ಬೆಂಗಳೂರು: ದೆಹಲಿಯ ಶ್ರದ್ಧಾವಾಕರ್ ಮಾದರಿಯಲ್ಲಿ ಹತ್ಯೆಗೀಡಾಗಿದ್ದ ಮಹಾಲಕ್ಷ್ಮಿ ಕೊಲೆ ಪ್ರಕರಣದ (Mahalakshmi Case) ತನಿಖೆ ಚುರುಕು ಪಡೆದಿದೆ. ಈ ನಡುವೆಯೇ ಪ್ರಕರಣ ಶಂಕಿತ ಆರೋಪಿ ಒಡಿಶಾದಲ್ಲಿ (Odisha) ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ದೇಹವನ್ನ ಪೀಸ್ ಪೀಸ್ ಮಾಡಿ ತರಕಾರಿ ಜೋಡಿಸಿದಂತೆ ಫ್ರಿಡ್ಜ್‌ನಲ್ಲಿ ತುಂಬಿಟ್ಟಿದ್ದ ಹಂತಕ; ಕ್ರೂರತೆಗೆ ಕೊನೆ ಇಲ್ವಾ?
ಮುಕ್ತಿರಂಜನ್ ರಾಯ್ ಆತ್ಮಹತ್ಯೆ ಮಾಡಿಕೊಂಡ ಶಂಕಿತ ಕೊಲೆ ಆರೋಪಿ. ಈತ ಮಹಾಲಕ್ಷ್ಮಿ ಕೊಲೆ ಬಳಿಕ ತಲೆಮರೆಸಿಕೊಂಡು ಓಡಾಡುತ್ತಿದ್ದ. ಈ ಸಂಬಂಧ ವಿಚಾರಣೆಗೆ ಬೆಂಗಳೂರಿನ ವೈಯಾಲಿಕಾವಲ್ ಪೊಲೀಸರು ಒಡಿಶಾಗೆ ತೆರಳಲು ಮುಂದಾಗಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಮಹಿಳೆ ಭೀಕರ ಹತ್ಯೆ; ಅಶ್ರಫ್ ಸೇರಿ ನಾಲ್ವರ ಮೇಲೆ ಕುಟುಂಬಸ್ಥರ ಅನುಮಾನ
ತನಿಖೆ ಚುರುಕು:
ಸೆಪ್ಟೆಂಬರ್ 1ರ ತನಕ ಮಹಾಲಕ್ಷ್ಮಿ ಕೆಲಸಕ್ಕೆ ಹೋಗಿದ್ದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 2 ಅಥವಾ 3 ರಂದು ಕೊಲೆ ಆಗಿರಬಹುದು ಎಂದು ಪೊಲೀಸರು ಸದ್ಯಕ್ಕೆ ಅಂದಾಜಿಸಿದ್ದಾರೆ. ಇನ್ನೂ ಆಕೆ ಕೆಲಸ ಮಾಡ್ತಿದ್ದ ಶಾಪ್‌ನ ಟೀಂ ಲೀಡರ್ ಮುಕ್ತಿರಂಜನ್ ಕೂಡ ಸೆಪ್ಟೆಂಬರ್ 1ರ ನಂತರ ಕೆಲಸಕ್ಕೆ ಬಾರದೇ ಇರೋದು ಹಲವು ಅನುಮಾಗಳಿಗೆ ಕಾರಣವಾಗಿತ್ತು. ಒಡಿಶಾದಲ್ಲಿ ಹಂತಕ ಇರುವ ಶಂಕೆ ಮೇರೆಗೆ ಪೊಲೀಸರು ಅಲ್ಲಿಗೆ ತೆರಳಿದ್ದರು. ಕೊಲೆ ಪ್ರಕರಣದ ಬಗ್ಗೆ ಒಡಿಶಾ ಪೊಲೀಸರಿಗೂ ಸಹ ಮಾಹಿತಿ ನೀಡಿದ್ದರು. ಇದನ್ನೂ ಓದಿ: ಮಹಾಲಕ್ಷ್ಮಿ ಮರ್ಡರ್ ಕೇಸ್‌ಗೆ ಟ್ವಿಸ್ಟ್ – ಫ್ರಿಡ್ಜ್ ಮೇಲೆ ಹಲವು ಕಡೆ ಹಲವು ಬೆರಳಚ್ಚು ಗುರುತು ಪತ್ತೆ!
ಈ ಮಧ್ಯೆ, ಮಹಾಲಕ್ಷ್ಮಿ ಶವವನ್ನು 59 ತುಂಡು ಮಾಡಿರುವ ಹಂತಕ ತುಂಬಾನೆ ಅಪಾಯಕಾರಿ ಎಂದು ಮನೋವೈದ್ಯರು ವಿಶ್ಲೇಷಣೆ ಮಾಡಿದ್ದರು. ಸುಡೋ ಮ್ಯಾಚೋಯಿಸಂ ಎಂಬ ಅಪರಾಧ ಸ್ವಭಾವ ಇರಬಹುದು. ಆತನನ್ನು ತಕ್ಷಣವೇ ಬಂಧಿಸದಿದ್ರೆ ಇನ್ನಷ್ಟು ಮಂದಿ ಇದೇ ರೀತಿ ಬಲಿಯಾಗಬಹುದು ಎಂದು ಎಚ್ಚರಿಕೆ ಸಹ ನೀಡಿದ್ದರು. ಇದನ್ನೂ ಓದಿ: ಬೆಂಗಳೂರಲ್ಲಿ ಮಹಿಳೆಯ ಬರ್ಬರ ಹತ್ಯೆ- ಪಶ್ಚಿಮ ಬಂಗಾಳದಲ್ಲಿ ಹಂತಕ ತಲೆಮರೆಸಿಕೊಂಡಿರೋ ಶಂಕೆ