ಮುಂಬೈ: ಕಾರೊಂದು ಮೇಲ್ಸೇತುವೆ (Flyover) ಮೇಲಿಂದ ರೈಲ್ವೇ ಹಳಿಗೆ (Railway Track) ಬಿದ್ದ ಪರಿಣಾಮ ಐವರು ಗಂಭೀರ ಗಾಯಗೊಂಡ ಘಟನೆ ಭಾನುವಾರ ಮಹಾರಾಷ್ಟ್ರದಲ್ಲಿ (Maharashtra) ನಡೆದಿದೆ.
ಬೆಳಿಗ್ಗೆ 7:30ರ ಸುಮಾರಿಗೆ ನಾಗ್ಪುರದ (Nagpur) ಬೋರ್ಖೆಡಿ ಮೇಲ್ಸೇತುವೆಯ ಮೇಲೆ ಕಾರು ಚಲಿಸುತ್ತಿತ್ತು. ಈ ವೇಳೆ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಜೆಪಿ ನಡ್ಡಾ ಅವ್ರು ದೆಹಲಿಗೆ ಬನ್ನಿ ಎಂದಿದ್ದಕ್ಕೆ ಹೋಗುತ್ತಿದ್ದೇನೆ: ಬಿಎಸ್‍ವೈ
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದೆ. ಅತಿ ವೇಗದಲ್ಲಿ ಕಾರು ಚಲಾಯಿಸಿದ ಪರಿಣಾಮ ಈ ಅಪಘಾತ ಸಂಭವಿಸಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ಬುಟಿಬೋರಿ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣವೇನು ಎಂದು ತನಿಖೆ ಬಳಿಕ ತಿಳಿಯಲಿದೆ. ಸದ್ಯ ಗಾಯಾಳುಗಳು ಚೇತರಿಸಿಕೊಂಡ ಬಳಿಕ ಅವರಿಂದ ಮಾಹಿತಿ ಪಡೆಯಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಇಂದು ನಂದಿಗಿರಿಧಾಮ ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧ ತೆರವು; ನಾಳೆ ಬಂದ್ – ಜಿಲ್ಲಾಡಳಿತ ಮರು ಆದೇಶ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]