ನವದೆಹಲಿ: ಮಹಾಕುಂಭಮೇಳದಲ್ಲಿ (Mahakumbhamela) ತನ್ನ ಕಣ್ಣಿನ ಮೂಲಕ ಎಲ್ಲರ ನಿದ್ದೆಗೆಡಿಸಿದ್ದ ಮೊನಲಿಸಾಳ (Monalisa) ಹಾಟ್ ಸಾಂಗ್ ರಿಲೀಸ್ ಆಗಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಉತ್ತರ ಪ್ರದೇಶದ (Uttara Pradesh) ಪ್ರಯಾಗ್‌ರಾಜ್‌ದಲ್ಲಿ (Prayagraj) ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಹುಡುಗಿಯೊಬ್ಬಳು ರುದ್ರಾಕ್ಷಿ ಮಾರುತ್ತಿದ್ದಳು. ಆಕೆಯ ಮುಗ್ಧ ನಗು, ನೀಲಿ ಕಣ್ಣುಗಳ ಮೂಲಕವೇ ಎಲ್ಲರ ಗಮನಸೆಳೆದು ರಾತ್ರೋರಾತ್ರಿ ಫೇಮಸ್ ಆಗಿ ಇಂಟರ್ನೆಟ್‌ನಲ್ಲಿ ಸಂಚಲನ ಮೂಡಿಸಿದ್ದಳು.ಇದನ್ನೂ ಓದಿ: ಶೂಟಿಂಗ್ ಮುಗಿಸಿದ ದುಷ್ಯಂತ್, ಆಶಿಕಾ ನಟನೆಯ ‘ಗತವೈಭವ’ ಸಿನಿಮಾ
ಇದೀಗ ಸಾಮಾಜಿಕ ಜಾಲತಾಣದಲ್ಲಿ ಮೊನಾಲಿಸಾ ಹಾಟ್ ಡ್ಯಾನ್ಸ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ಕೆಂಪು ಬಣ್ಣದ ಒನ್‌ಪೀಸ್‌ನಲ್ಲಿ ಕಾಣಿಸಿಕೊಂಡಿರುವ ಮೊನಾಲಿಸಾಳ ಸಂಪೂರ್ಣ ಲುಕ್ ಬದಲಾಗಿದ್ದು, ಸಂಪೂರ್ಣವಾಗಿ AI ತಂತ್ರಜ್ಞಾನ ಬಳಸಿಕೊಂಡು ಮಾಡಿರುವ ವಿಡಿಯೋ ಇದಾಗಿದೆ.
View this post on Instagram
ವೈರಲ್ ಆಗಿರುವ ವಿಡಿಯೋದಿಂದಾಗಿ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹರಿದಾಡುತ್ತಿರುವ ವಿಡಿಯೋಗೆ ಹಲವರು ಕಮೆಂಟ್ ಮಾಡಿದ್ದು, ಎಡಿಟ್ ಮಾಡಿರುವವರ ವಿರುದ್ಧ ಕಿಡಿಕಾರಿದ್ದಾರೆ.ಇದನ್ನೂ ಓದಿ: ಕುಂಭಮೇಳದಿಂದ ವಾಪಸ್ ಆಗುವಾಗ ರಸ್ತೆ ಅಪಘಾತ – ಮೈಸೂರಿನ ಇಬ್ಬರು ದುರ್ಮರಣ