ಚಾಮರಾಜನಗರ: ಮಹಾಲಯ ಅಮಾವಾಸ್ಯೆ (Mahalaya Amavasya) ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ (Male Mahadeshwara Temple) ಬೆಟ್ಟಕ್ಕೆ ಭಕ್ತರ ದಂಡು ಆಗಮಿಸುತ್ತಿದೆ.
ಭಾನುವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಲಿದೆ. ರಾತ್ರಿಯಿಂದಲೇ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತರು ಬೀಡುಬಿಟ್ಟಿದ್ದಾರೆ. ಇದನ್ನೂ ಓದಿ: ನಕಲಿ ದಾಖಲೆ ತೋರಿಸಿ ಹಿಂದೂ ಯುವತಿ ಜೊತೆ ಮದ್ವೆ – ಯೂಟ್ಯೂಬರ್ ಮುಕಳೆಪ್ಪ ವಿರುದ್ಧ ಎಫ್‌ಐಆರ್
ಮಹದೇಶ್ವರ ಬೆಟ್ಟದಲ್ಲಿ ಸಕಲ ತಯಾರಿ ನಡೆದಿದೆ. ಪ್ರಾಧಿಕಾರದಿಂದ ಭಕ್ತರಿಗಾಗಿ 2 ಲಕ್ಷ ಲಾಡು ತಯಾರಿಸಲಾಗಿದೆ. ಭಕ್ತರೆಲ್ಲರಿಗೂ ದಾಸೋಹ ವ್ಯವಸ್ಥೆ ಮಾಡಲಾಗಿದೆ. ಲೈಟಿಂಗ್‌ನಿಂದ ಮಾದಪ್ಪನ ಸನ್ನಿಧಿ ಮತ್ತಷ್ಟು ಕಂಗೊಳಿಸುತ್ತಿದೆ.