CrimeLatestMain PostNational

ಉಡದ ಮೇಲೆ ಅತ್ಯಾಚಾರಗೈದ ನಾಲ್ವರು ಅರೆಸ್ಟ್

Advertisements

ಮುಂಬೈ: ಉಡದ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ನಾಲ್ವರು ಬೇಟೆಗಾರರನ್ನು ಮಹಾರಾಷ್ಟ್ರ ಅರಣ್ಯ ಇಲಾಖೆ ಬಂಧಿಸಿದೆ. ವರದಿಗಳ ಪ್ರಕಾರ, ಈ ಘಟನೆಯು ಗೋಥಾಣೆಯ ಗಭಾ ಪ್ರದೇಶದಲ್ಲಿ ನಡೆದಿದೆ.

ಈ ನಾಲ್ವರು ವ್ಯಕ್ತಿಗಳು ಕಾಡಿನಲ್ಲಿ ತಿರುಗಾಡುತ್ತಿರುವುದನ್ನು ಸಿಸಿಟಿವಿ ದೃಶ್ಯಾವಳಿಗಳು ತೋರಿಸಿವೆ ಎಂದು ಸಾಂಗ್ಲಿ ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ. ಅರಣ್ಯಾಧಿಕಾರಿಗಳು ಮೊದಲು ಒಬ್ಬ ಶಂಕಿತನನ್ನು ಬಂಧಿಸಿದ್ದು, ಆತನ ಮೊಬೈಲ್ ಪರಿಶೀಲಿಸಿದಾಗ ಆಘಾತಕಾರಿ ವಿಡಿಯೋ ನೋಡಿ ಅರಣ್ಯಾಧಿಕಾರಿಗಳು ಶಾಕ್ ಆಗಿದ್ದಾರೆ. ಇದನ್ನೂ ಓದಿ: ಐಎನ್‌ಎಸ್ ದೇಣಿಗೆ ವಂಚನೆ: ಬಿಜೆಪಿ ಮುಖಂಡ ಕಿರಿತ್ ಸೋಮಯ್ಯ, ಪುತ್ರನ ವಿರುದ್ಧ ಪ್ರಕರಣ ದಾಖಲು

ಕೃತ್ಯದ ವೀಡಿಯೋ ಮತ್ತು ಫೋಟೋಗಳು ಮೊಬೈಲ್‍ನಲ್ಲಿ ಪತ್ತೆಯಾಗಿದೆ. ಉಳಿದ ಆರೋಪಿಗಳನ್ನು ರತ್ನಗಿರಿ ಜಿಲ್ಲೆಯಿಂದ ಬಂಧಿಸಲಾಗಿದೆ. ಇದನ್ನೂ ಓದಿ: ಭಾರತಕ್ಕೆ ಕಾಲಿಟ್ಟ ಹೊಸ ರೂಪಾಂತರಿ ʼXEʼ – ಮುಂಬೈನಲ್ಲಿ ಮೊದಲ

Leave a Reply

Your email address will not be published.

Back to top button