ಮುಂಬೈ: ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರ್ ಮತ್ತು ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ 10 ಮಂದಿ ಮೃತಪಟ್ಟಿರುವ ಘಟನೆ ಇಂದು ನಡೆದಿದೆ.
ಈ ಅಪಘಾತ ಮಹಾರಾಷ್ಟ್ರದ ಯಾವತ್ಮಾಲ್ ನ ಆರ್ನಿ ಪ್ರದೇಶದಲ್ಲಿ ನಡೆದಿದ್ದು, ಪಂಜಾಬ್ ನ ಸಿಖ್ ಕುಟುಂಬದವರು ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ.
ಕುಟುಂಬದವರೆಲ್ಲರೂ ಮೂರು ವಿವಿಧ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಕಾರ್ ಮತ್ತು ಟ್ರಕ್ ವೇಗವಾಗಿ ಬಂದ ಪರಿಣಾಮ ಮುಖಾಮುಖಿ ಡಿಕ್ಕಿ ಹೊಡೆದಿವೆ. ಪರಿಣಾಮ ಹತ್ತು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತರಲ್ಲಿ ಇಬ್ಬರು ಮಕ್ಕಳು, ನಾಲ್ವರು ಮಹಿಳೆಯರು ಹಾಗೂ ಪುರುಷರು ಎನ್ನಲಾಗಿದೆ.
ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಸಮೀಪದ ಯುವತ್ಮಾಲ್ ಗ್ರಾಮೀಣ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನಿಡಲಾಗುತ್ತಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಘಟನೆಯ ಹೆಚ್ಚಿನ ವಿವರಗಳನ್ನು ಕಲೆ ಹಾಕುತ್ತಿದ್ದಾರೆ.
ಇದೇ ಸ್ಥಳದಲ್ಲಿ ಎರಡು ದಿನಗಳ ಹಿಂದೆ ಬಸ್ ಮತ್ತು ದ್ವಿಚಕ್ರವಾಹನ ಮುಖಾಮುಖಿ ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿದ್ದು, 18 ಮಂದಿ ಗಾಯಗೊಂಡಿದ್ದ ಘಟನೆ ನಡೆದಿತ್ತು.
Maharashtra: 10 people dead, 3 injured in a collision between a car and a truck near Yavatmal's Arni, in the early morning hours. Police present at the spot. pic.twitter.com/O43XYsJtfs
— ANI (@ANI) June 1, 2018