ಮುಂಬೈ: ಭಯೋತ್ಪಾದಕ ಸಂಘಟನೆ ಜೊತೆಗೆ ನಂಟು ಹೊಂದಿದ್ದ ವ್ಯಕ್ತಿಯೋರ್ವನನ್ನು ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಅಧಿಕಾರಿಗಳು ಬಂಧಿಸಿದ್ದು, ಆರೋಪಿಯನ್ನು ಇಂದು ಪುಣೆಯ ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ.
Advertisement
ಬಂಧಿತ ಆರೋಪಿಯನ್ನು ಜುನೈದ್ ಎಂದು ಗುರುತಿಸಲಾಗಿದ್ದು, ಈತ ಬಹಳ ದಿನಗಳಿಂದ ಪುಣೆಯಲ್ಲಿ ನೆಲೆಸಿದ್ದನು. ಆರೋಪಿ ಲಷ್ಕರ್-ಎ-ತೈಬಾ (ಎಲ್‍ಇಟಿ) ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದನು ಮತ್ತು ಎಲ್‍ಇಟಿಗೆ ಭಯೋತ್ಪಾದಕರನ್ನು ಸೇರಿಸಿಕೊಳ್ಳುವುದರಲ್ಲಿ ಪ್ರಮುಖ ಪಾತ್ರ ವಹಿಸಿದ್ದನು. ಇದನ್ನೂ ಓದಿ: ಮನಿ ಡಬಲ್ ಮಾಡುತ್ತೇವೆ ಎಂದು ನಂಬಿಸಿ ಮೋಸ ಮಾಡುತ್ತಿದ್ದ ಖದೀಮರ ಬಂಧನ
Advertisement
Advertisement
ನಿಷೇಧಿತ ಲಷ್ಕರ್-ಎ-ತೊಯ್ಬಾ (ಎಲ್‍ಇಟಿ) ಸಂಘಟನೆಯ ಐವರು ‘ಹೈಬ್ರಿಡ್’ ಭಯೋತ್ಪಾದಕರನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಂಧಿಸಿದ ಬಳಿಕ ಈ ಬೆಳವಣಿಗೆ ನಡೆದಿದೆ. ಈ ಐವರು ಭಯೋತ್ಪಾದಕರಲ್ಲಿ ಮೂವರು ಕೆಲವು ದಿನಗಳ ಹಿಂದೆ ನಡೆದ ಬಾರಾಮುಲ್ಲಾ ಜಿಲ್ಲೆಯಲ್ಲಿನ ಸರಪಂಚ್ ಹತ್ಯೆಯಲ್ಲಿ ಶಾಮೀಲಾಗಿದ್ದಾರೆ. ಇವರಲ್ಲಿ ಇಬ್ಬರನ್ನು ಸೋಮವಾರ ಶ್ರೀನಗರದಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳೊಂದಿಗೆ ಪೊಲೀಸರು ಬಂಧಿಸಿದ್ದರೆ, ಉಳಿದ ಮೂವರನ್ನು ಬಾರಾಮುಲ್ಲಾದಲ್ಲಿ ಬಂಧಿಸಿದ್ದಾರೆ. ಇದನ್ನೂ ಓದಿ: ಕುತುಬ್ ಮಿನಾರ್ ಬಳಿ ಪೂಜೆ ಮಾಡುವ ಹಕ್ಕು ಯಾರಿಗೂ ಇಲ್ಲ – ASI ಖಡಕ್ ಉತ್ತರ