– ಸಂಪೂರ್ಣ ಪರಿಸರ ಸ್ನೇಹಿ ಕುಂಭಮೇಳ, ಒಂದು ದೇಶ-ಒಂದು ಚುನಾವಣೆ ಉಪನ್ಯಾಸ
ವಿಶ್ವದ ಅತಿದೊಡ್ಡ ಧಾರ್ಮಿಕ ಮೇಳಗಳಲ್ಲಿ ಒಂದಾದ ಮಹಾ ಕುಂಭಮೇಳ (MahaKumbh 2025) ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ಇಂದಿನಿಂದ ಆರಂಭವಾಗಿದೆ. ಬರೋಬ್ಬರಿ 144 ವರ್ಷಗಳಿಗೊಮ್ಮೆ ನಡೆಯುವ ಮಹಾ ಕುಂಭಮೇಳದಲ್ಲಿ ಅಧ್ಯಾತ್ಮ ವಿಸ್ಮಯವೇ ಜರುಗಲಿದೆ. ಈ ಧಾರ್ಮಿಕ ಮೇಳದಲ್ಲಿ ಕೋಟಿಗಟ್ಟಲೇ ಸಾಧು-ಸಂತರು ನಾಗಸಾಧುಗಳು, ಅಘೋರಿಗಳು, ಭಕ್ತರು (Devotees) ಆಗಮಿಸುವುದು ಇಲ್ಲಿನ ವಿಶೇಷ.
Advertisement
ಪ್ರತಿ 12 ವರ್ಷಗಳಿಗೊಮ್ಮೆ ನಡೆಯುವ ಕುಂಭಮೇಳ ಈ ಬಾರಿ ಅತೀ ವಿಶೇಷವಾಗಿದೆ. ಏಕೆಂದರೆ ಪ್ರಯಾಗ್ ರಾಜ್‌ನಲ್ಲಿ ಮಹಾ ಕುಂಭಮೇಳ ನಡೆಯುತ್ತಿದ್ದರೆ, ಸಮೀಪದಲ್ಲೇ ಇರುವ ಅಯೋಧ್ಯೆಯಲ್ಲಿ ಮೊದಲ ವಾರ್ಷಿಕೋತ್ಸವ ಸಂಭ್ರಮ ನಡೆಯುತ್ತಿದೆ. ಭಾರತ ಅಷ್ಟೇ ಅಲ್ಲದೇ ವಿದೇಶಗಳಿಂದಲೂ ಭಕ್ತರು ಆಗಮಿಸುತ್ತಿದ್ದಾರೆ. ಗಂಗಾ, ಯಮುನಾ, ಸರಸ್ವತಿ ನದಿಗಳ ಪವಿತ್ರ ಸಂಗಮದಲ್ಲಿ ಪುಣ್ಯಸ್ನಾನ ಮಾಡುತ್ತಾರೆ. ಇಲ್ಲಿ ಸ್ನಾನ ಮಾಡಿದ್ರೆ, ಪಾಪನಾಶ, ಮೋಕ್ಷ ಸಿಗುತ್ತದೆ ಎಂಬುದು ಭಕ್ತರ ನಂಬಿಕೆ. ಈಗಾಗಲೇ ಕಳೆದ 2 ದಿನಗಳಲ್ಲಿ 85 ಲಕ್ಷ ಮಂದಿ ಸ್ನಾನ ಮಾಡಿದ್ದಾರೆ. ಈ ಎಲ್ಲ ಕಾರಣಗಳಿಂದ ಈ ಬಾರಿ ಕುಂಭಮೇಳ ಅತ್ಯಂತ ವಿಶೇಷವಾಗಿದೆ. ಅಲ್ಲದೇ ಈ ಕುಂಭಮೇಳದಲ್ಲಿ ಏನೇನು ವಿಶೇಷತೆಗಳಿವೆ ಎಂಬುದನ್ನು ತಿಳಿಯಬೇಕಾದ್ರೆ ಮುಂದೆ ಓದಿ…
