Connect with us

Corona

ಸೊಲ್ಲಾಪುರ ಜೈಲಿನಲ್ಲಿ ಸಿಬ್ಬಂದಿ ಸೇರಿ 60 ಮಂದಿಗೆ ಕೊರೊನಾ

Published

on

ಮುಂಬೈ: ಮಹಾರಾಷ್ಟ್ರದ ಸೊಲ್ಲಾಪುರ ಜೈಲಿನಲ್ಲಿ ಸಿಬ್ಬಂದಿ ಸೇರಿ 60 ಮಂದಿಗೆ ಕೊರೊನಾ ವೈರಸ್ ತಗುಲಿರುವುದು ದೃಢಪಟ್ಟಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಸೊಲ್ಲಾಪುರ ಜಿಲ್ಲಾಧಿಕಾರಿ ಮಿಲಿಂದ್ ಶಂಭಾರ್ಕರ್, ಜೈಲಿನಲ್ಲಿ ಒಟ್ಟು 300 ಮಂದಿ ಕೈದಿಗಳಿದ್ದಾರೆ. ಕೊರೊನಾ ತಗುಲಿದ 60 ಮಂದಿಯ ಪೈಕಿ 8 ಜನ ಜೈಲು ಸಿಬ್ಬಂದಿ ಇದ್ದಾರೆ. ಎಲ್ಲರನ್ನೂ ಸದ್ಯ ಐಸೋಲೇಷನ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಸೊಲ್ಲಾಪುರ ಜೈಲಿನ ಕೈದಿ ಮತ್ತು ಸಿಬ್ಬಂದಿಗೆ ಕೊರೊನಾ ಗುಣಲಕ್ಷಣಗಳು ಕಂಡು ಬಂದಿದ್ದವು. ಈ ಹಿನ್ನೆಲೆ ಅವರನ್ನು ಕೊರೊನಾ ಟೆಸ್ಟ್‍ಗೆ ಒಳಪಡಿಸಿದಾಗ ಮೇ 26ರಂದು ರಿಪೋರ್ಟ್ ಪಾಸಿಟಿವ್ ಬಂದಿತ್ತು. ತಕ್ಷಣವೇ ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದವರ ಗಂಟಲು ದ್ರವವನ್ನು ಪರೀಕ್ಷೆಗೆ ಒಳಪಡಿಸಿದಾಗ ಗುರುವಾರ 60 ಮಂದಿಗೆ ಸೋಂಕು ದೃಢಪಟ್ಟಿದೆ.

ಈವರೆಗೂ ಸೊಲ್ಲಾಪುರ ಜಿಲ್ಲೆಯಲ್ಲಿ ಒಟ್ಟು 1,144 ಮಂದಿ ಸೋಂಕಿತರಿದ್ದು, 99 ಜನ ಮೃತಪಟ್ಟಿದ್ದಾರೆ. ಕೊರೊನಾ ವೈರಸ್ ಮಹಾರಾಷ್ಟ್ರದ ಮೇಲೆ ಕೆಟ್ಟ ಪರಿಣಾಮ ಬೀರಿದೆ. ಮಹಾರಾಷ್ಟ್ರದಲ್ಲಿ ಈವರೆಗೂ 74 ಸಾವಿರಕ್ಕೂ ಹೆಚ್ಚು ಜನರಿಗೆ ಕೊರೊನಾ ದೃಢಪಟ್ಟಿದ್ದು, 32,329 ಜನ ಗುಣಮುಖರಾಗಿದ್ದಾರೆ. 2,587 ಮಂದಿ ಹೆಮ್ಮಾರಿಗೆ ಬಲಿಯಾಗಿದ್ದಾರೆ.