ಮೈಸೂರು/ಬೆಂಗಳೂರು: ಡಿನ್ನರ್ ನೆಪದಲ್ಲಿ ಚಾಮರಾಜನಗರದಲ್ಲಿರುವ ಸುನಿಲ್ ಬೋಸ್ ನಿವಾಸದಲ್ಲಿ ಸಿದ್ದರಾಮಯ್ಯ (Siddaramaiah) ಸರ್ಕಾರದ ಪ್ರಭಾವಿ ಸಚಿವರಾದ ಸತೀಶ್ ಜಾರಕಿಹೊಳಿ (Satish Jarkiholi), ಪರಮೇಶ್ವರ್ (Parmeshwar) ಮತ್ತು ಮಹಾದೇವಪ್ಪ (Mahadevappa) ಮಂಗಳವಾರ ರಾತ್ರಿ ರಹಸ್ಯ ಸಭೆ ನಡೆಸಿದ್ದಾರೆ.
ಮೂವರು ಅಹಿಂದ ನಾಯಕರು ಸಿಎಂ ಬದಲಾವಣೆಯ ಬಗ್ಗೆ ಯಾವುದೇ ಚರ್ಚೆ ನಡೆಸಿಲ್ಲ ಎಂದು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದರೂ ಮುಖ್ಯಮಂತ್ರಿ ವಿಚಾರಕ್ಕೆ ಸಂಬಂಧಿಸಿದಂತೆಯೇ ಸಭೆ ನಡೆಸಿದ್ದಾರೆ ಎನ್ನುವುದು ಮೂಲಗಳಿಂದ ಪಬ್ಲಿಕ್ ಟಿವಿಗೆ ಸಿಕ್ಕಿದೆ. ಇದನ್ನೂ ಓದಿ: 5 ಸ್ಟಾರ್ ಹೋಟೆಲ್‌ಗಳಲ್ಲೇ ಇರುವವರು ಜಾತಿ ಆಧಾರದಲ್ಲಿ ಬಡವರನ್ನ ಒಡೆಯುತ್ತಿದ್ದಾರೆ: ರಾಗಾಗೆ ಮೋದಿ ಚಾಟಿ
ಸಭೆಯಲ್ಲಿ ಏನು ಚರ್ಚೆ ನಡೆದಿದೆ?
ಹೈಕಮಾಂಡ್ (Congress High Command) ಸಿದ್ದರಾಮಯ್ಯ ಅವರನ್ನು ಪಟ್ಟದಿಂದ ಇಳಿಸಿದರೆ ಮೂವರಲ್ಲಿ ಒಬ್ಬರಿಗೆ ಮುಖ್ಯಮಂತ್ರಿಯಾಗುವ ಒಳ್ಳೆಯ ಅವಕಾಶ ಇದೆ. ಯಾರಿಗೆ ಅವಕಾಶ ಸಿಕ್ಕಿದರೂ ಒಗ್ಗಟ್ಟಾಗಿಯೇ ಇರೋಣ.
ಸಿದ್ದರಾಮಯ್ಯ ಇಳಿಸುವ ಪ್ರಯತ್ನಕ್ಕೆ ಯಾರೇ ಕೈ ಹಾಕಿದರೂ ನಾವು ಮೂವರು ತಡೆಯಬೇಕು. ಅನಿವಾರ್ಯವಾಗಿ ಸಿದ್ದರಾಮಯ್ಯ ಇಳಿಯುವ ಸಂದರ್ಭ ಬಂದರೇ ನಾವು ಒಟ್ಟಾಗಿ ಸಿಎಂ ಸ್ಥಾನಕ್ಕಾಗಿ ಪ್ರಯತ್ನಿಸಬೇಕು. ಈ ಬಾರಿ ನಾವೇ ಕಚ್ಚಾಡಿಕೊಂಡು ಇನ್ನೊಬ್ಬರಿಗೆ ಅವಕಾಶ ಸಿಗಬಾರದು. ಇದನ್ನೂ ಓದಿ: ಡಿನ್ನರ್ ಮೀಟಿಂಗ್‌ನಲ್ಲಿ ಸಿಎಂ ಬದಲಾವಣೆ ವಿಚಾರ ಚರ್ಚೆ ನಡೆದಿಲ್ಲ: ಪರಮೇಶ್ವರ್
2023ರ ಚುನಾವಣೆಯಲ್ಲಿ ಅಹಿಂದ ಮತಗಳಿಂದ ಕಾಂಗ್ರೆಸ್ ಸಾಕಷ್ಟು ಸ್ಥಾನ ಗೆದ್ದುಕೊಂಡಿದೆ. ಇದೇ ಕಾರ್ಡ್ ಹೈಕಮಾಂಡ್ ಮುಂದೆ ಪ್ಲೇ ಮಾಡಬೇಕು. ಬಹಿರಂಗವಾಗಿ ಯಾರ ಪರವಾಗಿ ಮತ್ತು ಯಾರ ವಿರುದ್ಧವೂ ಹೇಳಿಕೆ ನೀಡುವುದು ಬೇಡ. ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು ಎಂಬ ನಿರ್ಧಾರವನ್ನು ಕೈಗೊಂಡಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.