲ್ ಅವರು ವಾರಣಾಸಿಯ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.

ಜನವರಿ 20 ರಂದು ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಲು ಅಮೆರಿಕಕ್ಕೆ ಹಿಂತಿರುಗುವ ಮೊದಲು ಅವರು ಜನವರಿ 15 ರವರೆಗೆ ನಿರಂಜಿನಿ ಅಖಾರ ಶಿಬಿರದಲ್ಲಿ ಇರುತ್ತಾರೆ ಎಂದು ವರದಿಯಾಗಿದೆ.

 

Share This Article