Advertisement
Advertisement
ಇಂದಿನಿಂದ ಕುಂಭಮೇಳ ಆರಂಭ
ಈ ಹಿಂದೆ 2013ರಲ್ಲಿ ಮಹಾ ಕುಂಭಮೇಳ ನಡೆದಿತ್ತು. ಇದೀಗ 2025ರ ಜ.13ರಿಂದ ಆರಂಭವಾಗಿದೆ. ಫೆ.26ರ ಶಿವರಾತ್ರಿ ದಿನದಂದು ಈ ಕುಂಭಮೇಳ ಸಂಪನ್ನಗೊಳ್ಳಲಿದೆ. ಜ.14ರಂದು ಮಕರ ಸಂಕ್ರಾಂತಿ, ವಸಂತ, ಪಂಚಮಿ, ಹೀಗೆ 5 ಬಾರಿ ಪುಣ್ಯಸ್ನಾನ ಪ್ರಯಾಗ್‌ರಾಜ್‌ನಲ್ಲಿರುವ ತ್ರಿವೇಣಿ ಸಂಗಮದಲ್ಲಿ ನಡೆಯಲಿದೆ.
Advertisement
ಸಂಪೂರ್ಣ ಪರಿಸರ ಸ್ನೇಹಿ ಕುಂಭಮೇಳ
ಈ ಬಾರಿಯ ಮಹಾಕುಂಭಮೇಳದಲ್ಲಿ ಒಂದೇ ಒಂದು ಪ್ಲಾಸ್ಟಿಕ್ ಬಳಸದೇ ಸಂಪೂರ್ಣ ಪರಿಸರ ಸ್ನೇಹಿಯಾಗಿ ಆಚರಿಸಲು ಉದ್ದೇಶಿಸಲಾಗಿದೆ. ಸ್ವಚ್ಛತೆ ಮತ್ತು ಶುದ್ಧತೆ ಕಾಪಾಡುವುದಕ್ಕಾಗಿ ಬರೋಬ್ಬರಿ 1,500 ಪೌರ ಕಾರ್ಮಿಕರು ಹಗಲಿರುಳು ದುಡಿಯುತ್ತಿದ್ದಾರೆ. ನದಿಯ ಒಂದು ದಡದಿಂದ ಮತ್ತೊಂದು ದಡಕ್ಕೆ ಸರಾಗವಾಗಿ ಸಾಗಲು 50ಕ್ಕೂ ಹೆಚ್ಚು ತಾತ್ಕಾಲಿಕ ಬ್ರಿಡ್ಜ್‌ಗಳನ್ನ ನಿರ್ಮಿಸಲಾಗಿದೆ. ಅಲ್ಲದೇ 1.5 ಲಕ್ಷ ಶೌಚಾಲಯ, ಸ್ನಾನಗೃಹಗಳನ್ನು ನಿರ್ಮಿಸಲಾಗಿದೆ. ಏಕಕಾಲಕ್ಕೆ ಸಾವಿರಾರು ಜನರು ತಂಗಲು ಅನುಕೂಲವಾಗುವಂತೆ ಅಲ್ಲಲ್ಲಿ ಟೆಂಟ್‌ಗಳನ್ನ ನಿರ್ಮಿಸಿರುವುದು ವಿಶೇಷ.
