ಮೈಸೂರು: ದಿವಂಗತ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ನೆನಪಿನಾರ್ಥ ಆಯೋಜಿಸಲಾಗಿದ್ದ ಕ್ರಿಕೆಟ್ ಟೂರ್ನಿಯನ್ನು ಬ್ಯಾಟಿಂಗ್ ಮಾಡುವ ಮೂಲಕ ಮೈಸೂರಿನ ಯದುವಂಶದ ಸೊಸೆ ತ್ರಿಷಿಕಾ ಕುಮಾರಿ ಸಿಂಗ್ ಉದ್ಘಾಟಿಸಿದ್ದಾರೆ.
ಇಂದು ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ನೆನಪಿನಾರ್ಥ ಅರಸು ಮಂಡಳಿ ವತಿಯಿಂದ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಿದೆ. ಈ ಪಂದ್ಯಾವಳಿಗೆ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಪತ್ನಿ ತ್ರಿಷಿಕಾ ಅವರು ಬ್ಯಾಟ್ ಬೀಸುವ ಮೂಲಕ ಚಾಲನೆ ನೀಡಿದರು.
ತ್ರಿಷಿಕಾ ಅವರು ಕ್ರಿಕೆಟ್ ಪಿಚ್‌ನಲ್ಲಿ ಬ್ಯಾಟಿಂಗ್ ಮಾಡಿ ಕಾರ್ಯಕ್ರಮ ಉದ್ಘಾಟಿಸಿ ಖುಷಿ ಪಟ್ಟಿದ್ದಾರೆ. ಹಾಗೆಯೇ ಪಂದ್ಯಾವಳಿಯಲ್ಲಿ ಸ್ಪರ್ಧಿಸುತ್ತಿರುವ ಎಲ್ಲಾ ಕ್ರಿಕೆಟ್ ತಂಡಕ್ಕೂ ಶುಭಹಾರೈಸಿದ್ದು, ಅವರ ಪ್ರೋತ್ಸಾಹಕ್ಕೆ ಆಟಗಾರರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ ತ್ರಿಷಿಕಾ ಅವರು ಬ್ಯಾಟಿಂಗ್ ಮಾಡಿದ ದೃಶ್ಯವನ್ನು ಸ್ಥಳದಲ್ಲಿದ್ದವರು ಕ್ಯಾಮೆರಾ ಕಣ್ಣಲ್ಲಿ ಸೆರೆಹಿಡಿದಿದ್ದಾರೆ.