ಕಲಬುರಗಿ: ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅವರ ಬಗ್ಗೆ ಮೈಸೂರು ಸಂಸದ ಪ್ರತಾಪ್ ಸಿಂಹ ಅವರು ಮಾಡಿದ ಟೀಕೆ ಬಗ್ಗೆ ಕ್ಷಮೆ ಕೇಳದಿದ್ದರೆ ಚಪ್ಪಲಿಯಲ್ಲಿ ಹೊಡೆಯುತ್ತೇವೆ ಎಂದು ಸುಲಫಲ ಮಠದ ಮಹಾಂತ ಶಿವಾಚಾರ್ಯ ಅವರು ಎಚ್ಚರಿಕೆ ನೀಡಿದ್ದಾರೆ.
Advertisement
ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ರ‍್ಯಾಲಿಯಲ್ಲಿ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಅವರು ದಲಿತ ನಾಯಕರಾಗಿದ್ದಾರೆ. ಹೀಗಿರುವಾಗ ಅವರ ಬಗ್ಗೆ ಸರಿಯಾಗಿ ತಿಳಿದುಕೊಳ್ಳದ ಪ್ರತಾಪ್ ಸಿಂಹ ಓರ್ವ ನಾಲಾಯಕ್ ಸಂಸದನಾಗಿದ್ದಾನೆ. 15 ದಿನದಲ್ಲಿ ಪಶ್ವಾತಾಪ ಪಟ್ಟು ಕ್ಷಮೆ ಕೇಳದಿದ್ದರೆ ಮೈಸೂರಿನ ಅವರ ಮನೆಗೆ ತೆರಳಿ ಚಡ್ಡಿ ಬಿಚ್ಚಿ ಚಪ್ಪಲಿಯಿಂದ ಹೊಡೆಯುತ್ತೇವೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಮರಿ ಖರ್ಗೆ ಹೆಸರು ಗಂಡೋ, ಹೆಣ್ಣೋ ಎಂಬ ಕ್ಲಾರಿಟಿ ಇಲ್ಲ: ಪ್ರತಾಪ್ ಸಿಂಹ
Advertisement
Advertisement
ಕೆಲವು ದಿನಗಳ ಹಿಂದೆ ಬಿಟ್‍ಕಾಯಿನ್ ಬಗ್ಗೆ ಪ್ರಿಯಾಂಕ್ ಖರ್ಗೆ ಅವರು ಧ್ವನಿ ಎತ್ತಿದ್ದು, ಈ ಬಗ್ಗೆ ತನಿಖೆ ನಡೆಸಬೇಕೆಂದು ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬಿಜೆಪಿಯ ಕೆಲವು ನಾಯಕರಲ್ಲಿ ಜಟಾಪಟಿ ಏರ್ಪಟ್ಟಿದೆ. ಈ ಮಧ್ಯೆ ಈ ಇಬ್ಬರ ನಾಯಕರ ಮಧ್ಯ ಇದೀಗ ಮಹಾಂತ ಶ್ರೀಗಳು ಎಂಟ್ರಿ ಕೊಟ್ಟಿದ್ದಾರೆ. ಇನ್ನೊಂದೆಡೆ ಸ್ವಾಮೀಜಿಗಳ ಈ ಮಾತು ವೈರಲ್ ಆಗುತ್ತಿದ್ದು, ಪ್ರಜ್ಞಾವಂತ ಜನರ ಆಕ್ರೋಶಕ್ಕೂ ಕಾರಣವಾಗಿದೆ. ಇದನ್ನೂ ಓದಿ: ಜೆಡಿಎಸ್ ಪಕ್ಷ ಕುಟುಂಬಕ್ಕೆ ಮಾತ್ರ ಸೀಮಿತ: ಶಾಸಕ ಪ್ರೀತಂಗೌಡ ವ್ಯಂಗ್ಯ
Advertisement