ಪ್ರಯಾಗ್‌ರಾಜ್: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಜನವರಿ 13ರಿಂದ (ಇಂದಿನಿಂದ) ಆರಂಭವಾಗಲಿರುವ ಮಹಾಕುಂಭ ಮೇಳ- 2025ಕ್ಕೆ (Maha Kumbh Mela 2025) ಭರದಿಂದ ಸಿದ್ಧತೆ ನಡೆದಿವೆ.
ರೈಲ್ವೆ ಇಲಾಖೆಯ 1,609 ಕೋಟಿ ರೂ. ಮೊತ್ತದ ವಿವಿಧ ಕಾಮಗಾರಿಗಳೂ ಸೇರಿದಂತೆ ಸುಮಾರು 5,500 ಕೋಟಿ ರೂ. ಮೊತ್ತದ ಹಲವು ಅಭಿವೃದ್ಧಿ ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ (PM Modi) ಶುಕ್ರವಾರ ಉದ್ಘಾಟಿಸಲಿದ್ದಾರೆ. ಇದರೊಂದಿಗೆ ಮಹಾಕುಂಭ ಮೇಳದ ಧಾರ್ಮಿಕ ವಿಧಿ ವಿಧಾನಗಳನ್ನೂ ನೆರವೇರಿಸಲಿದ್ದಾರೆ. ಇಂದು ಮಧ್ಯಾಹ್ನ 12.15ರ ಸುಮಾರಿಗೆ ಪ್ರಧಾನಿಗಳು ಆಮಿಸಲಿದ್ದಾರೆ. ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ತ್ರೀವೇಣಿ ಸಂಗಮದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಹ ಸಾಥ್ ನೀಡಲಿದ್ದಾರೆ. ಅವರು, ಗುರುವಾರ ಪ್ರಯಾಗ್‌ರಾಜ್‌ಗೆ ಭೇಟಿ ನೀಡಿ, ಸಿದ್ಧತಾ ಕಾರ್ಯಗಳನ್ನು ಪರಿಶೀಲಿಸಿದ್ದರು.
ಪ್ರಯಾಗ್‌ರಾಜ್‌ನಲ್ಲಿ 12 ವರ್ಷಗಳಿಗೊಮ್ಮೆ ಕುಂಭಮೇಳ ನಡೆಯುತ್ತದೆ. ಈ ಬಾರಿ ಅದು 2025ರ ಜನವರಿ 13ರಿಂದ ಫೆಬ್ರುವರಿ 26ರ ವರೆಗೆ ಜರುಗಲಿದೆ. 50 ದಿನಗಳವರೆಗೆ ನಡೆಯುವ ಈ ಮಹಾ ಧಾರ್ಮಿಕ ಮಹೋತ್ಸವದಲ್ಲಿ ಸುಮಾರು 15 ಕೋಟಿ ಜನರು ಭಾಗವಹಿಸುವ ನಿರೀಕ್ಷೆಯಿದೆ. ಈ ಸಂಬಂಧ ರೈಲ್ವೆ ಇಲಾಖೆಯೂ ಪ್ರಯಾಣಿಕರ ಅನುಕೂಲಕ್ಕಾಗಿ ಒಟ್ಟು 13,000 ರೈಲುಗಳ ಸಂಚಾರ ನಡೆಸಲು ಸಿದ್ಧತೆ ಮಾಡಿಕೊಂಡಿದೆ. ಇದನ್ನೂ ಓದಿ: ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ – ಮಗು ಸೇರಿ 7 ಮಂದಿ ಸಾವು
