– ಮಹಾರಾಷ್ಟ್ರ ಪೊಲೀಸರಿಂದ ಬೆಂಗಳೂರಲ್ಲಿ 3 ಡ್ರಗ್ಸ್ ಫ್ಯಾಕ್ಟರಿ ಪತ್ತೆ
ಬೆಂಗಳೂರು: ಹೊಸ ವರ್ಷಾಚರಣೆ ಹೊಸ್ತಿಲಲ್ಲೇ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಮಹಾರಾಷ್ಟ್ರ ಎಎನ್‌ಟಿಎಫ್‌ನಿಂದ ಬೆಂಗಳೂರಲ್ಲಿ ಡ್ರಗ್ಸ್ (Bengaluru Drugs) ಫ್ಯಾಕ್ಟರಿ ಸೀಜ್ ಮಾಡಲಾಗಿದೆ. ಬರೋಬ್ಬರಿ 55.88 ಕೋಟಿ ರೂ. ಮೌಲ್ಯದ ಎಂಡಿ ಸಿಂಥೆಟಿಕ್ ಡ್ರಗ್ಸ್ ಅನ್ನು ಪೊಲೀಸರು ಸೀಜ್ ಮಾಡಿದ್ದಾರೆ.
ಎಎನ್‌ಟಿಎಫ್-ಮಹಾರಾಷ್ಟ್ರ ಮಾದಕ ವಸ್ತು ನಿಗ್ರಹ ದಳ ಕಾರ್ಯಾಚರಣೆ ನಡೆಸಿತ್ತು. ಕೋಟಿ, ಕೋಟಿ ಮೌಲ್ಯದ ಡ್ರಗ್ಸ್ ಸೀಜ್ ಮಾಡಿದ್ದು, ನಾಲ್ವರು ಆರೋಪಿಗಳ ಬಂಧಿಸಲಾಗಿದೆ. ಬೆಂಗಳೂರಿನ ಮೂರು ಕಡೆ ಇದ್ದ ಡ್ರಗ್ಸ್ ಫ್ಯಾಕ್ಟರಿ ಸೀಜ್ ಮಾಡಲಾಗಿದೆ. ಇದನ್ನೂ ಓದಿ: ಲಾರಿಗೆ ಹಿಂಬದಿಯಿಂದ ಖಾಸಗಿ ಬಸ್ ಡಿಕ್ಕಿ – ಬಸ್ ಚಾಲಕ ಗಂಭೀರ, 20ಕ್ಕೂ ಹೆಚ್ಚು ಮಂದಿಗೆ ಗಾಯ
ಮುಂಬೈನಲ್ಲಿ ಇತ್ತೀಚೆಗೆ 1.5 ಕೋಟಿ ರೂ. ಮೌಲ್ಯದ ಡ್ರಗ್ಸ ಸೀಜ್ ಆಗಿತ್ತು. ಅಲ್ಲಿ ಅಬ್ದುಲ್ಲ ಖಾದರ್ ಶೇಕ್ ಎಂಬಾತನ ಬಂಧನವಾಗಿತ್ತು. ವಿಚಾರಣೆ ನಂತರ ಬೆಳಗಾವಿಯ ಪ್ರಶಾಂತ್ ಯಲ್ಲಪ್ಪ ಪಾಟೀಲ್ ಬಂಧಿಸಲಾಗಿತ್ತು. ಪಾಟೀಲ್ ಮಾಹಿತಿ ಮೇರೆಗೆ ಬೆಂಗಳೂರಿನ ಮೂರು ಕಡೆ ದಾಳಿ ನಡೆದಿತ್ತು. ಇಲ್ಲಿ ರಾಜಸ್ಥಾನದ ಸೂರಜ್ ರಮೇಶ್ ಯಾದವ್ ಮತ್ತು ಮಲ್ಖಾನ್ ರಾಮಲಾಲ್ ಬಿಷ್ಣೋಯ್ ಬಂಧನವಾಗಿದೆ.
ಆರ್‌ಜೆ ಇವೆಂಟ್ ಹೆಸರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿರುವುದು ಪತ್ತೆಯಾಗಿದೆ. ಹೊರಮಾವು, ಯರಪ್ಪನಹಳ್ಳಿ, ಕಣ್ಣೂರು ಬಳಿ ಡ್ರಗ್ಸ್ ಫ್ಯಾಕ್ಟರಿ ಪತ್ತೆಹಚ್ಚಲಾಗಿದೆ. ದಾಳಿಗಳ ವೇಳೆ 4.1 ಕೆಜಿ ಘನ ಎಂಡಿ ಮತ್ತು 17 ಕೆಜಿ ದ್ರವ ಎಂಡಿ ಸೇರಿದಂತೆ ಒಟ್ಟು 21.4 ಕೆಜಿ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ. ಡ್ರಗ್ಸ್ ತಯಾರಿಸುವ ಯಂತ್ರೋಪಕರಣಗಳು ಮತ್ತು ರಾಸಾಯನಿಕ ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ಫ್ಯಾಕ್ಟರಿಗಳಿಂದ ದೇಶದ ಅನೇಕ ರಾಜ್ಯಗಳಿಗೆ ಡ್ರಗ್ಸ್ ಸಪ್ಲೈ ಆಗುತ್ತಿದ್ದ ಶಂಕೆ ವ್ಯಕ್ತವಾಗಿದೆ. ಸದ್ಯ ಬಂಧಿತರನ್ನ ಮಹಾರಾಷ್ಟ್ರ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಡಿ.25, 26 ರಂದು ಮಹಾರಾಷ್ಟ್ರ ಎಎನ್‌ಟಿಎಫ್ ಕಾರ್ಯಾಚರಣೆ ನಡೆಸಿತ್ತು. ರಾಜಸ್ಥಾನ ಮೂಲದ ಕಿಂಗ್‌ಪಿನ್‌ಗಳಿಂದ ಡ್ರಗ್ಸ್ ಫ್ಯಾಕ್ಟರಿ ನಡೆಯುತ್ತಿತ್ತು. ಇಬ್ಬರು ಬೆಂಗಳೂರಿನ ಮೂರು ಕಡೆ ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿದ್ದರು. ಯೋಗಿರಾಜ್ ಕುಮಾರ್, ನಯನ್ ಪವರ್ ಇಡೀ ದಂಧೆಯ ಕಿಂಗ್‌ಪಿನ್‌ಗಳು. ಮೂಲತಃ ರಾಜಸ್ಥಾನದ ಇಬ್ಬರು ಡ್ರಗ್ಸ್ ಬ್ಯುಸಿನೆಸ್‌ಮೆನ್‌ಗಳು. ದೇಶದ ಅನೇಕ ಕಡೆ ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿದ್ದಾರೆ. ಸದ್ಯ ನಾಲ್ವರನ್ನ ಬಂಧಿಸಿ ಕಿಂಗ್‌ಪಿನ್‌ಗಳಿಗೆ ಹುಡುಕಾಟ ನಡೆಸಲಾಗಿದೆ. ಇದನ್ನೂ ಓದಿ: ಸ್ಥಳೀಯ ಸಂಸ್ಥೆ ಚುನಾವಣೆ; ಮುಖಕ್ಕೆ ಕಪ್ಪು ಬಟ್ಟೆ ಮುಚ್ಚಿ, ಕೈ ಕಟ್ಟಿಕೊಂಡು ಜೈಲಿಂದ ಬಂದು ನಾಮಪತ್ರ ಸಲ್ಲಿಸಿದ ಗ್ಯಾಂಗ್‌ಸ್ಟರ್
ಎಲ್ಲೆಲ್ಲೆ ದಾಳಿ?
ಕಾರ್ಖಾನೆ ಸಂಖ್ಯೆ 1
ಸ್ಥಳ – ಬಾಗಲೂರು ಪೊಲೀಸ್ ಠಾಣೆ ಮಿತಿಯೊಳಗಿನ ಸ್ಪಂದನ ಲೇಔಟ್ ಕಾಲೋನಿ
ಕಾರ್ಖಾನೆ ಸಂಖ್ಯೆ 2
ಸ್ಥಳ – ಕೊತ್ತನೂರು ಪೊಲೀಸ್ ಠಾಣೆ ಮಿತಿಯೊಳಗಿನ ಎನ್.ಜಿ. ಗೋಲ್ಲಹಳ್ಳಿ ಪ್ರದೇಶದಲ್ಲಿ ಆರ್.ಜೆ. ಈವೆಂಟ್ ಎಂಬ ಹೆಸರಿನ ಕಾರ್ಖಾನೆ
ಅಕ್ರಮ ಡ್ರಗ್ಸ್ ಸಂಗ್ರಹಣೆ ಗೋದಾಮು
ಸ್ಥಳ -ಅವಲಹಳ್ಳಿ ಪೊಲೀಸ್ ಠಾಣೆ ಮಿತಿಯೊಳಗಿನ ಯರಪ್ಪನಹಳ್ಳಿ ಮನೆಯಲ್ಲಿ