ಒಂದು ದೇಶ-ಒಂದು ಚುನಾವಣೆ ಉಪನ್ಯಾಸ
ಕುಂಭಮೇಳ ನಡೆಯುವ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಹರಿದ್ವಾರ ಮೂಲದ ಸಂಘಟನೆಯೊಂದು ʻಒಂದು ದೇಶ ಒಂದು ಚುನಾವಣೆ’ ಸೇರಿ ಒಟ್ಟು 7 ವಿಷಯಗಳ ಬಗ್ಗೆ ಉಪನ್ಯಾಸ ಆಯೋಜಿಸಿದೆ. ಜ. 12ರಂದು ಉಪನ್ಯಾಸ ಆರಂಭಗೊಂಡಿದ್ದು, ಮೊದಲ ದಿನ ಸ್ವಾಮಿ ವಿವೇಕಾನಂದರ ಬಗ್ಗೆ ಉಪನ್ಯಾಸ ನೀಡಲಾಗಿದೆ. ʻಒಂದು ದೇಶ ಒಂದು ಚುನಾವಣೆ’ ವಿಷಯದ ಬಗ್ಗೆ ಜ.18ರಂದು ಉಪನ್ಯಾಸ ನಿಗದಿಯಾಗಿದೆ. ಮಹಾಕುಂಭಮೇಳ ನಡೆಯುವ ಸ್ಥಳದಲ್ಲಿ ಒಟ್ಟು ಏಳು ಉಪನ್ಯಾಸಗಳ ಸರಣಿ ನಡೆಯಲಿವೆ. ಜನವರಿ 18ರಂದು ಒಂದು ‘ದೇಶ ಒಂದು ಚುನಾವಣೆ- ವಿಕಸಿತ ಭಾರತದ ವೇಳೆಯಲ್ಲಿ ಆರ್ಥಿಕ, ರಾಜಕೀಯ ಸುಧಾರಣೆ’ ಎನ್ನುವ ವಿಷಯದ ಬಗ್ಗೆ ಭಾಷಣ ನಡೆಯಲಿದೆ. ಈ ವಿಷಯದ ಬಗ್ಗೆ ಮಾತನಾಡಲು ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ಆಹ್ವಾನ ನೀಡಲಾಗಿದ್ದು, ಅವರು ಕುಂಭಮೇಳ ನಡೆಯುವ ಸ್ಥಳಕ್ಕೆ ಬಂದು ಭಾಷಣ ಮಾಡಲಿದ್ದಾರೆ. ಇದರೊಂದಿಗೆ ಜಾಗತಿಕ ಭಯೋತ್ಪಾದನೆ, ಭಾರತದ ಸಮಗ್ರತೆ ಮತ್ತು ಸವಾಲುಗಳು, ಲಿಂಗ ಸಮಾನತೆ ಮತ್ತು ಮಹಿಳಾ ಸಬಲೀಕರಣ, ಸಾಮಾಜಿಕ ಮಾಧ್ಯಮದಲ್ಲಿ ಗೌಪ್ಯತೆ ಮತ್ತು ಸುರಕ್ಷತೆ ಮುಂತಾದ ವಿಷಯಗಳ ಬಗ್ಗೆ ಉಪನ್ಯಾಸ ಇರಲಿದೆ ಎಂದು ಸಂಬಂಧಪಟ್ಟ ಅಧಿಕಾರಿಗಳು ತಿಳಿಸಿದ್ದಾರೆ.
15 ಲಕ್ಷಕ್ಕೂ ಹೆಚ್ಚು ವಿದೇಶಿಯರು ಭಾಗಿ ನಿರೀಕ್ಷೆ
ಮಹಾಕುಂಭ ಮೇಳದಲ್ಲಿ 15 ಲಕ್ಷಕ್ಕೂ ಹೆಚ್ಚು ವಿದೇಶಿಯರು ಭಾಗವಹಿಸುವ ನೀರಿಕ್ಷೆ ಇದೆ ಎಂದು ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭಾನುವಾರ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರವಾಸೋದ್ಯಮ ಸಚಿವಾಲಯವು ಆಯುರ್ವೇದ ಚಿಕಿತ್ಸೆ, ಯೋಗ ಮತ್ತು ಪಂಚಕರ್ಮದಂತಹ ಸೌಲಭ್ಯಗಳನ್ನು ಒದಗಿಸಲು ಟೆಂಟ್‌ಗಳನ್ನು ಸ್ಥಾಪಿಸಿದೆ.