ಮಹಾ ಕುಂಭಮೇಳದ ಅವಧಿಯಲ್ಲಿ ರೈಲ್ವೆ ಇಲಾಖೆಯು 10,000 ದೈನಂದಿನ ರೈಲುಗಳ ಜತೆಗೆ ಹೆಚ್ಚುವರಿಯಾಗಿ 3,000 ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ ಎಂದು ಉತ್ತರ ಮಧ್ಯ ರೈಲ್ವೆಯ ಮುಖ್ಯ ಜನ ಸಂಪರ್ಕ ಅಧಿಕಾರಿ ಶಶಿಕಾಂತ ತ್ರಿಪಾಠಿ ತಿಳಿಸಿದ್ದಾರೆ. ಇದನ್ನೂ ಓದಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡು, ಕೇರಳ, ಕರ್ನಾಟಕದಲ್ಲಿ ಭಾರೀ ಮಳೆ ಮುನ್ಸೂಚನೆ
1,186 ಸಿಸಿಟಿವಿ ಅಳವಡಿಕೆ:
ಪ್ರಯಾಗ್‌ರಾಜ್ ಮತ್ತು ಅದರ ವ್ಯಾಪ್ತಿಯಲ್ಲಿ ಬರುವ 9 ರೈಲು ನಿಲ್ದಾಣಗಳಲ್ಲೂ ಸಿ.ಸಿ.ಟಿ.ವಿ ಕ್ಯಾಮೆರಾಗಳ ಮೂಲಕ ಕಣ್ಣಾವಲು ಇಡಲಾಗಿದೆ. ಈ ನಿಲ್ದಾಣಗಳಲ್ಲಿ ಒಟ್ಟಾರೆ 1,186 ಸಿಸಿಟಿವಿ ಕ್ಯಾಮೆರಾಗಳು ಕಾರ್ಯ ನಿರ್ವಹಿಸುತ್ತಿವೆ. ಇದರಲ್ಲಿ ಕುಂಭಮೇಳಕ್ಕೆಂದೇ ಹೊಸದಾಗಿ ಅಳವಡಿಸಿರುವ 500 ಕ್ಯಾಮೆರಾಗಳೂ ಸೇರಿವೆ. ಈ ಪೈಕಿ 100 ಕ್ಯಾಮೆರಾಗಳು ಮುಖಚಹರೆ ಗುರುತಿಸುವ ವ್ಯವಸ್ಥೆಯನ್ನು (ಎಫ್‌ಆರ್‌ಎಸ್) ಹೊಂದಿವೆ ಎಂದು ರೈಲ್ವೆ ಸುರಕ್ಷಾ ಅಧಿಕಾರಿ ಪಿ.ಎಸ್ ಸಂದೀಪ್ ಕುಮಾರ್ ವಿವರಿಸಿದರು. ಇದರೊಂದಿಗೆ ಪ್ರಯಾಣಿಕರ ಮೂಲ ಸೌಕರ್ಯಗಳಿಗೂ ಒತ್ತು ನೀಡಲಾಗಿದೆ. ಇದನ್ನೂ ಓದಿ: ಕೇರಳ| ಭೀಕರ ರಸ್ತೆ ಅಪಘಾತಕ್ಕೆ ನಾಲ್ವರು ಬಲಿ – ಬಸ್‌ಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಹರಿದ ಲಾರಿ
ಯಾವ ಯಾವ ಯೋಜನೆಗಳು ಉದ್ಘಾಟನೆ?
ಏಳು ರೈಲ್ವೆ ಮೇಲ್ಸೇತುವೆ, ಮೂರು ಕೆಳಸೇತುವೆ, ದ್ವಿಪಥ ಮಾರ್ಗ ಗಂಗಾ ನದಿಗೆ ನಿರ್ಮಿಸಿರುವ ಸೇತುವೆ ಕಲುಷಿತ ನೀರಿನ ಶುದ್ದೀಕರಣ ಘಟಕ ಕುಡಿಯುವ ನೀರು ವಿದ್ಯುತ್ ಪೂರೈಕೆ ಸೇರಿದಂತೆ ಹಲವು ಯೋಜನೆಗಳು, ಹನುಮಾನ್ ಮಂದಿರ ಸೇರಿದಂತೆ ಪ್ರಮುಖ ದೇವಾಲಯಗಳ ಕಾರಿಡಾರ್‌ಗಳನ್ನು ಮೋದಿ ಅವರು ಉದ್ಘಾಟಿಸಲಿದ್ದಾರೆ.