ಚಿಕ್ಕೋಡಿ: ಮಹಾರಾಷ್ಟ್ರದ (Maharashtra) ಸಾಂಗ್ಲಿ – ಕೊಲ್ಹಾಪುರ ಹೆದ್ದಾರಿಯಲ್ಲಿರುವ ಕೃಷ್ಣಾ ನದಿಯ (Krishna River) ಅಂಕಲಿ ಸೇತುವೆಯ ಮೇಲಿಂದ ಕಾರೊಂದು ಕೆಳಗೆ ಬಿದ್ದು ಮೂವರು ಸಾವಿಗೀಡಾಗಿದ್ದಾರೆ. ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ಸಾವಿಗೀಡಾದವರನ್ನು, ಪ್ರಸಾದ್ ಭಾಲಚಂದ್ರ ಖೇಡೇಕರ್ (35) ಮತ್ತು ಪತ್ನಿ ಪ್ರೇರಣಾ ಪ್ರಸಾದ್ ಖೇಡೇಕರ್ ಹಾಗೂ ವೈಷ್ಣವಿ ಸಂತೋಷ್ ನಾರ್ವೇಕರ್ ಎಂದು ಗುರುತಿಸಲಾಗಿದೆ.
ಗಾಯಾಳುಗಳನ್ನು ಸಮರ್ಜಿತ್ ಪ್ರಸಾದ ಖೇಡೇಕರ್ (7) ವರದ ಸಂತೋಷ್ ನಾರ್ವೇಕರ್ (19) ಮತ್ತು ಸಾಕ್ಷಿ ಸಂತೋಷ್ ನಾರ್ವೇಕರ್ (42) ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಜೈಸಿಂಗಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.