ಸಂಗಮ ನಗರಿ ಸೃಷ್ಟಿ
45 ದಿನಗಳ ಕಾಲ ನಡೆಯಲಿರುವ ಕುಂಭಮೇಳದಲ್ಲಿ ಬರೋಬ್ಬರಿ 45 ಕೋಟಿ ಜನ ಬಂದು ಹೋಗುವ ಸಾಧ್ಯತೆಗಳಿವೆ ಎಂದು ಅಂದಾಜಿಸಲಾಗಿದೆ. ಅದಕ್ಕೆ ತಕ್ಕಂತೆ ರಾಜ್ಯ ಸರ್ಕಾರ ತಯಾರಿ ಮಾಡಿಕೊಂಡಿದೆ. ಗಂಗೆ, ಯಮುನೆ, ಸರಸ್ವತ ನದಿಗಳ ತ್ರಿವೇಣಿ ಸಂಗಮದಲ್ಲಿ ʻಸಂಗಮನಗರಿʼ ಎಂಬ ನಗರವನ್ನೇ ಸೃಷ್ಟಿಸಿದೆ.
ಸಂಗಮದಲ್ಲಿ ಶಾಹಿಸ್ನಾನ
ಜನವರಿ 13-ಪೌಷ ಪೂರ್ಣಿಮಾ ಸ್ನಾನ (ಉದ್ಘಾಟನಾ ದಿನ)
ಜನವರಿ 15 – ಮಕರ ಸಂಕ್ರಾಂತಿ ಸ್ನಾನ
ಜನವರಿ 29 – ಮೌನಿ ಅಮಾವಾಸ್ಯೆ ಸ್ನಾನ (ರಾಜ ಸ್ನಾನ/ಶಾಹಿ ಸ್ನಾನ)
ಫೆಬ್ರವರಿ 3 – ವಸಂತ ಪಂಚಮಿ ಸ್ನಾನ (ರಾಜ ಸ್ನಾನ/ಶಾಹಿ ಸ್ನಾನ)
ಫೆಬ್ರವರಿ 12 – ಮಾಘಿ ಪೂರ್ಣಿಮಾ ಸ್ನಾನ
ಫೆಬ್ರವರಿ 26 – ಮಹಾ ಶಿವರಾತ್ರಿ ಸ್ನಾನ (ಸಮಾಪ್ತಿಯ ದಿನ)
ಕುಂಭ ದಿನಾಂಕವನ್ನು ಹೇಗೆ ನಿರ್ಧರಿಸಲಾಗುತ್ತದೆ?
ಕುಂಭಮೇಳದ ಸ್ಥಳ ಮತ್ತು ದಿನಾಂಕವನ್ನು ನಿರ್ಧರಿಸಲು, ಜ್ಯೋತಿಷಿಗಳು ಮತ್ತು ವಿವಿಧ ಅಖಾರಗಳ (ಪಂಗಡಗಳ ಗುಂಪುಗಳು) ನಾಯಕರು ಭೇಟಿಯಾಗಿ ಗುರು ಮತ್ತು ಸೂರ್ಯನ ಸ್ಥಾನಗಳನ್ನು ಪರಿಶೀಲಿಸುತ್ತಾರೆ. ಗುರು ಮತ್ತು ಸೂರ್ಯ ಇಬ್ಬರೂ ಹಿಂದೂ ಜ್ಯೋತಿಷ್ಯದಲ್ಲಿ ಪ್ರಮುಖ ಗ್ರಹಗಳಾಗಿವೆ ಮತ್ತು ಕುಂಭಮೇಳದ ಸಮಯ ಮತ್ತು ಸ್ಥಳವನ್ನು ಅವುಗಳ ಸ್ಥಾನಗಳ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ.