ಬೆಂಗಳೂರು: ಬಿಜೆಪಿ ಸರ್ಕಾರ (BJP Government) ಜಾರಿಗೆ ತಂದಿದ್ದ ಮತಾಂತರ ನಿಷೇಧ ಕಾಯ್ದೆ ರದ್ದಿಗೆ ಇಂದಿನ ಸಚಿವ ಸಂಪುಟ ಸಭೆ ತೀರ್ಮಾನ ಮಾಡಿದ್ದು, ಈ ಸಂಬಂಧ ಇದೀಗ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆಯುವುದರ ಮೂಲಕ @siddaramaiah ನವರ ಹಿಂದೂ ವಿರೋಧಿ ನಿಲುವನ್ನು ಮತ್ತೆ ಕಾಂಗ್ರೆಸ್ ಸರ್ಕಾರ ಅನುಸರಿಸಿದೆ.
ಆಮಿಷದ ಮತಾಂತರವನ್ನು ನಿರ್ಬಂಧಿಸುವ ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆಯುವುದು "ಹಿಂದೂ" ಸಮಾಜವನ್ನು ಮತಾಂತರಗೊಳಿಸುವವರಿಗೆ ಬೆಂಬಲ ನೀಡಿದಂತೆ ಅಲ್ಲವೇ?
ಯಾವ "ಮಾಫಿಯಾ" ಈ ಮತಾಂತರ ನಿಷೇಧ…
— Basanagouda R Patil (Yatnal) (@BasanagoudaBJP) June 15, 2023
Advertisement
ಟ್ವೀಟ್‍ನಲ್ಲೇನಿದೆ..?: ಮತಾಂತರ ನಿಷೇಧ ಕಾಯ್ದೆ (Prohibition of Conversion Act) ಯನ್ನು ಹಿಂಪಡೆಯುವುದರ ಮೂಲಕ ಸಿದ್ದರಾಮಯ್ಯನವರ ಹಿಂದೂ ವಿರೋಧಿ ನಿಲುವನ್ನು ಮತ್ತೆ ಕಾಂಗ್ರೆಸ್ ಸರ್ಕಾರ (Congress Government) ಅನುಸರಿಸಿದೆ. ಆಮಿಷದ ಮತಾಂತರವನ್ನು ನಿರ್ಬಂಧಿಸುವ ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆಯುವುದು “ಹಿಂದೂ” ಸಮಾಜವನ್ನು ಮತಾಂತರಗೊಳಿಸುವವರಿಗೆ ಬೆಂಬಲ ನೀಡಿದಂತೆ ಅಲ್ಲವೇ ಎಂದು ಪ್ರಶ್ನಿಸಿದ್ದಾರೆ.
Advertisement
ಸಿದ್ದರಾಮಯ್ಯನವರ "Conversion Bhagya”
ಆಮಿಷದ ಮತಾಂತರಕ್ಕೆ ಬೆಂಬಲ ನೀಡಲು ಸಿದ್ದರಾಮಯ್ಯನವರು ಸಜ್ಜಾಗಿದ್ದಾರೆ!
ಇನ್ನು ಮುಂದೆ
ಮಹದೇವಪ್ಪನೂ "CONVERT"
ಕಾಕಪಾಟಿಲನೂ "CONVERT”
— Basanagouda R Patil (Yatnal) (@BasanagoudaBJP) June 15, 2023
Advertisement
ಯಾವ “ಮಾಫಿಯಾ” ಈ ಮತಾಂತರ ನಿಷೇಧ ಕಾಯ್ದೆಯನ್ನು ವಾಪಸ್ ಪಡೆಯಲು ಒತ್ತಡ ಹೇರಿದೆ. ಸಿದ್ದರಾಮಯ್ಯನವರ “Conversion Bhagya” ಆಮಿಷದ ಮತಾಂತರಕ್ಕೆ ಬೆಂಬಲ ನೀಡಲು ಸಿದ್ದರಾಮಯ್ಯನವರು ಸಜ್ಜಾಗಿದ್ದಾರೆ. ಇನ್ನು ಮುಂದೆ ಮಹದೇವಪ್ಪನೂ “”CONVERT”” ಕಾಕಪಾಟಿಲನೂ “”CONVERT”” ಎಂದು ಬರೆದುಕೊಳ್ಳುವ ಮೂಲಕ ಸಿದ್ದರಾಮಯ್ಯ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ಇದನ್ನೂ ಓದಿ: ನನ್ನ ಬದುಕಿನಲ್ಲಿ ಹೊಂದಾಣಿಕೆ ರಾಜಕಾರಣ ಮಾಡಿಲ್ಲ, ಮಾಡಲ್ಲ: ಸಿಂಹ ಆರೋಪಕ್ಕೆ ಬೊಮ್ಮಾಯಿ ತಿರುಗೇಟು
Advertisement
ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಹೆಚ್.ಕೆ ಪಾಟೀಲ್ (H K Patil) , ಕಾಂಗ್ರೆಸ್ ಸರ್ಕಾರದ ಮತ್ತೊಂದು ದೊಡ್ಡ ನಿರ್ಧಾರವನ್ನು ಬಹಿರಂಗಪಡಿಸಿದರು. ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯುವ ತೀರ್ಮಾನವನ್ನು ಕ್ಯಾಬಿನೆಟ್ ಸಭೆಯಲ್ಲಿ ಮಾಡಿರುವುದಾಗಿ ತಿಳಿಸಿದ ಅವರು ಜುಲೈ ಅಧಿವೇಶನದಲ್ಲಿ ಹೊಸ ತಿದ್ದುಪಡಿಯೊಂದಿಗೆ ಮರುಮಂಡನೆ ಮಾಡುವುದಾಗಿ ಹೇಳಿದರು.