– ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ಇತ್ಯರ್ಥ ಆಗೋವರೆಗೂ ಅನುಮತಿ ಇಲ್ಲ ಎಂದ ಕೇಂದ್ರ
ನವದೆಹಲಿ: ಮಹದಾಯಿ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಯೋಜನೆಗೆ ಅನುಮತಿಯ ನೀರಿಕ್ಷೆಯಲ್ಲಿದ್ದ ರಾಜ್ಯಕ್ಕೆ ಕೇಂದ್ರ ಸರ್ಕಾರ ಶಾಕ್ ನೀಡಿದೆ.
ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ಇತ್ಯರ್ಥವಾಗುವವರೆಗೂ ಅನುಮತಿ ಇಲ್ಲ ಎಂದು ಕೇಂದ್ರ ಸ್ಪಷ್ಟಪಡಿಸಿದೆ. ಈ ಬಗ್ಗೆ ರಾಜ್ಯ ನೀರಾವರಿ ನಿಗಮಕ್ಕೆ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯ ಮಾಹಿತಿ ನೀಡಿದೆ.
ಯೋಜನೆಯನ್ನು ಆಕ್ಷೇಪಿಸಿ ಕೇರಳದ ವನ್ಯಜೀವಿ ವಾರ್ಡನ್ ಕರ್ನಾಟಕ ಸರ್ಕಾರಕ್ಕೆ 2023ರ ಮಾರ್ಚ್‌ನಲ್ಲಿ ನೋಟಿಸ್ ನೀಡಿತ್ತು. ಈ ನೋಟಿಸ್ ಪ್ರಶ್ನಿಸಿ ಕರ್ನಾಟಕ ಸರ್ಕಾರ ಅಕ್ಟೋಬರ್‌ನಲ್ಲಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಈ ಪ್ರಕರಣ ವಿಚಾರಣಾ ಹಂತದಲ್ಲಿದೆ. ಎರಡು ರಾಜ್ಯಗಳ ನಡುವಿನ ವಿವಾದ ಇತ್ಯರ್ಥಗೊಳ್ಳಬೇಕಿದೆ.
ಇದಲ್ಲದೇ ಮಹದಾಯಿ ಯೋಜನೆಗೆ ಆಕ್ಷೇಪ ವ್ಯಕ್ತಪಡಿಸಿ ಸುಪ್ರೀಂ ಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ. ಈ ಅರ್ಜಿಗಳು ವಿಚಾರಣೆ ಹಂತದಲ್ಲಿ ಬಾಕಿ ಉಳಿದಿವೆ. ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಬಾಕಿ ಇರುವ ಹೊತ್ತಿನಲ್ಲಿ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
